ಬನಶಂಕರಿ ದೇವಸ್ಥಾನ ಅಭಿವೃದ್ಧಿ – ಮಾಸ್ಟರ್ ಪ್ಲಾನ್‌ಗೆ ಶಶಿಕಲಾ ಜೊಲ್ಲೆ ಸೂಚನೆ

Public TV
3 Min Read

ಬೆಂಗಳೂರು: ನಗರದ ಸುಪ್ರಸಿದ್ಧ ಬನಶಂಕರಿ ದೇವಾಲಯದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮುಂದಾಗಿದೆ. ದೈವ ಸಂಕಲ್ಪ ಯೋಜನೆಯ ಮೊದಲ ಹಂತದ ದೇವಾಲಯಗಳ ಪಟ್ಟಿಯಲ್ಲಿರುವ ಬೆಂಗಳೂರಿನ ಬನಶಂಕರಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರಚಿಸುವಂತೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಕಂದಾಯ ಸಚಿವರು ಹಾಗೂ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಅವರ ಜೊತೆಯಲ್ಲಿ ನಡೆದ ಸಭೆಯಲ್ಲಿ ಬನಶಂಕರಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗಾಗಿ ವಿಸ್ತೃತವಾಗಿ ಚರ್ಚಿಸಲಾಯಿತು.

ಈ ವೇಳೆ ಮಾಹಿತಿ ನೀಡಿದ ಸಚಿವೆ ಜೊಲ್ಲೆ, 4.20 ಎಕರೆ ಪ್ರದೇಶದಲ್ಲಿರುವ ಬನಶಂಕರಿ ದೇವಸ್ಥಾನ ನಗರದ ಪ್ರಮುಖ ದೇವಸ್ಥಾನಗಳಲ್ಲಿ ಒಂದು. ಈ ದೇವಸ್ಥಾನದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಈಗಾಗಲೇ ದೈವ ಸಂಕಲ್ಪ ಯೋಜನೆಯ ಮೊದಲ ಹಂತದ ದೇವಾಲಯಗಳ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲಾಗಿದೆ. ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಸಮಗ್ರವಾದ ಮಾಹಿತಿಯನ್ನು ಪಡೆದುಕೊಳ್ಳಲಾಗಿದೆ. ದೇವಾಲಯದಲ್ಲಿ 48 ಕೋಟಿ ರೂ. ಹಣವಿದ್ದು, ಈ ಹಣದ ಸದುಪಯೋಗದ ಮೂಲಕ ಭಕ್ತಸ್ನೇಹಿ ಪರಿಸರವನ್ನು ನಿರ್ಮಾಣ ಮಾಡುವತ್ತ ಹೆಚ್ಚಿನ ಗಮನ ನೀಡುವಂತಹ ಮಾಸ್ಟರ್ ಪ್ಲಾನ್ ರಚಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ಕಾಂಗ್ರೆಸ್‍ಗೆ ಮಾಜಿ ಶಾಸಕ ಎಂ.ಡಿ ಲಕ್ಷ್ಮಿ ನಾರಾಯಣ್ ಗುಡ್ ಬೈ

ಆಂಜನೇಯ ದೇವಾಲಯ ಪುನರ್ ನಿರ್ಮಾಣ:
ಬನಶಂಕರಿ ದೇವಾಲಯದ ಆವರಣದಲ್ಲಿರುವ ವರಪ್ರಸಾದ ಆಂಜನೇಯ ದೇವಾಲಯವು 1915 ರಲ್ಲಿ ನಿರ್ಮಿಸಲಾಗಿದೆ. ಇದು ಸುಮಾರು 100 ವರ್ಷಗಳಿಗೂ ಹಿಂದಿನ ದೇವಾಲಯವಾಗಿದ್ದು, ಶಿಥಿಲಾವಸ್ಥೆಯಲ್ಲಿದೆ. ಇದರ ಜೀರ್ಣೋದ್ಧಾರಕ್ಕಾಗಿ ಮೂಲ ದೇವಾಲಯದ ಗರ್ಭಗುಡಿಯ ಹಿಂಬದಿ ಅಲಂಕಾರ ಮೂರ್ತಿಯಾಗಿ ಮತ್ತೊಂದು ಹೊಸ ಮೂರ್ತಿಯನ್ನು ಪ್ರತಿಸ್ಥಾಪಿಸಲು ಹಾಗೂ ಮೂಲ ದೇವಾಲಯದ ಗರ್ಭಗುಡಿ, ಪ್ರಾಂಗಣಗಳ ವಿಸ್ತೀರ್ಣವನ್ನು ವಿನ್ಯಾಸಗೊಳಿಸಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರಿಗೆ ದರ್ಶನಕ್ಕೆ ಅನುಕೂಲಕರವಾಗುವ ರೀತಿಯಲ್ಲಿ ನಕ್ಷೆಯನ್ನು ತಯಾರಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ದೇವಾಲಯಕ್ಕೆ ಆಗಮಿಸುವ ಭಕ್ತಾದಿಗಳ ಪ್ರಸಾದ ವಿತರಣೆಗೆ ಅನ್ನದಾಸೋಹ ಭವನವನ್ನು ಉಪಯೋಗಿಸಲಾಗುತ್ತಿದೆ. ಹೆಚ್ಚಿನ ಸ್ಥಳಾವಕಾಶ ಕಲ್ಪಿಸುವ ದೃಷ್ಟಿಯಿಂದ ಭವನದ ಖಾಲಿ ಸ್ಥಳದಲ್ಲಿ ತಾತ್ಕಾಲಿಕವಾಗಿ ಪೆಂಡಾಲ್‌ಗಳನ್ನು ಹಾಕಿ ಪ್ರಸಾದವನ್ನು ವಿತರಿಸಲಾಗುತ್ತಿದೆ. ಮಳೆ ಬಂದಾದ ಪ್ರಸಾದ ಸ್ವೀಕರಿಸಲು ತೊಂದರೆ ಆಗುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಸದರಿ ಸ್ಥಳದಲ್ಲಿ ಭಕ್ತಾದಿಗಳಿಗೆ ಅನುಕೂಲ ಉಂಟಾಗುವಂತೆ ಶಾಶ್ವತ ಪರಿಹಾರ ಕೈಗೊಳ್ಳುವ ನಿಟ್ಟಿನಲ್ಲಿ ಶಾಶ್ವತ ಮೇಲ್ಚಾವಣಿಯನ್ನು ನಿರ್ಮಿಸಿ ಅನ್ನಪ್ರಸಾದ ವಿತರಣೆಗೆ ಕೌಂಟರ್‌ಗಳ ನಿರ್ಮಾಣ ಮತ್ತು ಪ್ರಸಾದ ಸೇವನೆಗೆ ಅನುಕೂಲವಾಗುವಂತೆ ಕುಳಿತುಕೊಳ್ಳಲು ಆಸನಗಳನ್ನು ನಿರ್ಮಿಸಲು ಯೋಜನೆ ರೂಪಿಸಲು ಅಧಿಕಾರಿಗಳಿಗೆ ಸೂಚಿಸಿದರು.

ದೇವಾಲಯದ ಹಿಂಭಾಗದಲ್ಲಿರುವ ಹಾಲು ಕಾಂಪೌಂಡು ಗೋಡೆಯನ್ನು ಸೂಕ್ತ ಎತ್ತರಕ್ಕೆ ಏರಿಸಲು ಹಾಗೂ ಸುತ್ತಲಿನ ಗಾಳಿ, ಬೆಳಕು ಸರಾಗವಾಗಿ ಒಳಬರಲು ಕಾಂಪೌಂಡಿನ ಮೇಲ್ಭಾಗದಲ್ಲಿ ಎಸ್.ಎಸ್ ನಿಂದ ಲೂವರ್ಸ್‌ಗಳನ್ನು ಅಳವಡಿಸಲು ತಿಳಿಸಲಾಯಿತು. ಸದರಿ ಕಾಮಗಾರಿಗಾಗಿ ಅಂದಾಜು ಪಟ್ಟಿಯನ್ನು ಸಲ್ಲಿಸಲು ಮತ್ತು ಕಾಮಗಾರಿಯನ್ನು ಶ್ರೀಘ್ರವಾಗಿ ಕೈಗೊಳ್ಳಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಯಿತು.

ದೇವಾಲಯದ ಆವರಣದಲ್ಲಿರುವ ಸಾರ್ವಜನಿಕ ಶೌಚಾಲಯ ತುಂಬಾ ಹಳೆಯ ಕಟ್ಟಡವಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಒಂದೇ ಪ್ರವೇಶವಿದೆ. ಇದರಿಂದ ಭಕ್ತಾದಿಗಳಿಗೆ ಬಹಳಷ್ಟು ಅನಾನುಕೂಲವಾಗುತ್ತಿದೆ. ಆದ್ದರಿಂದ ಶೌಚಾಲಯನ್ನು ಹೈಟೆಕ್ ಮಾದರಿಯಲ್ಲಿ ನಿರ್ಮಿಸಲು ಅಂದಾಜು ಪಟ್ಟಿಯನ್ನು ಸಲ್ಲಿಸುಲು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಶೌಚಾಲಯಗಳ ನಿರ್ವಹಣೆಗಾಗಿ ಸುಲಭ ಶೌಚಾಲಯದವರಿಗೆ ವಹಿಸಲು ಅಗತ್ಯ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು. ಇದನ್ನೂ ಓದಿ: ಜೇಮ್ಸ್‌ವೆಬ್‌ ಕಣ್ಣಲ್ಲಿ ಗುರು ಗ್ರಹದ ರಹಸ್ಯ

ಅನ್ನದಾಸೋಹ ಭವನದ ಅಡುಗೆ ಮನೆ ನೆಲ ಮಹಡಿಯಲ್ಲಿದೆ. ಪ್ರಸಾದ ವ್ಯವಸ್ಥೆಗೆ ಮೊದಲ ಮಹಡಿಯಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ದಾಸೋಹ ಭವನಕ್ಕೆ ಲಿಫ್ಟ್ ವ್ಯವಸ್ಥೆ ಇಲ್ಲದೇ ಇರುವುದರಿಂದ ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಲು ಅಡುಗೆ ಮನೆಯಿಂದ ಮೊದಲನೇ ಮಹಡಿಗೆ ಪ್ರಸಾದ ಕೊಂಡೊಯ್ಯುವುದು ತುಂಬಾ ಕಷ್ಟವಾಗುತ್ತಿದೆ. ಈ ಸಂಬಂಧ ದಾನಿಗಳೊಬ್ಬರು ಲಿಫ್ಟ್ ಕೊಡಿಸಲು ಮುಂದಾಗಿದ್ದು, ಇದಕ್ಕೆ ಅಗತ್ಯ ಅನುಮತಿಗಳನ್ನು ಪಡೆದುಕೊಂಡು ಕಾಮಗಾರಿ ಪ್ರಾರಂಭಿಸುವಂತೆ ಸೂಚನೆ ನೀಡಲಾಯಿತು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *