ಕೊಡಗಿನ ಕೋಟೆಬೆಟ್ಟದಲ್ಲಿ ಪ್ರವಾಸಿಗರ ಮೇಲೆ ಹಲ್ಲೆ – ಚಿನ್ನದ ಸರ ಎಗರಿಸಿ ಪರಾರಿ

Public TV
1 Min Read

ಮಡಿಕೇರಿ: ಕೋಟೆಬೆಟ್ಟ (Kotebetta) ಪ್ರವಾಸಕ್ಕೆಂದು ಆಗಮಿಸಿದ ಪ್ರವಾಸಿಗರ (Tourists) ಮೇಲೆ ಬೈಕಿನಲ್ಲಿ ಬಂದ ಇಬ್ಬರು ಹಲ್ಲೆ ಮಾಡಿ ದೌರ್ಜನ್ಯ ಎಸಗಿರುವ ಘಟನೆ ಕೊಡಗು (Kodagu) ಜಿಲ್ಲೆಯಲ್ಲಿ ನಡೆದಿದೆ.

ಮಕ್ಕಳು, ಮಹಿಳೆಯರು ಸೇರಿದಂತೆ ಪುತ್ತೂರಿನಿಂದ ಕುಟುಂಬವೊಂದು ಕೋಟೆಬೆಟ್ಟ ಪ್ರವಾಸಿ ತಾಣಕ್ಕೆ ಆಗಮಿಸಿದ ಸಂದರ್ಭ ಬೈಕಿನಲ್ಲಿ ಬಂದ ಇಬ್ಬರು ಪುಂಡರು ಹಲ್ಲೆ ನಡೆಸಿ, ಚಿನ್ನದ ಸರ ಎಗರಿಸಿ ಬೈಕನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ನನಗ್ಯಾಕೆ ಪ್ರಶ್ನೆ ಕೇಳ್ತೀರಿ? ಸೂರಜ್ ರೇವಣ್ಣ ಬಗ್ಗೆ ನಾನು ಪ್ರತಿಕ್ರಿಯಿಸುವ ಅಗತ್ಯ ಇಲ್ಲ: ಹೆಚ್‍ಡಿಕೆ

ಇಬ್ಬರು ಆರೋಪಿಗಳು ಮಾದಾಪುರ ಸಮೀಪದ ನಿವಾಸಿಗಳು ಎಂಬ ವಿಚಾರ ತಿಳಿದು ಬಂದಿದೆ. ದೌರ್ಜನ್ಯಕ್ಕೆ ಒಳಗಾದವರು ಮಾದಾಪುರ ಉಪ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ಸೋಮವಾರಪೇಟೆ ಪೊಲೀಸ್ ಠಾಣಾ ಮೆಟ್ಟಿಲೇರಿದೆ. ಇದನ್ನೂ ಓದಿ: ಛತ್ತೀಸ್‌ಗಢದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ – ಇಬ್ಬರು CRPF ಸಿಬ್ಬಂದಿ ಸಾವು

Share This Article