ಆ.23 ಇನ್ಮುಂದೆ ರಾಷ್ಟ್ರೀಯ ಬಾಹ್ಯಾಕಾಶ ದಿನ: ಮೋದಿ ಘೋಷಣೆ

Public TV
1 Min Read

ಬೆಂಗಳೂರು: ಚಂದ್ರಯಾನ-3 (Chandrayaan-3) ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿದ ದಿನದ ನೆನಪಿಗಾಗಿ ಆ.23ನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಆಚರಿಸಲಾಗುವುದು ಎಂದು ಪ್ರಧಾನಿ ಮೋದಿ (Narendra Modi) ಘೋಷಿಸಿದ್ದಾರೆ.

ಬೆಂಗಳೂರಿನಲ್ಲಿ (Bengaluru) ಚಂದ್ರಯಾನ-3 ರ ಯಶಸ್ಸಿಗೆ ಕಾರಣರಾದ ಇಸ್ರೋ (ISRO) ವಿಜ್ಞಾನಿಗಳನ್ನು ಅಭಿನಂದಿಸಿ ಮಾತನಾಡಿದರು. ಇದೇ ವೇಳೆ ಮತ್ತೆರಡು ವಿಶೇಷ ಘೋಷಣೆಗಳನ್ನು ಮಾಡಿದ್ದಾರೆ. ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿದ ಜಾಗಕ್ಕೆ ಶಿವಶಕ್ತಿ ಎಂದು ಹಾಗೂ ಚಂದ್ರಯಾನ -2 ಪತನವಾದ ಜಾಗಕ್ಕೆ ತಿರಂಗ ಎಂಬ ಹೆಸರನ್ನು ಮೋದಿ ಇಟ್ಟಿದ್ದಾರೆ. ಇದನ್ನೂ ಓದಿ: ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿದ ಸ್ಥಳ ‘ಶಿವಶಕ್ತಿ’: ಹೆಸರಿಟ್ಟ ಮೋದಿ

ಚಂದ್ರಯಾನ-3ರ ಯಶಸ್ಸಿನಿಂದಾಗಿ ಸ್ಥಳೀಯ ಉತ್ಪಾದನೆಗಳ ಶಕ್ತಿ ಪ್ರದರ್ಶನವಾಗಿದೆ. ಇದರಿಂದ ಮೇಕ್ ಇನ್ ಇಂಡಿಯಾ ಕಾರ್ಯಕ್ರಮವನ್ನು ಉತ್ತೇಜಿಸಲು ಸಹಕಾರಿಯಾಗಿದೆ. ಅಲ್ಲದೇ ಮಹಿಳಾ ವಿಜ್ಞಾನಿಗಳು ಚಂದ್ರಯಾನ-3 ರಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ಚಂದ್ರಯಾನ-3 ಮಿಷನ್‍ನ ಯಶಸ್ಸಿನ ಬಳಿಕ ಖಾಸಗಿ ಬಾಹ್ಯಾಕಾಶ ಉಡಾವಣೆಗಳು ಮತ್ತು ಸಂಬಂಧಿತ ಉಪಗ್ರಹ ಆಧಾರಿತ ವ್ಯವಹಾರಗಳಲ್ಲಿ ಹೂಡಿಕೆಯನ್ನು ಉತ್ತೇಜಿಸಲಿದೆ. ಈ ಮೂಲಕ ಕೇಂದ್ರದ ಮಹತ್ವಾಕಾಂಕ್ಷೆಯ ಮೇಕ್ ಇನ್ ಇಂಡಿಯಾ ಕಾರ್ಯಕ್ರಮವನ್ನು ಉತ್ತೇಜಿಸುವ ಸಾಧ್ಯತೆಯಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಚಂದ್ರಯಾನ-3 ಸಕ್ಸಸ್‌; ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಬೆಂಗಳೂರಿಗೆ ಮೋದಿ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್