ದಿಢೀರ್‌ ರಬಕವಿ-ಬನಹಟ್ಟಿಯಲ್ಲಿ ಜಿಲ್ಲಾ ಪಂಚಾಯತ್‌ ಕಾಮಗಾರಿ ವೀಕ್ಷಿಸಿದ ಸಿಇಒ ಶಶಿಧರ ಕುರೇರ

Public TV
1 Min Read

ಬಾಗಲಕೋಟೆ: ಜಿಲ್ಲೆಯ ಜಮಖಂಡಿ ಹಾಗೂ ರಬಕವಿ-ಬನಹಟ್ಟಿ (Rabakavi Banahatti) ತಾಲೂಕುಗಳಲ್ಲಿ ನಡೆಯುತ್ತಿರುವ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಸ್ಥಳಕ್ಕೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಶಶಿಧರ ಕುರೇರ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರಬಕವಿ-ಬನಹಟ್ಟಿ ತಾಲೂಕಿನ ಸೈದಾಪುರ ಗ್ರಾಮದ ಬಹುಗ್ರಾಮ ಕುಡಿಯುವ ನೀರಿನ ಘಟಕಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದರು. ಮಹಾಲಿಂಗಪುರದ ಕೆಎಚ್‌ಡಿಸಿ ಕಾಲನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2 ಕೊಠಡಿ ನಿರ್ಮಾಣ ಕಾಮಗಾರಿ ಪರಿಶೀಲಿಸಿ ನಿಗದಿತ ಅವಧಿಯಲ್ಲಿ ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಸೂಚಿಸಿದರು. ಚಿಮ್ಮಡ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಶೌಚಗೃಹ ನಿರ್ಮಾಣ ಕಾಮಗಾರಿ, ಗುರವ ತೋಟದ ಶಾಲೆಯಲ್ಲಿ ಮಧ್ಯಾಹ್ನದ ಬಿಸಿ ಊಟದ ದಾಸ್ತಾನು ಕೊಠಡಿಗೆ ತೆರಳಿ ದಾಸ್ತಾನುಗಳ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಹಿಂಡಲಗಾ ಜೈಲಿನ ಜಾಮರ್‌ನಿಂದ ಮೊಬೈಲ್‌ ನೆಟ್‌ವರ್ಕ್‌ ಜಾಮ್‌ – ಕಾಲ್‌ಗೆ ಪರದಾಡುತ್ತಿದ್ದಾರೆ ಜನ

ಹನಗಂಡಿ ತೋಟ ನಂಬರ್1 ಶಾಲೆಯಲ್ಲಿ ಶೌಚಗೃಹ ಕಾಮಗಾರಿ ವೀಕ್ಷಣೆ, ಹನಗಂಡಿಯಲ್ಲಿ ನಿರ್ಮಿಸಲಾಗುತ್ತಿರುವ ಚರಂಡಿ ಕಾಮಗಾರಿ, ಯಲ್ಲಟ್ಟಿ ಗ್ರಾಮದ ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿ ಕುಲಹಳ್ಳಿ ಚಾಕ್‌ವೆಲ್ ಕಾಮಗಾರಿ, ಚಿಮ್ಮಡದ ಮೇಲ್ಪಟ್ಟ ಸಂಗ್ರಹಾಲಯ ಕಾಮಗಾರಿ, ಹನಗಂಡಿ ಅಮೃತ ಸರೋವರ ಕಾಮಗಾರಿ, ಹಳಿಂಗಳಿ ಸಿಸಿ ರಸ್ತೆ ವೀಕ್ಷಣೆ ಮಾಡಿದ್ರು.

ಶಾಲೆಗಳಿಗೆ ಭೇಟಿ ನೀಡಿದ ಸಂದರ್ಭಗಳಲ್ಲಿ ಮಕ್ಕಳ ಹಾಜರಾತಿ, ಮಕ್ಕಳಿಗೆ ನೀಡುತ್ತಿರುವ ಆಹಾರ ಪದಾರ್ಥ ಪರಿಶೀಲಿಸಿ ಗುಣಮಟ್ಟದ ಆಹಾರ ತಯಾರಿಸಿ ಮಕ್ಕಳಿಗೆ ನೀಡುವಂತೆ ಸಿಬ್ಬಂದಿಗೆ ಸೂಚಿಸಿದರು.

ರಬಕವಿ-ಬನಹಟ್ಟಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಿದ್ದಪ್ಪ ಪಾಟಿಹಾಳ, ಜಮಖಂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಂಜೀವ ಜುನ್ನೂರ, ಜಮಖಂಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಜೆ.ಟಿ.ಶೆಟ್ಟಿ, ಪಂಚಾಯತ್ ರಾಜ್ ಸಹಾಯಕ ಕಾರ್ಯಪಾಲಕ ಅಭಿಯಂತರ ಜಗದೀಶ ನಾಡಗೌಡ ಇತರರು ಇದ್ದರು.

 

Share This Article