ಲೋಕ ಸಮರದಲ್ಲಿ ಬಿಜೆಪಿ-ಜೆಡಿಎಸ್ ಒಂದಾಗಿ ಕಾಂಗ್ರೆಸ್ಸನ್ನು ಧೂಳಿಪಟ ಮಾಡ್ತೇವೆ: ವಿಜಯೇಂದ್ರ

Public TV
1 Min Read

ಬೆಳಗಾವಿ: ಮುಂಬರುವ ಲೋಕಸಭಾ ಚುನಾವಣೆಯನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದ್ದು, ಚುನಾವಣೆಯಲ್ಲಿ ಬಿಜೆಪಿ (BJP) ಹಾಗೂ ಜೆಡಿಎಸ್ (JDS) ಒಂದಾಗಿ ಕಾಂಗ್ರೆಸ್‍ನ್ನು (Congress) ಧೂಳಿಪಟ ಮಾಡಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (B.Y Vijayendra) ಹೇಳಿದ್ದಾರೆ.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐ.ಎನ್.ಡಿ.ಐ.ಎ ಒಕ್ಕೂಟ ಬಿಜೆಪಿ ವಿರುದ್ಧ ಕೆಲಸ ಮಾಡಿತ್ತು. ಇಷ್ಟಾದರೂ ಚುನಾವಣೆಯ ಫಲಿತಾಂಶ ದೊಡ್ಡ ಶಕ್ತಿ ತಂದು ಕೊಟ್ಟಿದೆ. ಕಾಂಗ್ರೆಸ್ ಪಕ್ಷದ ಪೊಳ್ಳು ಭರವಸೆಗಳನ್ನು ಜನರು ನಂಬುತ್ತಿಲ್ಲ. ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಗೆಲುವು ಕಾರ್ಯಕರ್ತರಲ್ಲಿ ಸಂತಸ ತಂದಿದೆ ಎಂದಿದ್ದಾರೆ. ಇದನ್ನೂ ಓದಿ: ತಾಯಿ ಅಕ್ಷಮ್ಯ ಪದ ಬಳಕೆಗೆ ಕ್ಷಮೆಯಾಚಿಸಿದ ಸೂರಜ್ ರೇವಣ್ಣ

ಉತ್ತರ ಕರ್ನಾಟಕದಲ್ಲಿ ಬಡವರಿಗೆ ಹಾಗೂ ರೈತರಿಗೆ ಅನುಕೂಲವಾಗಲಿ ಎನ್ನುವ ನಿಟ್ಟಿನಲ್ಲಿ ಸುವರ್ಣಸೌಧ ನಿರ್ಮಾಣದ ಚಿಂತನೆ ಮಾಡಿದ್ದು ಯಡಿಯೂರಪ್ಪನವರು. ಚಳಿಗಾಲದ ಅಧಿವೇಶನ ಈ ಭಾಗದ ರೈತರಿಗೆ ಬಡವರಿಗೆ ಅನೂಕೂಲವಾಗಲಿ. ಕಬ್ಬು ಬೆಳೆಗಾರರು ಸೇರಿದಂತೆ ಉತ್ತರ ಕರ್ನಾಟಕ ಜನತೆ ಬಹಳ ನಿರೀಕ್ಷೆಯಲ್ಲಿದ್ದಾರೆ. ರಾಜ್ಯ ಸರ್ಕಾರ ಅವರಿಗೆ ಸಿಹಿ ಸುದ್ದಿ ಕೊಡಲಿ ಎಂದಿದ್ದಾರೆ.

ಹೊಸ ಸರ್ಕಾರದ ಬಗ್ಗೆ ಸಾಕಷ್ಟು ನಿರೀಕ್ಷೆಗಳಿದ್ದವು. ದಿನ ಕಳೆದಂತೆ ಅವುಗಳೆಲ್ಲ ಹುಸಿಯಾಗಿದೆ. ಅಧಿವೇಶನದ ಮುಖಾಂತರವಾದರೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ ನೀಡಲಿ. ಸದನದ ಒಳಗೆ ಬಿಜೆಪಿ ವಿರೋಧ ಪಕ್ಷವಾಗಿ ಕೆಲಸ ಮಾಡಲಿದೆ. ಸಮರ್ಥವಾಗಿ ಜನತೆಯ ನಿರೀಕ್ಷೆಯಂತೆ ಸದನದಲ್ಲಿ ಪ್ರಸ್ತಾಪ ಮಾಡಲಿದ್ದೇವೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಸಿಪಿವೈ ಬಾವ ನಾಪತ್ತೆ ಪ್ರಕರಣ – ಕಾರು ಪತ್ತೆ, ಕಿಡ್ನ್ಯಾಪ್ ಶಂಕೆಗೆ ಪುಷ್ಠಿ ನೀಡಿದ ರಕ್ತದ ಕಲೆ!

Share This Article