ಟೀಂ ಇಂಡಿಯಾಕ್ಕೆ ಭರ್ಜರಿ ಕಂಬ್ಯಾಕ್‌ – ಐರ್ಲೆಂಡ್‌ T20 ಸರಣಿಗೆ ಬುಮ್ರಾ ನಾಯಕ, ರಿಂಕು ಸಿಂಗ್‌ಗೆ ಚಾನ್ಸ್‌

Public TV
3 Min Read

ಮುಂಬೈ: ಐರ್ಲೆಂಡ್‌ (Ireland) ವಿರುದ್ಧದ ಅಂತಾರಾಷ್ಟ್ರೀಯ ಟಿ20 ಸರಣಿಗೆ 15 ಸದಸ್ಯರ ಭಾರತ ತಂಡವನ್ನ ಬಿಸಿಸಿಐ ಸೋಮವಾರ ಪ್ರಕಟಿಸಿದ್ದು, ಗಾಯದಿಂದ ಸಂಪೂರ್ಣ ಗುಣಮುಖರಾಗಿರುವ ಸ್ಟಾರ್‌ ವೇಗಿ ಜಸ್ಪ್ರೀತ್‌ ಬುಮ್ರಾ (Jasprit Bumrah) ಅವರು ಸ್ಥಾನ ಪಡದಿದ್ದಾರೆ.

ಹಾರ್ದಿಕ್‌ ಪಾಂಡ್ಯ (Hardik Pandya) ಅನುಪಸ್ಥಿತಿಯಿಂದಾಗಿ ಬುಮ್ರಾ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ. ಆರಂಭಿಕ ಬ್ಯಾಟ್ಸ್‌ಮ್ಯಾನ್‌ ಋತುರಾಜ್‌ ಗಾಯಕ್ವಾಡ್‌ಗೆ (Ruturaj Gaikwad) ಉಪ ನಾಯಕನ ಜವಾಬ್ದಾರಿ ನೀಡಲಾಗಿದೆ. ಈ ಮೂಲಕ ಕಳೆದ ವರ್ಷ ಸೆಪ್ಟೆಂಬರ್‌ ತಿಂಗಳ ಬಳಿಕ ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದ ಟೀಂ ಇಂಡಿಯಾ ವೇಗಿ ಜಸ್ಪ್ರೀತ್‌ ಬುಮ್ರಾ ಕೊನೆಗೂ ಟೀಂ ಇಂಡಿಯಾಕ್ಕೆ ಭರ್ಜರಿ ಕಂಬ್ಯಾಕ್‌ ಮಾಡಿದ್ದಾರೆ.

ಆಗಸ್ಟ್‌ 18 ರಿಂದ 23ರ ವರೆಗೆ ನಡೆಯಲಿರುವ ಐರ್ಲೆಂಡ್‌ ಟಿ20 ಸರಣಿಗೆ (Ireland T20I Series) ಸೋಮವಾರ ಭಾರತ ತಂಡ ಪ್ರಕಟವಾಗಿದ್ದು ಬುಮ್ರಾಗೆ ನಾಯಕತ್ವದ ಹೊಣೆ ನೀಡಲಾಗಿದೆ. ಅಲ್ಲದೇ ಐರ್ಲೆಂಡ್‌ ಸರಣಿಗೆ ಬಹುತೇಕ ಹೊಸ ಯುವ ಆಟಗಾರರಿಗೆ ಟೀಂ ಇಂಡಿಯಾ ಮಣೆಹಾಕಿದೆ.

2023ರ ಐಪಿಎಲ್‌ ಟೂರ್ನಿಯಲ್ಲಿ ಗುರುತಿಸಿಕೊಂಡ ರಿಂಕು ಸಿಂಗ್‌, ತಿಲಕ್‌ ವರ್ಮಾ, ಯಶಸ್ವಿ ಜೈಸ್ವಾಲ್‌, ಜಿತೇಶ್‌ ಶರ್ಮಾ ಮೊದಲಾದವರಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ನೀಡಲಾಗಿದೆ. ಪ್ರಸಿದ್ಧ್‌ ಕೃಷ್ಣ ಕೂಡ ಕಂಬ್ಯಾಕ್‌ ಮಾಡಿದ್ದಾರೆ. ಇದನ್ನೂ ಓದಿ: ಧೋನಿ ವಿಮಾನದಲ್ಲಿ ಮಲಗಿದ್ದಾಗ ಕದ್ದು ಫೋಟೋ ಕ್ಲಿಕ್ – ಗಗನಸಖಿ ನಿರ್ಧಾರ ಸರಿಯೇ?

ಈ ಕುರಿತು ಮಾತನಾಡಿರುವ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ, ಬುಬ್ರಾ ಸಂಪೂರ್ಣ ಫಿಟ್‌ ಆಗಿದ್ದಾರೆ. ಅವರು ಮತ್ತೆ ಟೀಂ ಇಂಡಿಯಾಕ್ಕೆ ಮರಳುತ್ತಿರುವುದು ಖುಷಿ ತಂದಿದೆ. ಮುಂದಿನ ವಿಶ್ವಕಪ್‌ ತಂಡದಲ್ಲಿ ಖಂಡಿತ ಅವರಿಗೆ ಸ್ಥಾನವಿದೆ. ಏಕದಿನ ಏಷ್ಯಾಕಪ್‌ ಟೂರ್ನಿಯಲ್ಲೂ ಬುಮ್ರಾ ಪಾಲ್ಗೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.

ಬೆನ್ನಿನ ಗಾಯದ ಸಮಸ್ಯೆಯಿಂದ ಜಸ್ಪ್ರೀತ್‌ ಬುಮ್ರಾ ಅವರು 2022ರ ಸೆಪ್ಟಂಬರ್‌ ತಿಂಗಳಿನಿಂದ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರ ಉಳಿದಿದ್ದಾರೆ. ಆಸ್ಟ್ರೇಲಿಯಾ ವಿರುದ್ದ ತವರು ಟಿ20 ಸರಣಿಯಲ್ಲಿ ಕೊನೆಯ ಬಾರಿ ಬುಮ್ರಾ ಭಾರತ ತಂಡದಲ್ಲಿ ಕಾಣಿಸಿಕೊಂಡಿದ್ದರು. ಶಸ್ತ್ರ ಚಿಕಿತ್ಸೆಗೂ ಒಳಗಾಗಿದ್ದ ಅವರು, ಬೆಂಗಳೂರಿನ ನ್ಯಾಷನಲ್‌ ಕ್ರಿಕೆಟ್‌ ಅಕಾಡೆಮಿಯಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿದ್ದರು. ಮುಂದಿನ ತಿಂಗಳಲ್ಲಿ ಏಷ್ಯಾಕಪ್‌ ಹಾಗೂ ಇದಾದ ಬಳಿಕ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿ ನಡೆಯುವ ಹಿನ್ನೆಲೆಯಲ್ಲಿ ಬುಮ್ರಾ ಅವರಿಗೆ ತಮ್ಮದೇ ಆಟದ ಸಮಯ ಕಲ್ಪಿಸಲು ಬಿಸಿಸಿಐ ಐರ್ಲೆಂಡ್‌ ಪ್ರವಾಸಕ್ಕೆ ಕಳುಹಿಸುತ್ತಿದೆ.

ಟೀಂ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಕಳೆದ ವರ್ಷದ ಸಪ್ಟೆಂಬರ್ ತಿಂಗಳ ಬಳಿಕ ಗಾಯದ ಸಮಸ್ಯೆಯಿಂದಾಗಿ ಕ್ರಿಕೆಟ್‌ನಿಂದ ದೂರ ಉಳಿದಿದ್ದರು. 2022ರ T20 ಏಷ್ಯಾಕಪ್‌, T20 ವಿಶ್ವಕಪ್‌ ಹಾಗೂ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯ ಸೇರಿದಂತೆ ಪ್ರಮುಖ ಟೂರ್ನಿಗಳಲ್ಲಿ ಪಾಲ್ಗೊಳ್ಳುವ ಅವಕಾಶದಿಂದ ವಂಚಿತರಾಗಿದ್ದರು. ಇದನ್ನೂ ಓದಿ: 10 ಬೌಂಡರಿ, 13 ಸಿಕ್ಸರ್ – ನಿಕೋಲಸ್ ಪೂರನ್ ಸ್ಫೋಟಕ ಶತಕ; ವಿದೇಶದಲ್ಲೂ ಮುಂಬೈ ಚಾಂಪಿಯನ್

ಟಿ20ಗೆ ಭಾರತ ತಂಡ:
ಜಸ್ಪ್ರೀತ್ ಬುಮ್ರಾ (ನಾಯಕ), ಋತುರಾಜ್ ಗಾಯಕ್ವಾಡ್ (ಉಪನಾಯಕ), ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್‌), ಜಿತೇಶ್ ಶರ್ಮಾ (ವಿಕೆಟ್‌ ಕೀಪರ್‌), ಶಿವಂ ದುಬೆ, ವಾಷಿಂಗ್ಟನ್‌ ಸುಂದರ್, ಶಹಬಾಜ್ ಅಹ್ಮದ್, ರವಿ ಬಿಷ್ಣೋಯ್, ಪ್ರಸಿದ್ಧ್ ಕೃಷ್ಣ, ಅರ್ಷ್‌ದೀಪ್ ಸಿಂಗ್, ಮುಖೇಶ್ ಕುಮಾರ್, ಅವೇಶ್ ಖಾನ್.

ಪಂದ್ಯ ಎಲ್ಲಿ ಯಾವಾಗ?
ಮೊದಲ ಟಿ20 – ಆಗಸ್ಟ್‌ 18
2ನೇ ಟಿ20 – ಆಗಸ್ಟ್‌ 20
3ನೇ ಟಿ20 – ಆಗಸ್ಟ್‌ 23

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್