ಅಸ್ಸಾಂನಲ್ಲಿ ಭೀಕರ ಪ್ರವಾಹ – 14ಕ್ಕೇರಿದ ಸಾವಿನ ಸಂಖ್ಯೆ

Public TV
1 Min Read

ಗುವಾಹಟಿ: ಭೀಕರ ಪ್ರವಾಹ ಮತ್ತು ಭೂ ಕುಸಿತದಿಂದಾಗಿ ಇದುವರೆಗೆ ಅಸ್ಸಾಂನಲ್ಲಿ 14 ಮಂದಿ ಪ್ರಾಣ ಕಳೆದುಕೊಂಡಿದ್ದು, ಲಕ್ಷಾಂತರ ಜನರ ಬದುಕು ಅಸ್ತವ್ಯಸ್ತಗೊಂಡಿದೆ.

ಭಾರೀ ಮಳೆಯಿಂದಾಗಿ ಅಸ್ಸಾಂನಲ್ಲಿ ಪರಿಸ್ಥಿತಿ ಕೈಮೀರಿ ಹೋಗಿದ್ದು, ರಾಜ್ಯದ 29 ಜಿಲ್ಲೆಗಳು ಮಳೆಗಾಹುತಿಯಾಗಿವೆ. ಭೀಕರ ಪ್ರವಾಹದಿಂದಾಗಿ ಜನರ ಜೀವನ ಅಸ್ತವ್ಯಸ್ತಗೊಂಡಿದ್ದು, 7 ಲಕ್ಷಕ್ಕೂ ಹೆಚ್ಚು ಜನರು ಸಂತ್ರಸ್ತರಾಗಿದ್ದಾರೆ. ಇದುವರೆಗೆ 14 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದನ್ನೂ ಓದಿ: ಬಿಗಡಾಯಿಸಿತೇ ಬಿಡದಿ ನಿತ್ಯಾನಂದನ ಆರೋಗ್ಯ..?

ಈ ಕುರಿತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇದರ ನಡುವೆ ಗುವಾಹಟಿಯ ಪ್ರಾದೇಶಿಕ ಹವಾಮಾನ ಕೇಂದ್ರವು ಅಸ್ಸಾಂ ಮತ್ತು ಮೇಘಾಲಯದಲ್ಲಿ ಮೇ 21 ರವರೆಗೆ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ನೀಡಿದೆ. ಇದನ್ನೂ ಓದಿ: ವಾಹನ ಸವಾರರಿಗೆ ಕೇಂದ್ರ ಸರ್ಕಾರದಿಂದ ಗುಡ್‌ನ್ಯೂಸ್‌ – ಪೆಟ್ರೋಲ್‌, ಡೀಸೆಲ್‌ ಅಬಕಾರಿ ಸುಂಕ ಇಳಿಕೆ

ನೈರುತ್ಯ ಮಾರುತದಿಂದಾಗಿ ಬಂಗಾಳಕೊಲ್ಲಿಯಿಂದ ಒತ್ತಡ ಉಂಟಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಈಶಾನ್ಯ ಭಾಗದಲ್ಲಿ ಭಾರೀ ಮಳೆ ಮುಂದುವರಿಯುವ ನಿರೀಕ್ಷೆ ಇದೆ.

Share This Article
Leave a Comment

Leave a Reply

Your email address will not be published. Required fields are marked *