ದಾವಣಗೆರೆ: ಬಿಟ್ ಕಾಯನ್ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡರು ಇದ್ದಾರೆ ಎಂದು ಸಾಕಷ್ಟು ಜನನಾಯಕರು ಹೇಳಿದ್ದಾರೆ. ಯುಬಿ ಸಿಟಿಯಲ್ಲಿ ನಡೆದ ಗಲಾಟೆ ಪ್ರಕರಣಗಳು ಕೂಡ ಬಿಟ್ ಕಾಯನ್ ಬಗ್ಗೆನೇ ಎಂದು ಕೇಳಿದ್ದೇವೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡರು ತಮ್ಮ ತಪ್ಪು ಮುಚ್ಚಿಹಾಕಲು ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಗೊಂದಲ ಸೃಷ್ಟಿಸಲು ಹೀಗೆ ಮಾಡುತ್ತಿದ್ದಾರೆಯೇ ಹೊರತು ಬೇರೇನು ಅಲ್ಲ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಬಿಟ್ ಕಾಯಿನ್ ಪ್ರಕರಣದಲ್ಲಿ ಯಾರೇ ತಪ್ಪಿತಸ್ಥರಿದ್ರೂ ಕ್ರಮ ಆಗ್ಲೇಬೇಕು: ಕೆ.ಬಿ.ಕೋಳಿವಾಡ
ಗಲಾಟೆಗೆ ಸಂಬಂಧಿಸಿದಂತೆ ಕಾಂಗ್ರೆನ್‌ನ ಬೇರೆ ಬೇರೆ ನಾಯಕರ ಹೆಸರು ಕೇಳಿ ಬರುತ್ತಿದೆ. ಅದರಲ್ಲಿ ಯಾರು ಭಾಗಿಯಾಗಿದ್ದಾರೆ, ಯಾರ ಮಕ್ಕಳು ಇದ್ದಾರೆ ಎನ್ನುವುದು ತನಿಖೆ ನಂತರ ಗೊತ್ತಾಗಲಿದೆ. ಇದನ್ನು ರಾಜಕೀಯವಾಗಿ ಇಟ್ಟುಕೊಂಡು ಕಾಂಗ್ರೆಸ್ ಆರೋಪ ಮಾಡುತ್ತಿದೆ. ಅದರೆ ಇದನ್ನು ಬಿಜೆಪಿ ಸವಾಲಾಗಿ ಎದುರಿಸುತ್ತದೆ ಎಂದು ತಿಳಿಸಿದ್ದಾರೆ.
ಇದೊಂದೆ ಅಲ್ಲ ಕಾಂಗ್ರೆಸ್ ಪಾರ್ಟಿ ಚುನಾವಣೆ ಸಂದರ್ಭದಲ್ಲಿ ಬೇರೆ ಬೇರೆ ಆರೋಪಗಳನ್ನು ಮಾಡುತ್ತದೆ. ಮುಂದಿನ ದಿನಗಳಲ್ಲಿ ರಾಜ್ಯದ ಜನತೆಗೆ ಸತ್ಯ ಗೊತ್ತಾಗಲಿದೆ. ಏನೇ ಆರೋಪಗಳು ಬಂದರೂ ಬಿಜೆಪಿ ಎದುರಿಸುತ್ತದೆ. ಯಾರೋ ಒಬ್ಬ ಕಾಂಗ್ರೆಸ್ ಮುಖಂಡ ತಲೆದಂಡ ಆಗುತ್ತೆ ಎಂದು ಹೇಳಿದ ಮಾತ್ರಕ್ಕೆ ಅದು ಸತ್ಯವಾಗುವುದಿಲ್ಲ ಎಂದು ಪರೋಕ್ಷವಾಗಿ ಮಾಜಿ ಸಚಿವ ಪ್ರಿಯಾಂಕ ಖರ್ಗೆಗೆ ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ವೇಗವಾಗಿ ಬೈಕ್‍ನಲ್ಲಿ ಬಂದು ಬಟ್ಟೆ ಅಂಗಡಿಗೆ ನುಗ್ಗಿದ – ವೀಡಿಯೋ ವೈರಲ್
ಪ್ರಿಯಾಂಕ ಖರ್ಗೆ ಹೇಳಿಕೆಯಿಂದ ಮುಖ್ಯಮಂತ್ರಿ ಬದಲಾವಣೆ, ರಾಜ್ಯಾಧ್ಯಕ್ಷರ ಬದಲಾವಣೆ ಆಗೋದಿಲ್ಲ. ಸತ್ಯಕ್ಕೆ ದೂರವಾದ ಆರೋಪ ಕಾಂಗ್ರೆಸ್ ಮಾಡುತ್ತಿದೆ. ಇದಕ್ಕೆ ನಾವು ಕಿವಿಗೊಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ.