ನವದೆಹಲಿ: ನನಗೆ ಯಾರೂ ಚಪ್ಪಾಳೆ ತಟ್ಟುವ ಅಗತ್ಯವಿಲ್ಲ. ವಿವಾದಕ್ಕೆ ಎಡೆ ಮಾಡಿಕೊಡಲೆಂದೇ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹರಿಯಬಿಡಲಾಗುತ್ತಿದೆ ಎಂದು ಪ್ರಧಾನಿ ಮೋದಿ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.
ಕೊರೊನಾ ಸಮಯದಲ್ಲಿ ಪ್ರಧಾನಿ ಮೋದಿಯವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಅವರ ಕಾರ್ಯವೈಖರಿಯನ್ನು ಮೆಚ್ಚಿ ಏ.12ರ ಭಾನುವಾರ ಸಂಜೆ 5 ಗಂಟೆಗೆ ಎಲ್ಲರೂ ಮನೆಯ ಬಾಲ್ಕನಿಗೆ ಬಂದು ಚಪ್ಪಾಳೆ ತಟ್ಟಬೇಕೆಂಬ ಸಂದೇಶವಿರುವ ಪೋಸ್ಟ್ ಗಳು ಸಾಮಾಜಿಕ ಜಾಲತಾಣ/ ಮೆಸೇಜಿಂಗ್ ಅಪ್ಲಿಕೇಶನ್ ಗಳಲ್ಲಿ ಹರಿದಾಡುತ್ತಿದೆ.
Fact Check:
The origins of this poster which is doing rounds in some social media circuits is questionable and suspect. People are requested to not pay any attention to it. PM @narendramodi has said prima facie this seems to be an attempt to drag his name into controversy. pic.twitter.com/UIEBD4ivDI
— Prasar Bharati News Services & Digital Platform (@PBNS_India) April 8, 2020
ಚಪ್ಪಾಳೆ ಅಭಿಯಾನದ ಪೋಸ್ಟ್ ಪ್ರಧಾನಿ ಮೋದಿ ಅವರ ಗಮನಕ್ಕೆ ಬಂದಿದೆ. ಈ ವಿಚಾರಕ್ಕೆ ಪ್ರತಿಕ್ರಿಯಿಸಿ, ನಿಜಕ್ಕೂ ನನಗೆ ಗೌರವ ಸಲ್ಲಿಸಬೇಕು ಎಂದಿದ್ದರೆ ಕೊರೋನಾ ವೈರಸ್ ತೊಲಗುವವರೆಗಾದರೂ ಒಂದು ಬಡ ಕುಟುಂಬಗಳ ಜವಾಬ್ದಾರಿ ತೆಗೆದುಕೊಳ್ಳಿ. ಇದಕ್ಕಿಂತ ದೊಡ್ಡ ಗೌರವ ಬೇರೆ ಯಾವುದು ಇಲ್ಲ. ವಿವಾದಕ್ಕೆ ಎಡೆಮಾಡಲೆಂದೇ ಈ ಪೋಸ್ಟ್ ಹರಿಯಬಿಡಲಾಗಿದೆ ಎಂದು ಹೇಳಿದ್ದಾರೆ.
ಈ ಹಿಂದೆ ಪ್ರಧಾನಿ ಮೋದಿಯವರು ಮಾರ್ಚ್ 22 ರಂದು ವೈದ್ಯರಿಗೆ, ನರ್ಸ್ ಗಳಿಗೆ, ಆರೋಗ್ಯ ಸಿಬ್ಬಂದಿ, ಪೊಲೀಸ್, ಮಾಧ್ಯಮಗಳಿಗೆ ಸೇರಿದಂತೆ ದೇಶದಲ್ಲಿ ಕೊರೊನಾ ವಿರುದ್ಧ ಹೋರಾಡುತ್ತಿರುವ ವ್ಯಕ್ತಿಗಳಿಗೆ ಗೌರವ ಸಲ್ಲಿಸಲು ಮನೆಯ ಬಾಲ್ಕನಿಗೆ ಬಂದು ಚಪ್ಪಾಳೆ ತಟ್ಟಬೇಕೆಂದು ಮನವಿ ಮಾಡಿದ್ದರು. ಇದಕ್ಕೆ ದೇಶವ್ಯಾಪಿ ಭಾರೀ ಬೆಂಬಲ ವ್ಯಕ್ತವಾಗಿತ್ತು.
ಇದಾದ ಬಳಿಕ ಏ.5 ರಂದು ಕೊರೊನಾ ವಿರುದ್ಧದ ಹೋರಾಟಕ್ಕೆ ಒಗ್ಗಟ್ಟು ಪ್ರದರ್ಶಿಸಲು ರಾತ್ರಿ 9 ಗಂಟೆಗೆ ವಿದ್ಯುತ್ ದೀಪ ಆಫ್ ಮಾಡಿ ದೀಪ/ ಕ್ಯಾಂಡಲ್ ಲೈಟ್/ ಮೊಬೈಲ್ ಟಾರ್ಚ್ ಬೆಳಗಿ ಎಂದು ಮನವಿ ಮಾಡಿದ್ದರು. ಇದಕ್ಕೂ ದೇಶದಲ್ಲಿ ಭಾರೀ ಬೆಂಬಲ ಸಿಕ್ಕಿತ್ತು.