ಚಾಮರಾಜನಗರ: ಮಲೆ ಮಹದೇಶ್ವರ ವನ್ಯಜೀವಿ (MM Hills) ವಿಭಾಗದ ಹೂಗ್ಯಂ ವಲಯದಲ್ಲಿ ಈಚೆಗೆ ಐದು ಹುಲಿಗಳಿಗೆ ವಿಷವಿಕ್ಕಿ ಕೊಂದ ಆರೋಪದ ಮೇಲೆ ಜೈಲಿನಲ್ಲಿದ್ದ ಮೂವರು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ.
ಆರೋಪಿಗಳಾದ ಮಾದರಾಜು, ನಾಗರಾಜು, ಕೋನಪ್ಪಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (ಕೊಳ್ಳೇಗಾಲ) ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ಚಾ.ನಗರದಲ್ಲಿ 5 ಹುಲಿಗಳ ಸಾವು ಕೇಸ್ – ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಸೂಚನೆ
50,000 ರೂಪಾಯಿ ಭದ್ರತಾ ಠೇವಣಿಯೊಂದಿಗೆ ಜಾಮೀನು ಮಂಜೂರು ಮಾಡಿರುವ ನ್ಯಾಯಾಲಯ ಅನುಮತಿ ಪಡೆಯದೇ ಸ್ವಸ್ಥಾನ ತೊರೆಯುವಂತಿಲ್ಲ. ನ್ಯಾಯಾಲಯದಲ್ಲಿ ನಿಯಮಿತವಾಗಿ ವಿಚಾರಣೆಗೆ ಹಾಜರಾಗಬೇಕು ಎಂಬ ಷರತ್ತು ವಿಧಿಸಿದೆ.