ಹೂ ಕಟ್ಟಲು ತೆರಳುತ್ತಿದ್ದ ಯುವಕನ ಮೇಲೆ 6 ಮಂದಿಯಿಂದ ಹಲ್ಲೆ

Public TV
1 Min Read

ಶಿವಮೊಗ್ಗ: ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಅನ್ಯಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ನಗರದ ನ್ಯೂಮಂಡ್ಲಿ ಬಡಾವಣೆಯಲ್ಲಿ ನಡೆದಿದೆ.

ಹಲ್ಲೆಗೊಳಗಾದ ಯುವಕನನ್ನು ಮಧು (21) ಎಂದು ಗುರುತಿಸಲಾಗಿದ್ದು, ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಮೇಲುಕೋಟೆ ಚೆಲುವನಾರಾಯಣನಿಗೆ ದೀವಟಿಗೆ ಸಲಾಂ ಆರತಿ ವಿವಾದ – ಸಂಧ್ಯಾರತಿ ಎಂದು ಕರೆಯುವಂತೆ ಪಟ್ಟು

ಹೂವಿನ ಮಾರ್ಕೆಟ್‌ನಲ್ಲಿ ಕೆಲಸ ಮಾಡಿಕೊಂಡಿರುವ ಮಧು ಗುರುವಾರ ಮಧ್ಯಾಹ್ನ ನ್ಯೂ ಮಂಡ್ಲಿಯ 1ನೇ ಕ್ರಾಸ್‌ನಲ್ಲಿ ಹೂವು ಕಟ್ಟಲು ತೆರಳುತ್ತಿದ್ದ. ಈ ವೇಳೆ ಬೈಕ್‌ನಲ್ಲಿ ಬಂದವರು ಹಾಗೂ ಸ್ಥಳದಲ್ಲಿದ್ದ ಯುವಕರು ಸೇರಿಕೊಂಡು ಹಲ್ಲೆ ನಡೆಸಿದ್ದಾರೆ. ಒಟ್ಟು ಆರು ಮಂದಿ ಯುವಕರು ವಿನಾಃಕಾರಣ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಹಲ್ಲೆಗೊಳಗಾದ ಯುವಕನಿಗೆ ಈ ಹಿಂದೆ ಕಿಡ್ನಿ ಆಪರೇಷನ್ ಆಗಿತ್ತು. ಆ ಜಾಗಕ್ಕೂ ಹಲ್ಲೆ ನಡೆಸಲಾಗಿದ್ದು, ಯುವಕ ತೀವ್ರ ನೋವಿನಿಂದ ಬಳಲುತ್ತಿದ್ದಾನೆ. ಯುವಕನಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಆರಗ ಜ್ಞಾನೇಂದ್ರರನ್ನು ಸಂಪುಟದಿಂದ ವಜಾಗೊಳಿಸಿ: ಲಕ್ಷ್ಮಿ ಹೆಬ್ಬಾಳ್ಕರ್ ಒತ್ತಾಯ

ಘಟನೆ ಕುರಿತು ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈಗಾಗಲೇ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ತಲೆಮರೆಸಿಕೊಂಡಿರುವ ಉಳಿದ ಇಬ್ಬರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *