ನವದೆಹಲಿ: ನಾವು ಯಾವೊಬ್ಬ ಕಾಂಗ್ರೆಸ್ ಶಾಸಕರನ್ನು ಟಚ್ ಮಾಡಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರೇ ಸರ್ಕಾರ ಉಳಿಸಲು ನಮ್ಮ ಶಾಸಕರನ್ನು ಸಂಪರ್ಕಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ದೆಹಲಿಯಲ್ಲಿ ಸಭೆ ಮುಗಿಸಿದ ಬಳಿಕ ಮಾಧ್ಯಮಗಳು ಆಪರೇಷನ್ ಕಮಲದ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ, ನಾವು ಯಾವುದೇ ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸಿಲ್ಲ. ಮುಖ್ಯಮಂತ್ರಿ ಅವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಯಲ್ಲಿ ಯಾವುದೇ ಸತ್ಯಾಂಶವಿಲ್ಲ. ನಮ್ಮ ಶಾಸಕರಿಗೆ ಅವರು ಸಾಕಷ್ಟು ಹಣದ ಆಮಿಷ ಒಡ್ಡಿದ್ದಾರೆ ಎಂದು ಹೇಳುವ ಮೂಲಕ ಸಿಎಂ ಕುಮಾರಸ್ವಾಮಿ ಆಪರೇಷನ್ ಕಮಲ ಹೇಳಿಕೆಗೆ ತಿರುಗೇಟು ನೀಡಿದರು. ಇದನ್ನೂ ಓದಿ: ದಿಢೀರ್ ಉಪಹಾರ ಕೂಟದ ಸಭೆಯಲ್ಲಿ ಚರ್ಚಿಸಿದ್ದೇನು – ಡಿಕೆಶಿ ಹೇಳ್ತಾರೆ ಓದಿ
ಕಾಂಗ್ರೆಸ್ ನಾಯಕರು ಒಟ್ಟಾಗಿ ಉಪಹಾರ ಸೇವಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಈ ವಿಚಾರವನ್ನು ನಾನು ಪ್ರತಿಕ್ರಿಯೆ ನೀಡಲು ಇಷ್ಟ ಪಡುವುದಿಲ್ಲ. ನಾವು ಹೇಗೆ ನಮ್ಮ ಶಾಸಕರ ಜೊತೆ ಸಭೆ ನಡೆಸುತ್ತೆವೆಯೋ ಅದೇ ರೀತಿಯಾಗಿ ಅವರು ಸಭೆ ನಡೆಸಿದ್ದಾರೆ. ಅದರಲ್ಲಿ ತಪ್ಪೇನು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಉಪಹಾರ ಕೂಟದ ನೆಪದಲ್ಲಿ ಆಪರೇಷನ್ ಕಮಲಕ್ಕೆ ಕಾಂಗ್ರೆಸ್ ಪ್ರತಿತಂತ್ರ!
ಲೋಕಸಭಾ ಚುನಾವಣೆಯಲ್ಲಿ ನಾವು 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ಪ್ಲಾನ್ ಮಾಡಿಕೊಂಡಿದ್ದೇವೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನಾವು ದೆಹಲಿಯಲ್ಲಿ ರಣತಂತ್ರ ರೂಪಿಸಿದ್ದೇವೆ. ಈ ಕಾರಣಕ್ಕೆ ದೆಹಲಿಗೆ ಬಂದಿದ್ದೇವೆಯೇ ಹೊರತು ಬೇರೆ ಉದ್ದೇಶವಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಆಪರೇಷನ್ ಕಮಲ ಆಗ್ತೀರೋದು ಸತ್ಯ: ಸಿಎಂ
ಬಿಜೆಪಿ ಶಾಸಕರು ದೆಹಲಿಯಿಂದ ಯಾವಾಗ ಬೆಂಗಳೂರಿಗೆ ವಾಪಸ್ ಆಗುತ್ತಾರೆ ಎನ್ನುವ ಪ್ರಶ್ನೆಗೆ ಇಂದು ಸಂಜೆ ಇಲ್ಲಿಂದ ತೆರಳಲಿದ್ದಾರೆ ಎಂದು ಬಿಎಸ್‍ವೈ ಉತ್ತರಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv