Asian Games 2023: ಜಪಾನ್‌ ಮಣಿಸಿ ಚಿನ್ನದ ಹಾರ ʻಹಾಕಿʼಕೊಂಡ ಭಾರತ – ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಗ್ರೀನ್‌ ಸಿಗ್ನಲ್‌!

Public TV
2 Min Read

ಹ್ಯಾಂಗ್‌ಝೌ: ಇಲ್ಲಿ ನಡೆದ ಏಷ್ಯನ್ ಗೇಮ್ಸ್‌ (Asian Games 2023) ಪುರುಷರ ಹಾಕಿ ಪಂದ್ಯದಲ್ಲಿ ಭಾರತ ತಂಡ ಚಿನ್ನ ಗೆದ್ದು ಸಾಧನೆ ಮಾಡಿದೆ. ಫೈನಲ್‌ ಪಂದ್ಯದಲ್ಲಿ ಜಪಾನ್ ತಂಡವನ್ನು 5-1 ಗೋಲುಗಳಿಂದ ಮಣಿಸಿದ ಭಾರತ, ಬಂಗಾರದ ಪದಕದೊಂದಿಗೆ 2024ರ ಪ್ಯಾರಿಸ್ ಒಲಿಂಪಿಕ್ಸ್‌ಗೆ (Olympics 2024) ಅರ್ಹತೆ ಪಡೆದುಕೊಂಡಿದೆ.

ಈ ಪಂದ್ಯದಲ್ಲಿ ಭಾರತ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್, 2 ಗೋಲು ದಾಖಲಿಸಿ ಮಿಂಚಿದ್ದಾರೆ. ಏಷ್ಯನ್‌ ಗೇಮ್ಸ್‌ನಲ್ಲಿ ಚಿನ್ನದ ಹೊಳಪು ತಂದ ಹಾಕಿ ಕ್ರೀಡಾಪಟುಗಳನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ. ಅಲ್ಲದೇ ಇದು ಭಾರತಕ್ಕೆ ಏಷ್ಯನ್‌ ಗೇಮ್ಸ್‌ನಲ್ಲಿ ಭಾರತಕ್ಕೆ ದಕ್ಕಿದ 22ನೇ ಪದಕವಾಗಿದೆ. ಇದನ್ನೂ ಓದಿ: ಕನ್ನಡ ಮಾತು ಕೇಳಿ ಇಂಗ್ಲಿಷ್‌ನಲ್ಲಿ ಉತ್ತರ ಕೊಟ್ಟ ರಚಿನ್‌ – ಬೆಂಗ್ಳೂರು ವಿಲ್ಸನ್‌ ಗಾರ್ಡನ್‌ ನೆನಪು ಹಂಚಿಕೊಂಡ ರವೀಂದ್ರ

ಈಗಾಗಲೇ ಒಟ್ಟು 354 ಪದಕಗಳನ್ನು (187 ಚಿನ್ನ, 104 ಬೆಳ್ಳಿ, 63 ಕಂಚು) ಗೆದ್ದಿರುವ ಚೀನಾ ಆರಂಭದಿಂದಲೂ ಮೊದಲ ಸ್ಥಾನದಲ್ಲೇ ಮುಂದುವರಿದಿದೆ. 169 ಪದಕಗಳನ್ನು (47 ಚಿನ್ನ, 57 ಬೆಳ್ಳಿ, 65 ಕಂಚು) ಗೆದ್ದಿರುವ ಜಪಾನ್‌ 2ನೇ ಸ್ಥಾನದಲ್ಲಿದೆ. ರಿಪಬ್ಲಿಕ್‌ ಕೊರಿಯಾ 169 ಪದಕಗಳನ್ನ (36 ಚಿನ್ನ, 49 ಬೆಳ್ಳಿ, 84 ಕಂಚು) ಗೆದ್ದು 3ನೇ ಸ್ಥಾನದಲ್ಲಿದೆ. ಆದ್ರೆ ಈವರೆಗೆ 22 ಚಿನ್ನ, 34 ಬೆಳ್ಳಿ ಹಾಗೂ 39 ಕಂಚು ಸೇರಿದಂತೆ ಒಟ್ಟು 95 ಪದಕಗಳನ್ನ ಬಾಚಿಕೊಂಡಿರುವ ಭಾರತ 4ನೇ ಸ್ಥಾನ ಭದ್ರಪಡಿಸಿಕೊಂಡಿದೆ. ಇದನ್ನೂ ಓದಿ: ಆಂಗ್ಲರ ವಿರುದ್ಧ ಶತಕ ಸಿಡಿಸಿ ಮೆರೆದಾಡಿದ ಬೆಂಗ್ಳೂರು ಮೂಲದ ರಚಿನ್‌ ರವೀಂದ್ರ ಯಾರು ಗೊತ್ತಾ?

ಅಲ್ಲದೇ ಈಗಾಗಲೇ ಕ್ರಿಕೆಟ್‌ನಲ್ಲಿ ಫೈನಲ್‌ ತಲುಪಿರುವ ಭಾರತಕ್ಕೆ ಮತ್ತೊಂದು ಚಿನ್ನ ಲಭಿಸುವ ವಿಶ್ವಾಸ ಹೊಂದಿದೆ. ಹಾಗಾಗಿ ಈ ಬಾರಿ ಏಷ್ಯನ್‌ ಗೇಮ್ಸ್‌ನಲ್ಲಿ 100 ಪದಕಗಳನ್ನು ಗೆದ್ದು ಹೊಸ ಇತಿಹಾಸ ಸೃಷ್ಟಿಸುವ ವಿಶ್ವಾಸದಲ್ಲಿದೆ. ಇದನ್ನೂ ಓದಿ: World Cup 2023: ಚೊಚ್ಚಲ ಪಂದ್ಯದಲ್ಲೇ ಮೋದಿ ಕ್ರಿಕೆಟ್‌ ಅಂಗಳದಲ್ಲಿ ಇತಿಹಾಸ ಬರೆದ ಇಂಗ್ಲೆಂಡ್‌

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್