ಸಿಗಂದೂರು ಸೇತುವೆ ಉದ್ಘಾಟನೆ ದಿನಾಂಕ ಘೋಷಿಸಿದ ಬಿ.ವೈ ರಾಘವೇಂದ್ರ

Public TV
1 Min Read

ಶಿವಮೊಗ್ಗ: ದೇಶದ ಎರಡನೇ ಅತಿ ಉದ್ದದ ಕೆಬಲ್ ಸೇತುವೆಯಾದ ಸಿಗಂದೂರು ಸೇತುವೆ (Sigandur Bridge) ಜುಲೈ 14ರಂದು ಲೋಕಾರ್ಪಣೆ ಆಗಲಿದೆ‌. ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಸೇತುವೆ ಉದ್ಘಾಟಿಸಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ  (B.Y Raghavendra) ತಿಳಿಸಿದರು.

ನಗರದ (Shivamogga) ಬಿಜೆಪಿ (BJP) ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಈ ವೇಳೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸ್ಥಳ ಇನ್ನೂ ನಿಗದಿಯಾಗಬೇಕಿದೆ ಎಂದರು. ಇದನ್ನೂ ಓದಿ: ಈಡೇರಿದ ಶರಾವತಿ ಮಡಿಲ ಮಕ್ಕಳ 6 ದಶಕಗಳ ಕನಸು!

ಇಂದಿನಿಂದ (ಶನಿವಾರ) ಎರಡನೇ ಹಂತದ ಲೋಡ್ ಟೆಸ್ಟ್ ನಡೆಯಲಿದೆ. ಅಲ್ಲದೆ ಕೊನೆಯ ಹಂತದ ಕೆಲಸ ಕಾರ್ಯ ಬಾಕಿ ಇದೆ ಎಂದು ತಿಳಿಸಿದರು. ಸರ್ಕಾರದ ಆದೇಶದಲ್ಲಿ ಈ ಸೇತುವೆಗೆ ಹೊಳೆಬಾಗಿಲು ಕಳಸವಳ್ಳಿ ಸೇತುವೆ ಎಂದು ಉಲ್ಲೇಖಿಸಲಾಗಿದೆ. ಆದರೆ ಈ ಸೇತುವೆಗೆ ಸಿಗಂದೂರು ಚೌಡೇಶ್ವರಿ ಸೇತುವೆ ಎಂದು ನಾಮಕರಣ ಮಾಡಬೇಕು. ಈ ಸಂಬಂಧ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಒತ್ತಾಯಿಸುತ್ತೇವೆ ಎಂದು ಅವರು ತಿಳಿಸಿದರು. ಇದನ್ನೂ ಓದಿ: ಶರಾವತಿ ಹಿನ್ನೀರಿನ ನಡುವೆ ಕೆಟ್ಟು ನಿಂತ ಲಾಂಚ್ – ತಪ್ಪಿದ ಅನಾಹುತ

Share This Article