ದೆಹಲಿ ಚಲೋ ಪ್ರತಿಭಟನೆ ನಿಗ್ರಹಕ್ಕೆ ಯತ್ನ – ಪೊಲೀಸರ ವರ್ತನೆ ಖಂಡಿಸಿ ಶುಕ್ರವಾರ ದೇಶಾದ್ಯಂತ ರಸ್ತೆ ತಡೆ

Public TV
2 Min Read

ನವದೆಹಲಿ: ಬೆಂಬಲ ಬೆಲೆ ಕಾನೂನು ಜಾರಿ ಸೇರಿ ವಿವಿಧ ಬೇಡಿಕೆಗೆಗಳ ಈಡೇರಿಸುವಂತೆ ರೈತರು ದೆಹಲಿ ಚಲೋ (Delhi chalo) ಪ್ರತಿಭಟನೆ ಆರಂಭಿಸಿದ್ದು ರಾಷ್ಟ್ರ ರಾಜಧಾನಿ ತೆರಳದಂತೆ ತಡೆಯಲು ಹರ್ಯಾಣ ಪೊಲೀಸರು (Hariyana Police)  ರೈತರ (Farmers) ಮೇಲೆ ಅಶ್ರವಾಯು, ಜಲಫಿರಂಗಿ ಪ್ರಯೋಗ ಮಾಡಿದ್ದು, ಲಘು ಲಾಠಿ ಪ್ರಹಾರ ಕೂಡಾ ನಡೆಸಲಾಗಿದೆ. ಪೊಲೀಸರ ವರ್ತನೆ ಖಂಡಿಸಿ ದೇಶಾದ್ಯಾಂತ ಪ್ರತಿಭಟನೆ ನಡೆಸಲು ರೈತ ಸಂಘಟನೆಗಳು ತೀರ್ಮಾನ ಮಾಡಿವೆ.

ಈ ಬಗ್ಗೆ ಮಾಹಿತಿ ನೀಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್, ರೈತರ ಮೇಲೆ ನಡೆಸಿರುವ ಪೈಶಾಚಿಕ ದೌರ್ಜನ್ಯವನ್ನು ಖಂಡಿಸಲು ದೇಶದಾದ್ಯಂತ ಪ್ರತಿಭಟಿಸಿ ಗ್ರಾಮೀಣ ಮಟ್ಟದಲ್ಲಿ ರಸ್ತೆ ಬಂದ್ ಮಾಡಲು ತಿರ್ಮಾನಿಸಿದೆ. ಎಲ್ಲಾ ಸಂಘಟನೆಗಳು ಸ್ವಯಂ ಪ್ರೇರಿತವಾಗಿ ರಾಜ್ಯಾದ್ಯಂತ ಶುಕ್ರವಾರ (ಫೆ.16) ರಂದು ಬೆಳಿಗ್ಗೆ 11 ರಿಂದ 1 ಗಂಟೆವರೆಗೂ ರಸ್ತೆ ಬಂದ್ ಚಳುವಳಿ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ಮದ್ಯಪ್ರಿಯರಿಗೆ ಗುಡ್ ನ್ಯೂಸ್ – ಬೆಂಗಳೂರಲ್ಲಿ 3 ದಿನ ಅಲ್ಲ, 2 ದಿನ ಮಾತ್ರ ಮದ್ಯ ಮಾರಾಟ ಬಂದ್

ಇದೇ ವೇಳೆ ಮೋದಿ ಸರ್ಕಾರದ ಬಗ್ಗೆ ಮಾತನಾಡಿ, ರೈತರ ಸಂಘಟನೆಗಳ ದೆಹಲಿ ಚಲೋ ಮೆರವಣಿಗೆಯನ್ನು ತಡೆಯಲು ಪ್ರಭುತ್ವ ಅಧಿಕಾರದ ದುರ್ಬಳಕೆ ಮಾಡುತ್ತಿದೆ. ರೈತರ ಮೇಲೆ ಕೇಂದ್ರ ಸರ್ಕಾರ ನಡೆಸಿರುವ ಲಾಠಿ ಪ್ರಹಾರ, ರಬ್ಬರ್ ಬುಲೆಟ್, ಅಶ್ರುವಾಯು ಸಿಡಿತ ಮತ್ತು ಸಾಮೂಹಿಕ ಬಂಧನವನ್ನ ಖಂಡಿಸುತ್ತೇನೆ. ರೈತರ ಮೇಲೆ ಅಶ್ರುವಾಯು ಶೆಲ್‌ಗಳನ್ನು ಎಸೆಯಲು ಡ್ರೋನ್‌ಗಳನ್ನು ಬಳಸಿರುವುದು ಅತ್ಯಂತ ಅಘಾತಕಾರಿಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ರಾಜಸ್ಥಾನದಿಂದ ಸೋನಿಯಾ ಗಾಂಧಿ ರಾಜ್ಯಸಭೆಗೆ ಸ್ಪರ್ಧೆ

ರೈತರ ಶಾಂತಿಯುತ ಹೋರಾಟದ ಮೇಲೆ ದಾಳಿ ಮಾಡಲು ಪೊಲೀಸರು ಮತ್ತು ಸಶಸ್ತç ಭದ್ರತಾ ಪಡೆಗಳನ್ನು ಛೂ ಬಿಟ್ಟಿರುವುದು ಸರ್ಕಾರ ರೈತರ ಆಂದೋಲನ ದಮನ ಮಾಡುವ ಕಾರ್ಯವಾಗಿದೆ. ಇಂತಹ ಕೆಟ್ಟ ನೀತಿಗಳಿಂದ ಸರ್ಕಾರ ಜನರ ವಿಶ್ವಾಸವನ್ನು ಕಳೆದುಕೊಂಡಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕು ಪ್ರತಿಯೊಬ್ಬ ಪ್ರಜೆಗೂ ಇದೆ. ಪ್ರತಿಯೊಂದು ವರ್ಗದ ಜನರ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವ ಮತ್ತು ಅವರ ಜೀವನೋಪಾಯವನ್ನು ರಕ್ಷಿಸುವ ನಿರ್ದಿಷ್ಟ ಬೇಡಿಕೆಗಳನ್ನು ಪರಿಹರಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ. ರೈತರ ಜ್ವಲಂತ ಸಮಸ್ಯೆಗಳನ್ನು ಬಗೆ ಹರಿಸಬೇಕಾದ ಸರ್ಕಾರ ಹೋರಾಟ ನಿರತ ರೈತರನ್ನ ದೇಶದ ಶತ್ರುಗಳಂತೆ ಬಿಂಬಿಸುತ್ತಿರುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಪುಲ್ವಾಮಾ ದಾಳಿಗೆ 5 ವರ್ಷ: 2019ರ ಫೆ.14 ರಂದು ನಡೆದಿದ್ದು ಏನು?

Share This Article