ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣ

Public TV
2 Min Read

– ನ.25 ರಂದು ಪ್ರಧಾನಿ ಮೋದಿ ಧ್ವಜಾರೋಹಣ

ಲಕ್ನೋ: ಅಯೋಧ್ಯೆಯಲ್ಲಿ (Ayodhya) ನಿರ್ಮಾಣವಾಗುತ್ತಿದ್ದ ಶ್ರೀರಾಮ ಮಂದಿರ (Shri Ram Mandir) ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಮುಖ್ಯ ಮಂದಿರ ಮತ್ತು ಆರು ಇತರೆ ಮಂದಿರಗಳ ನಿರ್ಮಾಣ ಕಾರ್ಯ ಪೂರ್ಣವಾಗಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತಿಳಿಸಿದೆ.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿರುವ ಟ್ರಸ್ಟ್, ಮಂದಿರದ ನಿರ್ಮಾಣ ಕಾರ್ಯ ಮುಗಿದಿದೆ ಎಂದು ಪ್ರಭು ಶ್ರೀರಾಮನ ಭಕ್ತರಿಗೆ ತಿಳಿಸಲು ಸಂತೋಷವಾಗುತ್ತದೆ. ಮುಖ್ಯಮಂದಿರದ ಜೊತೆಗೆ ಮಹಾದೇವ, ಗಣೇಶ, ಹನುಮಾನ್, ಸೂರ್ಯದೇವ, ಮಾ ಭಗವತಿ ಮತ್ತು ಮಾ ಅನ್ನಪೂರ್ಣ ಜೊತೆಗೆ ಶೇಷಾವತಾರ ಮಂದಿರವೂ ನಿರ್ಮಾಣ ಕಾರ್ಯ ಪೂರ್ಣವಾಗಿದೆ. ಈ ಮಂದಿರಗಳ ಮೇಲೆ ಧ್ವಜಗಳು ಮತ್ತು ಕಲಶವನ್ನು ಸ್ಥಾಪಿಸಲಾಗಿದೆ.

ಹೆಚ್ಚುವರಿಯಾಗಿ, ಋಷಿ ವಾಲ್ಮೀಕಿ, ಋಷಿ ವಶಿಷ್ಠ, ಋಷಿ ವಿಶ್ವಾಮಿತ್ರ, ಋಷಿ ಅಗಸ್ತ್ಯ, ನಿಷಾದರಾಜಅಯೋ, ಶಬರಿ ಮತ್ತು ದೇವಿ ಅಹಲ್ಯರಿಗೆ ಸಮರ್ಪಿತವಾದ ಏಳು ಮಂಟಪಗಳು ಸಹ ಪೂರ್ಣಗೊಂಡಿವೆ. ಸಂತ ತುಳಸಿದಾಸ ಮಂದಿರವೂ ಪೂರ್ಣಗೊಂಡಿದೆ. ಜಟಾಯು ಮತ್ತು ಅಳಿಲಿನ ಪ್ರತಿಮೆಗಳನ್ನು ನಿರ್ಮಾಣ ಮಾಡಲಾಗಿದೆ.

ಭಕ್ತರ ಅನುಕೂಲತೆ ಮತ್ತು ವ್ಯವಸ್ಥೆಗಳಿಗೆ ಸಂಬಂಧಿಸಿದ ಎಲ್ಲಾ ಕಾರ್ಯಗಳನ್ನು ಸಂಪೂರ್ಣವಾಗಿ ಪೂರ್ಣಗೊಳಿಸಲಾಗಿದೆ. ರಸ್ತೆ ನಿರ್ಮಾಣ ಮತ್ತು ಕಲ್ಲಿನ ನೆಲಹಾಸು ಹಾಕುವ ಕೆಲಸವನ್ನು ಎಲ್&ಟಿ ಕಂಪನಿ ನಿರ್ವಹಿಸುತ್ತಿದೆ. ಅಲ್ಲದೇ ಮಂದಿರದ ಸುತ್ತ ಹಸಿರಿನಿಂದ ಕಂಗೊಳಿಸುವಂತೆ ಮಾಡುವ ಮತ್ತು 10 ಎಕ್ರೆಗೂ ಹೆಚ್ಚು ವಿಸ್ತೀರ್ಣದ ‘ಪಂಚವಟಿ’ಯ (ಶ್ರೀರಾಮ, ಸೀತೆ, ಲಕ್ಷ್ಮಣ ವನವಾಸದ ಸಮಯದಲ್ಲಿ ನೆಲೆಸಿದ್ದ ಜಾಗದ ಹೆಸರು) ಅಭಿವೃದ್ಧಿ ಕಾರ್ಯವು ತ್ವರಿತಗತಿಯಲ್ಲಿ ಸಾಗುತ್ತಿದೆ. 3.5 ಕಿ.ಮೀ ಉದ್ದದ ತಡೆಗೋಡೆ, ಟ್ರಸ್ಟ್ ಕಚೇರಿ, ಅತಿಥಿ ಗೃಹ, ಸಭಾಂಗಣ ಮುಂತಾದ ಕಾಮಗಾರಿಗಳು ಮಾತ್ರ ನಡೆಯುತ್ತಿವೆ ಎಂದು ಮಾಹಿತಿ ನೀಡಿದೆ.

ನವೆಂಬರ್ 25 ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಯೋಧ್ಯೆಗೆ ಭೇಟಿ ನೀಡಲಿದ್ದು, ಶ್ರೀರಾಮ ಮಂದಿರದ ಧ್ವಜಾರೋಹಣ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಮಾಜದ ವಿವಿಧ ವರ್ಗಗಳನ್ನು ಪ್ರತಿನಿಧಿಸುವ 6,000 ದಿಂದ 8,000 ರಿಂದ ಆಹ್ವಾನಿತರು ಭಾಗವಹಿಸಲಿದ್ದಾರೆ. ರಾಮ ಪರಿವಾರವನ್ನು ದೇವಾಲಯದ ಮೊದಲ ಮಹಡಿಯಲ್ಲಿ ನಿರ್ಮಿಸಿದೆ. ಪ್ರಧಾನಿ ಮೋದಿ ಅವರು ರಾಮ ಪರಿವಾರದಲ್ಲಿ ಆರತಿ ನೆರವೇರಿಸಿ, ದೇವಾಲಯದ ಧ್ವಜಾರೋಹಣ ಮಾಡಲಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷ ನೃಪೇಂದ್ರ ಮಿಶ್ರಾ ತಿಳಿಸಿದ್ದಾರೆ.

Share This Article