ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುತ್ತೇವೆ ಅಂತ ಕಾಂಗ್ರೆಸ್ಸಿಗರು ಹಗಲುಗನಸು ಕಾಣ್ತಿದ್ದಾರೆ: ಬಿಎಸ್‍ವೈ

Public TV
2 Min Read

– ನನ್ನನ್ನು ಯಾರು ಕಿತ್ತಾಕಿಲ್ಲ, ನಾನೇ ರಾಜಿನಾಮೇ ಕೊಟ್ಟು ಬಂದಿದ್ದೇನೆ

ಬೆಂಗಳೂರು: ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎನ್ನುವುದು ಚುನಾವಣಾ ಫಲಿತಾಂಶವನ್ನು ನೋಡಿದಾಗ ಗೊತ್ತಾಗುತ್ತದೆ. ಕಾಂಗ್ರೆಸ್ ಇಂದು ನೆಲಕಚ್ಚಿದೆ. ಬೀದಿ ಪಾಲಾಗಿದ್ದು, ಅವರ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವ ಕುರಿತಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿ ಸಂತೋಷ ವ್ಯಕ್ತಪಡಿಸಿದ್ದಾರೆ. ಉತ್ತರಪ್ರದೇಶ, ಗೋವಾ, ಮಣಿಪುರ, ಉತ್ರಖಾಂಡ್ ಎಲ್ಲಾಕಡೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಜನರು ಆಶಿರ್ವಾದ ಮಾಡಿದ್ದಾರೆ. ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ಅವರು ಏನೋ ಮಾಡುತ್ತೇನೆ ಅಂತಾ ಗೋವಾಕ್ಕೆ ಹೋಗಿ ವಾಪಸ್ ಬರುತ್ತಿದ್ದಾರೆ. ಉತ್ತಾರಾಖಂಡ್‍ಗೆ ಎಂಬಿ ಪಾಟೀಲ್ ಹೋಗಿ ಅವರು ಕೂಡಾ ಬರೀ ಕೈಯಲ್ಲಿ ವಾಪಸ್ ಬರುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಕರ್ನಾಟಕದಲ್ಲೂ ನಾವು ಸಂಪೂರ್ಣವಾದ ಬಹುಮತವನ್ನು ಪಡೆದು ಮತ್ತೆ ಅಧಿಕಾರ ಬರುತ್ತವೆ ಎನ್ನುವುದಕ್ಕೆ ಯಾವುದೇ ಅನುಮಾನ ಇಲ್ಲ ಎನ್ನುವುದು ಮತ್ತೇ ಸಾಬೀತಾಗುತ್ತಿದೆ. ಕಾಂಗ್ರೆಸ್ ಈಗಾಲೇ ಮುಳುಗುತ್ತಿರುವ ಹಡಗು ಎನ್ನುವುದು ಈಗ ಚುನಾವಣಾ ಫಲಿತಾಂಶವನ್ನು ನೋಡಿದಾಗ ಗೊತ್ತಾಗುತ್ತದೆ. ನಾಲ್ಕು ರಾಜ್ಯ ಮತದಾರರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಎಲ್ಲಾ ಕಡೆ ಅಧಿಕಾರಕ್ಕೆ ಬರುತ್ತಿದ್ದೇವೆ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಮೋದಿ ಅವರ ಆಶಿರ್ವಾದ ಎಲ್ಲಿಯವರೆಗೂ ಇರುತ್ತದೆ ಅಲ್ಲಿವರೆಗೂ ಕರ್ನಾಟಕದಲ್ಲಿಯೂ ಅಧಿಕಾರಕ್ಕೆ ಬರುತ್ತದೆ. ಕಾಂಗ್ರೆಸ್ ಇಂದು ನೆಲಕಚ್ಚಿದೆ. ಬೀದಿ ಪಾಲಾಗಿದ್ದು, ಅವರ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ. ಅವರಿಗೆ ಭವಿಷ್ಯ ಇಲ್ಲ ಎನ್ನುವುದು ಸ್ಪಷ್ಟವಾಗುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಪಾದಯಾತ್ರೆ ನಿಲ್ಲಿಸಿ ತೀರ್ಥಯಾತ್ರೆ ಮಾಡಿ – ಕಾಂಗ್ರೆಸ್‍ಗೆ ಆರ್.ಅಶೋಕ್ ಸಲಹೆ

ನನ್ನನ್ನು ಯಾರು ಕಿತ್ತಾಕಿಲ್ಲ, ನಾನೇ ರಾಜಿನಾಮೇ ಕೊಟ್ಟು ಬಂದಿದ್ದೇನೆ. ಅಧಿವೇಶನ ಮಗಿದ ನಂತರ ಪ್ರವಾಸ ಮಾಡಿ ಮತ್ತೋಮ್ಮೆ ಕಾರ್ನಟಕದಲ್ಲಿ 130ಕ್ಕೂ ಹೆಚ್ಚು ಸೀಟ್ ಗೆದ್ದು ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವಂತೆ ಮಾಡುತ್ತೇನೆ. ಕಾಂಗ್ರೆಸ್‍ನವರು ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುತ್ತದೆ ಎನ್ನುವ ಹಗಲು ಕನಸು ಕಾಣುತ್ತಿದೆ. ಅದು ಸಾಧ್ಯವಿಲ್ಲ ಎಂದು ವಾಗ್ಧಾಳಿ ಮಾಡಿದ್ದಾರೆ. ರಾಜ್ಯದ ಕಾರ್ಯಕರ್ತರು ತುಂಬಾ ಉತ್ಸುಕರಾಗಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಒಪಿ ಅಧಿಕಾರ ತರುವ ನಿಟ್ಟಿನಲ್ಲಿ ನಮ್ಮ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ ಎಂದಿದ್ದಾರೆ.  ಇದನ್ನೂ ಓದಿ:  ಗೋವಾ ಚುನಾವಣಾ ಫಲಿತಾಂಶ: ಬಿಜೆಪಿ, ಕಾಂಗ್ರೆಸ್‌ ಮಧ್ಯೆ ಹಾವು ಏಣಿ ಆಟ

Share This Article
Leave a Comment

Leave a Reply

Your email address will not be published. Required fields are marked *