ನವದೆಹಲಿ: ಆಕ್ಸಿಯಂ-4 ಮಿಷನ್ ಗಗನಯಾತ್ರಿ ಶುಭಾಂಶು ಶುಕ್ಲಾ (Shubhanshu Shukla) ಅವರು ಸೋಮವಾರ (ಇಂದು) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವ ಸಾಧ್ಯತೆಯಿದೆ.
ಅಂತಾರಾಷ್ಟ್ರೀಯ ಬಾಹ್ಯಕಾಶ ನಿಲ್ದಾಣಕ್ಕೆ ಭೇಟಿ ಕೊಟ್ಟ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಶುಕ್ಲಾ ಅವರು, ಭೂಮಿಗೆ ಮರಳಿದ ಬಳಿಕ ಮೊದಲ ಬಾರಿಗೆ ತಾಯ್ನಾಡು ಭಾರತಕ್ಕೆ (India) ಮರಳಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಮತ್ತೆ ಶಾಲೆಗಳಿಗೆ ಬಾಂಬ್ ಬೆದರಿಕೆ – ತೀವ್ರ ಶೋಧ
ಇಂದು ಪ್ರಧಾನಿ ಮೋದಿ ಅವರನ್ನು ಶುಭಾಂಶು ಶುಕ್ಲಾ ಅವರು ಭೇಟಿಯಾಗಿ ತಮ್ಮ ಅನುಭವ ಹಂಚಿಕೊಳ್ಳಲಿದ್ದಾರೆ. ಈ ಬಗ್ಗೆ ಬಿಜೆಪಿಯು ಲೋಕಸಭೆಯಲ್ಲಿ ಚರ್ಚೆಗೆ ಪ್ರಸ್ತಾವನೆ ಇಟ್ಟಿದ್ದಾರೆ. ಮೋದಿ ಭೇಟಿ ಬಳಿಕ ಶುಕ್ಲಾ ಅವರು ತಮ್ಮ ತವರು ಲಕ್ನೋಗೆ ಪ್ರಯಾಣಿಸುವ ಸಾಧ್ಯತೆ ಇದೆ. ಇದನ್ನೂ ಓದಿ: ಭಾರತ-ಪಾಕ್ ಪರಿಸ್ಥಿತಿಯನ್ನ ಅಮೆರಿಕ ಸೂಕ್ಷ್ಮವಾಗಿ ಗಮನಿಸ್ತಿದೆ – ಕದನ ವಿರಾಮ ಕುಸಿಯಬಹುದು: ಮಾರ್ಕೊ ರೂಬಿಯೊ
ಭಾನುವಾರ ಮಧ್ಯರಾತ್ರಿ 1:30ರ ವೇಳೆಗೆ ದೆಹಲಿಗೆ ಆಗಮಿಸಿದ ಶುಭಾಂಶು ಶುಕ್ಲಾಗೆ ಇಂದಿರಾ ಗಾಂಧಿ ಏರ್‌ಪೋರ್ಟ್ನಲ್ಲಿ ಅದ್ದೂರಿ ಸ್ವಾಗತ ಸಿಕ್ಕಿತ್ತು. ಕೇಂದ್ರ ಸಚಿವ ಜಿತೇಂದ್ರ ಸಿಂಗ್, ದೆಹಲಿ ಸಿಎಂ ರೇಖಾ ಗುಪ್ತಾ, ಶುಭಾಂಶು ಶುಕ್ಲಾರನ್ನ ಬರಮಾಡಿಕೊಂಡಿದ್ದರು.
ಆಕ್ಸಿಯಂ-4 ಮಿಷನ್‌ಗಾಗಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಐತಿಹಾಸಿಕ ಭೇಟಿ ನೀಡಿದ್ದ ಶುಕ್ಲಾ, 2027ರಲ್ಲಿ ಇಸ್ರೋ ತನ್ನ ಮೊದಲ ಮಾನವ ಬಾಹ್ಯಾಕಾಶ ಹಾರಾಟ ಎದುರು ನೋಡುತ್ತಿರುವುದರಿಂದ ತಮ್ಮ ಅನುಭವಗಳನ್ನು ಸ್ನೇಹಿತರು ಹಾಗೂ ಸಹೋದ್ಯೋಗಿಗಳೊಂದಿಗೆ ಹಂಚಿಕೊಳ್ಳಲಿದ್ದಾರೆ.
ಆಗಸ್ಟ್ 22-23 ರಂದು ನಡೆಯಲಿರುವ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆಯಲ್ಲಿ ಭಾಗವಹಿಸಲು ಅವರು ದೆಹಲಿಗೆ ಹಿಂದಿಗಲಿದ್ದಾರೆ ಎಂದು ಹೇಳಲಾಗಿದೆ.