‘ಬಘೀರ’ ಶೂಟಿಂಗ್ ವೇಳೆ ಶ್ರೀಮುರಳಿ ಕಾಲಿಗೆ ಪೆಟ್ಟು

Public TV
1 Min Read

ರೋರಿಂಗ್ ಸ್ಟಾರ್ ಶ್ರೀಮುರಳಿ (Sriimurali) ಅವರು ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ. ‘ಬಘೀರ’ (Bagheera Film) ಸಿನಿಮಾದ ಚಿತ್ರೀಕರಣದ ವೇಳೆ ಈ ಅವಘಡ ನಡೆದಿದೆ. ಕೂಡಲೇ ಶ್ರೀಮುರಳಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದನ್ನೂ ಓದಿ:ರಶ್ಮಿಕಾ ಮಂದಣ್ಣ ನಟನೆಯನ್ನು ಹೊಗಳಿದ ಮಾನುಷಿ ಚಿಲ್ಲರ್

ಪ್ರಸ್ತುತ ಶ್ರೀಮುರಳಿ ಅವರು ‘ಬಘೀರ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಸಾಹಸ ದೃಶ್ಯಗಳನ್ನು ಚಿತ್ರೀಕರಿಸುವಾಗ ಶ್ರೀಮುರಳಿ ಕಾಲಿಗೆ ಪೆಟ್ಟಾಗಿದೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಶ್ರೀಮುರಳಿ ಅವರಿಗೆ ಚಿಕಿತ್ಸೆ ಪಡೆಯುತ್ತಿದ್ದು, ಸದ್ಯ ಶ್ರೀಮುರಳಿ ಚೇತರಿಕೊಳ್ಳುತ್ತಿದ್ದಾರೆ.

ಹೀಗೆ ಕೆಲವು ತಿಂಗಳುಗಳ ಹಿಂದೆ ‘ಬಘೀರ’ ಸಿನಿಮಾ ಸೆಟ್‌ನಲ್ಲಿಯೇ ಶ್ರೀಮುರಳಿ ಕಾಲಿಗೆ ಪೆಟ್ಟು ಬಿದ್ದಿತ್ತು. ಇದೀಗ 2ನೇ ಬಾರಿ ಕೂಡ ಹೀಗೆ ಆಗಿದೆ.

ಬಘೀರ ಸಿನಿಮಾದಲ್ಲಿ ಶ್ರೀಮುರಳಿ, ರುಕ್ಮಿಣಿ ವಸಂತ್ ಜೋಡಿಯಾಗಿ ನಟಿಸಿದ್ದಾರೆ. ಪ್ರಶಾಂತ್ ನೀಲ್ ಬರೆದ ಕಥೆಗೆ ಡಿ.ಆರ್ ಸೂರಿ ನಿರ್ದೇಶನ ಮಾಡಿದ್ದಾರೆ. ಹೊಂಬಾಳೆ ಸಂಸ್ಥೆ ಚಿತ್ರ ನಿರ್ಮಾಣ ಮಾಡಿದ್ದಾರೆ.

Share This Article