ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್

Public TV
1 Min Read

ಲಕ್ನೋ/ಅಯೋಧ್ಯೆ: ರಾಮಜನ್ಮಭೂಮಿ (Ram Janmabhoomi) -ಬಾಬ್ರಿ ಮಸೀದಿ (Babri Masjid) ವಿವಾದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ (Supreme Court) ತೀರ್ಪಿನ ಅನುಸಾರ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣ ಯೋಜನೆಗೆ ಅಯೋಧ್ಯಾ ಅಭಿವೃದ್ಧಿ ಪ್ರಾಧಿಕಾರ (ADA) ಅಂತಿಮ ಅನುಮೋದನೆ ನೀಡಿದೆ.

ಸುಪ್ರೀಂ ತೀರ್ಪಿನ ಅನುಸಾರ ಮಸೀದಿ ನಿರ್ಮಾಣ ಮಾಡಲು ಉತ್ತರ ಪ್ರದೇಶ ಸರ್ಕಾರವು (UP Government) 5 ಎಕರೆ ಭೂಮಿ ಮಂಜೂರು ಮಾಡಿದೆ. `ಮಸೀದಿ ನಿರ್ಮಾಣ ಯೋಜನೆಗೆ ಅನುಮೋದನೆ ನೀಡಲಾಗಿದೆ. ಒಂದೆರಡು ದಿನಗಳಲ್ಲಿ ಅನುಮೋದನೆ ಪಡೆದ ನಕ್ಷೆಯನ್ನು ಐಐಸಿಎಫ್ ಪ್ರತಿನಿಧಿಗಳಿಗೆ ನೀಡಲಾಗುವುದು’ ಎಂದು ಎಡಿಎನ ಹೆಚ್ಚುವರಿ ಆಯುಕ್ತ ಗೌರವ್ ದಯಾಳ್ ತಿಳಿಸಿದ್ದಾರೆ. ಇದನ್ನೂ ಓದಿ: 

Babri Masjid

ಮಸೀದಿಯ ಜೊತೆಗೆ ಆಸ್ಪತ್ರೆ, ಸಂಶೋಧನಾ ಸಂಸ್ಥೆ, ಸಮುದಾಯ ಅಡುಗೆಮನೆ, ಗ್ರಂಥಾಲಯ ನಿರ್ಮಾಣ ಮಾಡಲು ಇಂಡೋ-ಇಸ್ಲಾಮಿಕ್ ಸಾಂಸ್ಕೃತಿಕ ಫೌಂಡೇಷನ್ (IICF) ನಿರ್ಧರಿಸಿದೆ. ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರವು (ಎಡಿಎ) ಅನುಮೋದನೆ ನೀಡುವುದು ವಿಳಂಬ ಮಾಡಿದ್ದರಿಂದಾಗಿ ನಿರ್ಮಾಣ ಚಟುವಟಿಕೆ ಇದುವರೆಗೂ ಆರಂಭವಾಗಿರಲಿಲ್ಲ.

ಐಐಸಿಎಫ್ ಕಾರ್ಯದರ್ಶಿ ಅತ್ತಾರ್ ಹುಸೇನ್ ಅವರು, ಮಂಜೂರಾತಿಯ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಮಸೀದಿ ನಿರ್ಮಾಣ ಯೋಜನೆಗೆ ಅಂತಿಮರೂಪ ನೀಡಲು ಟ್ರಸ್ಟ್ ಸಭೆ ನಡೆಸಲಿದೆ ಎಂದು ತಿಳಿಸಿದ್ದಾರೆ.

Babri Masjid

ಮಸೀದಿ ನಿರ್ಮಿಸಲು ಜನವರಿ 26, 2021ರಂದು ಶಂಕುಸ್ಥಾಪನೆ ಮಾಡಲಾಗಿತ್ತು. ಭಾರತದ ಸಂವಿಧಾನವು ಜಾರಿಗೆ ಬಂದ ದಿನವಾದ ಕಾರಣ ಆ ದಿನದಂದೇ ಶಂಕುಸ್ಥಾಪನೆ ನೆರವೇರಿಸಲಾಗಿತ್ತು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬಾಬ್ರಿ ಮಸೀದಿ ವಿವಾದ: ಅಡ್ವಾಣಿ ಸೇರಿ ಹಲವು ನಾಯಕರನ್ನು ಖುಲಾಸೆಗೊಳಿಸಿದ್ದ ಅರ್ಜಿ ಆ.1ಕ್ಕೆ ವಿಚಾರಣೆ

ಸುಪ್ರೀಂ ಕೋರ್ಟ್ ತೀರ್ಪು ಏನು?
ಸುಪ್ರೀಂ ಕೋರ್ಟ್ ತನ್ನ ಅಯೋಧ್ಯೆ ತೀರ್ಪಿನಲ್ಲಿ 2019ರ ನವೆಂಬರ್ 2019 ರಂದು ರಾಮಜನ್ಮಭೂಮಿಯನ್ನು ಸ್ವಾಧೀನಪಡಿಸಿಕೊಂಡಿತ್ತು. ಆಕ್ಟ್ 1993 ಅಥವಾ ಉತ್ತರ ಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್ ಅಯೋಧ್ಯೆಯ ಯಾವುದೇ ಸೂಕ್ತ ಪ್ರಮುಖ ಸ್ಥಳದಲ್ಲಿ 5 ಎಕರೆ ಭೂಮಿಯನ್ನು ಮಂಜೂರು ಮಾಡಲು ಆದೇಶಿಸಲಾಗಿತ್ತು. ಅದರಂತೆ ಇದೀಗ ಧನ್ನಿಪುರದಲ್ಲಿ ಸರ್ಕಾರ ನೀಡಿದ 5 ಎಕರೆ ಕೃಷಿ ಭೂಮಿಯನ್ನು ಭೂ ಬಳಕೆ ಮಾಡುವ ಕುರಿತು ಪ್ರಾಧಿಕಾರ ಅನುಮೋದನೆ ನೀಡಿದೆ ಎನ್ನಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *