ಬೆಂಗಳೂರಿನಲ್ಲಿ ಹಿಟ್ ಅಂಡ್‌ ರನ್‌ಗೆ ಬಿ.ಕಾಂ ಪದವೀಧರೆ ಬಲಿ

Public TV
1 Min Read

– ರಸ್ತೆಯಲ್ಲಿ ಸ್ಕಿಡ್‌ ಆಗಿ ಬಿದ್ದ ಪದವೀಧರೆ ಮೇಲೆ ಟಿಪ್ಪರ್‌ ಹರಿದ ಶಂಕೆ

ಬೆಂಗಳೂರು: ನಗರದಲ್ಲಿ ಹಿಟ್‌ ಅಂಡ್‌ ರನ್‌ಗೆ (Hit And Run) ಪದವೀಧರೆಯೊಬ್ಬಳು ಬಲಿಯಾಗಿರುವ ಘಟನೆ ಬೂದಿಗೆರೆ ವೃತ್ತದ ಬಳಿ ನಡೆದಿದೆ.

ಇಂದು ಬೆಳಗ್ಗೆ 8:50 ಸುಮಾರಿಗೆ ಘಟನೆ ನಡೆದಿದೆ. ದ್ವಿತೀಯ ವರ್ಷದ ಬಿ.ಕಾಂ ಪದವೀಧರೆ (B.Com Graduate) ಸಾವನ್ನಪ್ಪಿದ್ದಾಳೆ.

ಘಟನೆ ನಡೆದ ಸ್ಥಳದ ರಸ್ತೆಯು ಸಂಪೂರ್ಣ ಹಾಳಾಗಿದೆ. ಹೀಗಾಗಿ ಸ್ಕಿಡ್‌ ಆಗಿ ಬಿದ್ದ ವಿದ್ಯಾರ್ಥಿನಿ ಮೇಲೆ ಟಿಪ್ಪರ್‌ ಲಾರಿ ಹರಿದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಅಥವಾ ಟಿಪ್ಪರ್‌ಗೆ ಡಿಕ್ಕಿಯಾಗಿ ಆಕೆ ಸಾವನ್ನಪ್ಪಿದ್ದಾಳೆಯೇ ಅನ್ನೋದನ್ನೂ ಪರಿಶೀಲಿಸಲಾಗುತ್ತಿದೆ.

ಸ್ಥಳಕ್ಕೆ ಕೆ.ಆರ್ ಪುರಂ ಟ್ರಾಫಿಕ್ ಮತ್ತು ಅವಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಘಟನೆ ಸಂಬಂಧ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿನಿ ಮೃತದೇಹ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Share This Article