ಹಿಜಾಬ್ ವಿವಾದದ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿಲ್ಲ: ಬಿ.ಸಿ ಪಾಟೀಲ್

Public TV
1 Min Read

ಚಿತ್ರದುರ್ಗ: ಹಿಜಾಬ್ ವಿವಾದದ ನಿರ್ವಹಣೆಯಲ್ಲಿ ಬಿಜೆಪಿ ಸರ್ಕಾರವು ವಿಫಲವಾಗಿಲ್ಲ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದರು.

ಕಾಂಗ್ರೆಸ್, ಜೆಡಿಎಸ್ ಮುಖಂಡರು ಹಿಜಾಬ್ ವಿವಾದದ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರವು ವಿಫಲವಾಗಿದೆ ಎಂಬ ಆರೋಪದ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿವಾದ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿಲ್ಲ. ಈಗಾಗಲೇ ವಿದ್ಯಾರ್ಥಿಗಳಿಗೆ ಸಮವಸ್ತ್ರ ಧರಿಸಿ ಬರಲು ಸರ್ಕಾರ ಸೂಚಿಸಿದೆ. ಸರ್ಕಾರದ ನಿರ್ಧಾರವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಕೋರ್ಟ್ ಸೂಚನೆಯನ್ನು ನಾವು ಪಾಲಿಸುತ್ತೇವೆ ಎಂದರು. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಬುರ್ಕಾ ಧರಿಸದೇ ಧೈರ್ಯ ಪ್ರದರ್ಶಿಸಿ: ಕಂಗನಾ ರಣಾವತ್

ಹಿಜಾಬ್ ವಿವಾದವನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ. ವಿವಾದವನ್ನು ಎತ್ತಿಕಟ್ಟಿ ಪ್ರಚೋದನೆ ಮಾಡುವ ಕೆಲಸ ಕೈ ಪಕ್ಷವು ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ, ಮೂಗುತಿ ಸುಂದರಿ ಸುಷ್ಮಿತಾ ಗೌಡ

ಮಾಜಿ ಸಿಎಂ ಜಗದೀಶ್ ಶೆಟ್ಟರ್ ದೆಹಲಿ ಪ್ರವಾಸದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪ್ರತಿದಿನ ಒಬ್ಬರು ನಾಯಕರು ದೆಹಲಿಗೆ ಹೋಗುತ್ತಾರೆ. ಸಿಎಂ ಬದಲಾವಣೆ ಎಂಬುದು ಸರಿಯಲ್ಲ. ಹೆಚ್.ಡಿ ರೇವಣ್ಣ ಹಾಗೂ ಕಾಂಗ್ರೆಸ್ಸಿಗರು ನಮ್ಮನ್ನು ಯಾವತ್ತು ಹೊಗಳಲ್ಲ. ಬಸವರಾಜ ಬೊಮ್ಮಾಯಿ ಅವರು ಸಿಎಂ ಸ್ಥಾನಕ್ಕೆ ಸಮರ್ಥವಾದ ನಾಯಕರಾಗಿದ್ದು, ರಾಜ್ಯದಲ್ಲಿ ಉತ್ತಮ ಆಡಳಿತ ನೀಡುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *