ಹಾಡಹಗಲೇ ಚಾಕುವಿನಿಂದ ಇರಿದು ಆಟೋ ಚಾಲಕನ ಕೊಲೆ

Public TV
1 Min Read

-ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ರಾಯಚೂರು: ಹಾಡಹಗಲೇ ಆಟೋ ಚಾಲಕನನ್ನು ಚಾಕುವಿನಿಂದ ಇರಿದು ವ್ಯಕ್ತಿಯೋರ್ವ ಕೊಲೆಗೈದಿರುವ ಭೀಕರ ಘಟನೆ ಜಿಲ್ಲೆಯ ತೀನ್ ಕಂದಿಲ್ ವೃತ್ತದ ಬಳಿ ನಡೆದಿದೆ.

ಮೃತ ವ್ಯಕ್ತಿಯನ್ನು 28 ವರ್ಷದ ಸಮೀರ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಅಮನ್ ಎಂದು ಗುರುತಿಸಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ.ಇದನ್ನೂ ಓದಿ:ನಿಜ್ಜರ್‌ ಹತ್ಯೆ ಕೇಸ್‌ ಸಂಘರ್ಷ – ಭಾರತ-ಕೆನಡಾ ನಡುವೆ ರಾಜತಾಂತ್ರಿಕ ಸಮರ; ಏನಿದು ಬಿಕ್ಕಟ್ಟು?

ಹಳೆ ವೈಷಮ್ಯ ಹಿನ್ನೆಲೆ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿ ಚಾಕು ಇರಿದಿರುವುದಾಗಿ ತಿಳಿದು ಬಂದಿದ್ದು, ಆರೋಪಿ ಆಟೋ ಚಾಲಕನೊಂದಿಗೆ ಜಗಳ ಮಾಡಿ ಮನಬಂದಂತೆ ಚಾಕುವಿನಿಂದ ಇರಿದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆಟೋದಲ್ಲಿ ಪರಾರಿಯಾಗಿದ್ದ ಆರೋಪಿ ಅಮನ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಸದ್ಯ ಸದರ ಬಜಾರ್ ಪೊಲೀಸ್ ಠಾಣೆಯಲ್ಲಿ (Sadar Bazar Police Station) ಈ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಜಾರ್ಖಂಡ್‌ನಲ್ಲಿ ಎರಡು ಹಂತದಲ್ಲಿ ಚುನಾವಣೆ – ನ.23 ರಂದು ಮತ ಎಣಿಕೆ

Share This Article