ಭಾರತ ಮಾತೆಗೆ ವಾಜಪೇಯಿಯವರ ಸೇವೆ ನಮಗೆ ಸ್ಫೂರ್ತಿ: ಮೋದಿ

Public TV
1 Min Read

ನವದೆಹಲಿ: ಇಂದು ರಾಷ್ಟ್ರ ಕಂಡ ಅಪರೂಪದ ರಾಜಕಾರಣಿ, ಮಾಜಿ ಪ್ರಧಾನಿ, ಅಜಾತಶತ್ರು ದಿ. ಅಟಲ್ ಬಿಹಾರಿ ವಾಜಪೇಯಿ (Atal Bihari Vajpayee) ಅವರ 99ನೇ ಜನ್ಮದಿನ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಸೇರಿದಂತೆ ಹಲವು ಗಣ್ಯರು ಇಂದು ವಾಜಪೇಯಿ ಅವರನ್ನು ಸ್ಮರಿಸಿಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಸೇರಿದಂತೆ ಹಲವು ಗಣ್ಯರು ಅಟಲ್ ಜೀಯವರಿಗೆ ಗೌರವ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿ, ಮುರ್ಮು, ಧನ್ಕರ್ ಸೇರಿದಂತೆ ಹಲವರು ‘ಸದೈವ್ ಅಟಲ್’ ಸಮಾಧಿಗೆ ತೆರಳಿ ಪುಷ್ಪ ನಮನ ಸಲ್ಲಿಸಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಮೋದಿಯವರು ವಾಜಪೇಯಿ ಅವರ ವೀಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಅಲ್ಲದೇ ಭಾರತ ಮಾತೆಗೆ ವಾಜಪೇಯಿ ಅವರ ಸೇವೆ ಇಂದು ನಮಗೆ ಸ್ಪೂರ್ತಿಯಾಗಿದೆ ಎಂದು ಬಣ್ಣಿಸಿದ್ದಾರೆ. ಇದನ್ನೂ ಓದಿ: Ayodhya: ರಾಮಮಂದಿರ ಉದ್ಘಾಟನೆಗೂ ಮುನ್ನ ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ರೋಡ್‌ ಶೋ

ಎಕ್ಸ್ ನಲ್ಲೇನಿದೆ..?: ಅಟಲ್ ಜೀ ಅವರ ಜನ್ಮದಿನದಂದು ದೇಶದ ಎಲ್ಲಾ ಕುಟುಂಬ ಸದಸ್ಯರ ಪರವಾಗಿ ನಾನು ಅವರಿಗೆ ನಮಿಸುತ್ತೇನೆ. ಅಟಲ್ ಜೀ ಅವರು ತಮ್ಮ ಜೀವನದುದ್ದಕ್ಕೂ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ತಲ್ಲೀನರಾಗಿದ್ದರು. ಭಾರತ ಮಾತೆಗೆ ಅವರು ನೀಡಿರುವ ಸಮರ್ಪಣಾ ಸೇವೆಯೇ ಇಂದು ನಮಗೆಲ್ಲರಿಗೂ ಸ್ಫೂರ್ತಿಯಾಗಿದೆ ಎಂದು ಮೋದಿಯವರು ಬರೆದುಕೊಂಡಿದ್ದಾರೆ.

Share This Article