ಉಗ್ರನಾಗಲು ಐಸಿಸ್‌ ಸೇರಲು ಮುಂದಾಗಿದ್ದ ಐಐಟಿ ವಿದ್ಯಾರ್ಥಿ ವಶಕ್ಕೆ

Public TV
2 Min Read

ಗುವಾಹಟಿ: ಭಯೋತ್ಪಾದಕ ಗುಂಪು ಐಸಿಎಸ್‌ಗೆ (ISIS) ಸೇರಲು ಮುಂದಾಗಿದ್ದ ಐಐಟಿ ವಿದ್ಯಾರ್ಥಿಯನ್ನು (IIT Student) ಅಸ್ಸಾಂ ಪೊಲೀಸರು (Assam Police) ವಶಕ್ಕೆ ಪಡೆದಿದ್ದಾರೆ.

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ-ಗುವಾಹಟಿಯಲ್ಲಿ (IIT) ಜೈವಿಕ ತಂತ್ರಜ್ಞಾನ ಓದುತ್ತಿದ್ದ ಅಂತಿಮ ವರ್ಷದ ವಿದ್ಯಾರ್ಥಿ ತೌಸೀಫ್ ಅಲಿ ಫಾರೂಕಿಯನ್ನು (Tauseef Ali Farooqui) ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ

 ಸುದ್ದಿಗೋಷ್ಠಿ ನಡೆಸಿದ ವಿಶೇಷ ಕಾರ್ಯಪಡೆಯ (ಎಸ್‌ಟಿಎಫ್) ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕಲ್ಯಾಣ್ ಕುಮಾರ್ ಪಾಠಕ್ ಅವರು, ಐಸಿಸ್‌ಗೆ ಸೇರಿರುವುದಾಗಿ ಹೇಳಿದ ಐಐಟಿ-ಜಿ ವಿದ್ಯಾರ್ಥಿ ತೌಸೀಫ್ ಅಲಿ ಫಾರೂಕಿಯನ್ನು ಅಸ್ಸಾಂ ಎಸ್‌ಟಿಎಫ್‌ ಬಂಧಿಸಿದೆ. ಶನಿವಾರ ಬೆಳಗ್ಗೆಯಿಂದ ವಿದ್ಯಾರ್ಥಿ ನಾಪತ್ತೆಯಾಗಿದ್ದ. ಐಸಿಸ್ ಸೇರುವ ಬಗ್ಗೆ ಆತ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿದ್ದ. ನಾವು ಆತನನ್ನು ಅಸ್ಸಾಂನ ಕಾಮ್ರೂಪ್ ಜಿಲ್ಲೆಯ ಹಾಜೋದಲ್ಲಿ ಪತ್ತೆ ಹಚ್ಚಿದ್ದೇವೆ ಎಂದು ತಿಳಿಸಿದರು.

ತೌಸೀಫ್ ಕ್ಯಾಂಪಸ್‌ನಲ್ಲಿ ಹೆಚ್ಚು ಸ್ನೇಹಿತರನ್ನು ಹೊಂದಿರಲಿಲ್ಲ. ಹೆಚ್ಚಿನ ಸಮಯವನ್ನು ಆತ ಹಾಸ್ಟೆಲ್‌ನಲ್ಲೇ ಕಳೆಯುತ್ತಿದ್ದ. ಆತನ ಕೊಠಡಿಯಲ್ಲಿ ಐಸಿಸ್‌ ಧ್ವಜವನ್ನು ಹೋಲುವ ಕಪ್ಪು ಧ್ವಜ ಮತ್ತು ಧರ್ಮದ ಕೆಲವು ಪ್ರತಿಗಳು ಸಿಕ್ಕಿವೆ. ವಶಪಡಿಸಿಕೊಂಡ ವಸ್ತುಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯದ ಪರೀಕ್ಷೆಗೆ ಕಳುಹಿಸಿದ್ದೇವೆ ಎಂದು ಅವರು ಹೇಳಿದರು. ಇದನ್ನೂ ಓದಿ: ಕಾವೇರಿ ನೀರಿನಲ್ಲಿ ಕಾರು ವಾಶ್‌: ಮಾಲೀಕರಿಗೆ 5 ಸಾವಿರ ದಂಡ ವಿಧಿಸಿದ ಜಲಮಂಡಳಿ

ಸೋಮವಾರ ಲಿಕ್ಡಿಇನ್‌ನಲ್ಲಿ ತೌಸೀಫ್ ಅಲಿ ಬಹಿರಂಗ ಪತ್ರವನ್ನು ಬರೆದಿದ್ದ. ಭಾರತೀಯ ಸಂವಿಧಾನ, ಅದರ ಸಂಸ್ಥೆಗಳು ಮತ್ತು ಮುಂತಾದವುಗಳಿಂದ ನಾನು ಹೊರ ಬಂದಿದ್ದೇನೆ. ಇಸ್ಲಾಮಿಕ್ ಸ್ಟೇಟ್-ಖೊರಾಸನ್ ಪ್ರಾಂತ್ಯ ಎಂದು ಕರೆಯಲ್ಪಡುವ ಪ್ರದೇಶಕ್ಕೆ ನಾನು ವಲಸೆ ಹೋಗುತ್ತಿದ್ದೇನೆ. ಮುಸ್ಲಿಂ-ನಾಯಕತ್ವಕ್ಕೆ ನಾನು ಪ್ರತಿಜ್ಞೆ ಮಾಡಿದ ಮೊದಲ ಹೆಜ್ಜೆ ಇದಾಗಿದೆ. ಇದು ಮುಸ್ಲಿಮರು(ಅಲ್ಲಾಗೆ ಶರಣಾದವರು) ಮತ್ತು ಕಾಫೀರ್‌ (ನಾಸ್ತಿಕರು) ನಡುವಿನ ಹೋರಾಟ ಎಂದು ಬರೆದುಕೊಂಡಿದ್ದ.

 

ಅಸ್ಸಾಂ ಎಸ್‌ಟಿಎಫ್ ಇತ್ತೀಚೆಗೆ ಭಾರತದಲ್ಲಿ ಐಸಿಸ್‌ಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿತ್ತು. ಡೆಹ್ರಾಡೂನ್‌ನ ಚಕ್ರತಾ ಮೂಲದ ಹ್ಯಾರಿಸ್ ಭಾರತದಲ್ಲಿ ಐಸಿಸ್ ಮುಖ್ಯಸ್ಥನಾಗಿದ್ದರೆ ಪಾಣಿಪತ್‌ನ ಅನುರಾಗ್ ಸಿಂಗ್ ಅಲಿಯಾಸ್ ರೆಹಾನ್ ಇಸ್ಲಾಂಗೆ ಮತಾಂತರಗೊಂಡಿದ್ದ. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ನಾಲ್ವರು ಭಯೋತ್ಪಾದಕರ ಬಂಧನ – ಅಪಾರ ಶಸ್ತ್ರಾಸ್ತ್ರ ವಶ

 ಐಸಿಸ್‌ನ ನೇಮಕಾತಿ, ಭಯೋತ್ಪಾದಕ ನಿಧಿ ಮತ್ತು ಸುಧಾರಿತ ಸ್ಫೋಟಕ ಸಾಧನಗಳನ್ನು (ಐಇಡಿ) ಬಳಸಿ ಭಾರತದಾದ್ಯಂತ ದಾಳಿಗಳನ್ನು ನಡೆಸುವುದು ಸೇರಿದಂತೆ ವಿವಿಧ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಇಬ್ಬರೂ ತೊಡಗಿಸಿಕೊಂಡಿದ್ದರು. ಹೆಚ್ಚಿನ ತನಿಖೆಗಾಗಿ ಇಬ್ಬರನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ಹಸ್ತಾಂತರಿಸಲಾಗಿದೆ.

 

Share This Article