ಹೊರದೇಶದಲ್ಲೂ UI ಹವಾ: ಉಪ್ಪಿ ಸಿನಿಮಾದ ಟಿಕೆಟ್ ಸೋಲ್ಡ್ ಔಟ್

By
2 Min Read

ರಿಯಲ್ ಸ್ಟಾರ್ ಉಪೇಂದ್ರ (Upendra) ನಟಿಸಿ, ನಿರ್ದೇಶನ ಮಾಡುತ್ತಿರುವ UI ಚಿತ್ರ ಹೊರದೇಶದಲ್ಲೂ ಹವಾ ಜೋರಾಗಿದೆ. ರಿಲೀಸ್‌ಗೂ ಮೊದಲೇ ಮುಂಗಡವಾಗಿ ಚಿತ್ರದ ಟಿಕೆಟ್‌ಗಳು ಸೋಲ್ಡ್ ಔಟ್ ಆಗ್ತಿದೆ. ಇದನ್ನೂ ಓದಿ:‘ಪುಷ್ಪ 2’ ಸಕ್ಸಸ್ ಬಳಿಕ ಬಿಗ್ ಚಾನ್ಸ್- ಪ್ರಭಾಸ್ ಸಿನಿಮಾದಲ್ಲಿ ತಾರಕ್ ಪೊನ್ನಪ್ಪ

‘ಯುಐ’ ಚಿತ್ರ ಇದೇ ಡಿ.20ರಂದು ಬಹುಭಾಷೆಗಳಲ್ಲಿ ವರ್ಲ್ಡ್ ವೈಡ್ ರಿಲೀಸ್ ಆಗುತ್ತಿದೆ. ಅದರಲ್ಲೂ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ನಲ್ಲಿ ಚಿತ್ರಮಂದಿರಗಳಲ್ಲಿ ಟಿಕೆಟ್ ಸೋಲ್ಡ್ ಆಗಿದೆ. ಮುಂಗಡವಾಗಿ ಟಿಕೆಟ್ ಬುಕ್ ಆಗುವ ಮೂಲಕ ಹೌಸ್‌ಫುಲ್ ಆಗಿದೆ.

ಇನ್ನೂ ನಿನ್ನೆಯಷ್ಟೇ, ಬಾಲಿವುಡ್ ನಟ ಆಮೀರ್ ಖಾನ್ ಅವರು ಉಪೇಂದ್ರಗೆ ನಾನು ಅಭಿಮಾನಿ ಎಂದು ಹಾಡಿ ಹೊಗಳಿದರು. ‘ಯುಐ’ ನೋಡಿ ಸಿನಿಮಾವನ್ನು ಬೆಂಬಲಿಸಿ ಎಂದು ನಟ ಮನವಿ ಮಾಡಿದರು. ಇದನ್ನೂ ಓದಿ:ಬಹುಕಾಲದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೀರ್ತಿ ಸುರೇಶ್

 

View this post on Instagram

 

A post shared by Upendra Kumar (@nimmaupendra)

ಅಂದಹಾಗೆ, UI ಯುಗದಲ್ಲಿ UI ಮ್ಯಾಜಿಕ್, ಟ್ರೈಲರ್‌ನಲ್ಲಿ ಮಸ್ತ್ ಆಗಿ ಮೂಡಿ ಬಂದಿದೆ. ಪ್ರೇಕ್ಷಕರ ಬುದ್ದಿವಂತಿಕೆಗೆ UI ವಾರ್ನರ್ (ಟ್ರೈಲರ್) ಸವಾಲು ಹಾಕುವಂತಿದೆ. ಹಸಿವಿಗಾಗಿ ಜನರ ಹೊಡೆದಾಟ, ರಕ್ತಪಾತ ಇದು UI ಟ್ರೈಲರ್‌ನಲ್ಲಿ ರೋಚಕವಾಗಿ ತೋರಿಸಲಾಗಿದೆ. ಜಾತಿ, ಅಧಿಕಾರ ಭಾರತಕ್ಕೆ ಮಾರಕವಾಗುತ್ತ? ಎಂಬ ಜಿದ್ದಾ ಜಿದ್ದಿಯ ನಡುವೆ ಧಿಕ್ಕಾರಕ್ಕಿಂತ ಅಧಿಕಾರಕ್ಕೆ ಬೆಲೆ ಜಾಸ್ತಿ ಎಂದು ಖಡಕ್ ಆಗಿ ಉಪೇಂದ್ರ ಡೈಲಾಗ್ ಹೊಡೆದಿದ್ದಾರೆ. ಗನ್ ಹಿಡಿದು ಜನಗಳ ಕಡೆ ಶೂಟ್ ಮಾಡುತ್ತ ಖಡಕ್ ಲುಕ್‌ನಲ್ಲಿ ಉಪ್ಪಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ UI ಸಿನಿಮಾ ಕಥೆಯ ಬಗ್ಗೆ ಫ್ಯಾನ್ಸ್‌ಗೆ ಕೌತುಕ ಮೂಡುವಂತೆ ಮಾಡಿದ್ದಾರೆ.

ಇನ್ನೂ 2040 ಭವಿಷ್ಯದ ಅಸಲಿ ಕಥೆ ಹೇಳಲು ‘ಯುಐ’ ಸಿನಿಮಾ ಮೂಲಕ ಉಪೇಂದ್ರ ಸಜ್ಜಾಗಿದ್ದಾರೆ. ಡಿ.20ಕ್ಕೆ ರಿಲೀಸ್ ಆಗಲಿರುವ ಈ ಸಿನಿಮಾದಲ್ಲಿ ಉಪೇಂದ್ರಗೆ ಕೊಡಗಿನ ಕುವರಿ ರೀಷ್ಮಾ ನಾಣಯ್ಯ ಜೋಡಿಯಾಗಿದ್ದಾರೆ. ಲಹರಿ ಫಿಲಂಸ್ ಹಾಗೂ ವೀನಸ್ ಎಂಟರ್‌ಟೈನರ್ಸ್ ಮೂಲಕ ಮನೋಹರ್ ನಾಯ್ಡು ಹಾಗೂ ಕೆ.ಪಿ ಶ್ರೀಕಾಂತ್ ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದಾರೆ.

Share This Article