Asian Games: ಮಹಿಳೆಯರ 60 ಕೆ.ಜಿ ವುಶು ಫೈನಲ್‍ನಲ್ಲಿ ಭಾರತಕ್ಕೆ ಬೆಳ್ಳಿ

By
1 Min Read

ಹ್ಯಾಂಗ್‍ಝೌ: ಏಷ್ಯನ್ ಗೇಮ್ಸ್ ನ (Asian Games) ಮಹಿಳೆಯರ 60 ಕೆ.ಜಿ ವುಶು (Wushu) ಫೈನಲ್‍ನಲ್ಲಿ ಭಾರತದ ರೋಶಿಬಿನಾ ದೇವಿ ನವೋರೆಮ್ ಅವರು ಬೆಳ್ಳಿ ಪದಕ ಗೆದ್ದಿದ್ದಾರೆ.

ರೋಶಿಬಿನಾ ದೇವಿ (Roshibina Devi) ಅವರು ಚೀನಾದ ಹೆವಿವೇಟ್ ವು ಕ್ಸಿಯಾವೊಯ್ (Wu Xiaowei of China) ವಿರುದ್ಧ 0-2 ಅಂತರದ ಸೋಲಿನ ನಂತರ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ. ಹಾಲಿ ಚಾಂಪಿಯನ್ ಆಗಿರುವ ವು ಕ್ಸಿಯಾವೊಯಿ ವಿರುದ್ಧ ರೋಶಿಬಿನಾ ಕಠಿಣ ಸೆಣಸಾಟ ನಡೆಸಿದರು. ಈ ಮೂಲಕ ಚೀನಾದ ಆಟಗಾರ್ತಿಗೆ ಬಲವಾದ ಆರಂಭವನ್ನು ಪಡೆಯಲು ಅವಕಾಶ ಮಾಡಿಕೊಟ್ಟರು.

ಎರಡು ಸುತ್ತುಗಳ ನಂತರ ತೀರ್ಪುಗಾರರು ವು ಕ್ಸಿಯಾವೊಯಿ ಅವರನ್ನು ವಿಜೇತರೆಂದು ಘೋಷಿಸಿದರು. ಮೊದಲ ಸುತ್ತಿನಲ್ಲಿ ಭಾರೀ ಪೈಪೋಟಿ ನಡೆಯಿತು. ರೋಶಿಬಿನಾ ಅವರನ್ನು ತಡೆಯಲು ವು ಕ್ಸಿಯಾವೊಯಿ ಪ್ರಾರಂಭಿಸಿದ್ದು, 1-0 ಮುನ್ನಡೆ ಸಾಧಿಸಿದರು. ಇನ್ನು ಎರಡನೇ ಸುತ್ತಿನಲ್ಲಿ ರೋಶಿಬಿನಾ ದೇವಿಯ ಮೇಲೆ ವು ಕ್ಸಿಯಾವೊಯಿ ದಾಳಿ ಮಾಡುವ ಮೂಲಕ ಚಿನ್ನ ಗಳಿಸಿದರು.

ಜಕಾರ್ತದಲ್ಲಿ ನಡೆದ 2018ರ ಆವೃತ್ತಿಯಲ್ಲಿ ಕಂಚು ಗೆದ್ದಿದ್ದ ರೋಶಿಬಿನಾ ಅವರು ಇದೀಗ ಬೆಳ್ಳಿಯ ಪದಕಕ್ಕೆ ಕೊರಳೊಡ್ಡಿದ್ದಾರೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್