– ಏರ್ ಇಂಡಿಯಾ ವಿಮಾನ ಮಾದರಿಯಲ್ಲಿ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ದುರಂತ
ಢಾಕಾ: ಬಾಂಗ್ಲಾದೇಶದ (Bangladesh) ವಾಯುಪಡೆಯ ಎಫ್-7 ಬಿಜಿಐ (F-7 BGI) ತರಬೇತಿ ಜೆಟ್ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡ ಘಟನೆ ನಡೆದಿದೆ.
ಏರ್ ಇಂಡಿಯಾ (Air India) ವಿಮಾನ ದುರಂತದ ಮಾದರಿಯಲ್ಲೇ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಢಾಕಾದ ಮೈಲ್‌ಸ್ಟೋನ್ (Milestone) ಶಿಕ್ಷಣ ಸಂಸ್ಥೆಯ ಕಟ್ಟಡಕ್ಕೆ ಅಪ್ಪಳಿಸಿದೆ. ಪರಿಣಾಮ ಓರ್ವ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.ಇದನ್ನೂ ಓದಿ: Mandya | ಕಾಲೇಜು ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿ ನೇಣಿಗೆ ಶರಣು
ಈ ಕುರಿತು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ ಡೈರೆಕ್ಟರೇಟ್ (ಐಎಸ್‌ಪಿಆರ್) ಹೇಳಿಕೆ ಬಿಡುಗಡೆ ಮಾಡಿದ್ದು, ಸೋಮವಾರ ಮಧ್ಯಾಹ್ನ 1:06ರ ಸುಮಾರಿಗೆ ಬಾಂಗ್ಲಾದೇಶದ ವಾಯುಪಡೆಯ ಎಫ್-7 ಬಿಜಿಐ ತರಬೇತಿ ಜೆಟ್ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಢಾಕಾದ ಉತ್ತರದ ಮೈಲ್‌ಸ್ಟೋನ್ ಶಿಕ್ಷಣ ಸಂಸ್ಥೆಯ ಕ್ಯಾಂಟೀನ್ ಮೇಲೆ ಪತನಗೊಂಡಿದೆ. ಅವಘಡದಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ತಿಳಿಸಿದೆ.
ಅಗ್ನಿಶಾಮಕ ದಳದ ಕರ್ತವ್ಯ ಅಧಿಕಾರಿ ಲಿಮಾ ಖಾನ್ ಮಾತನಾಡಿ, ತರಬೇತಿ ಜೆಟ್ ಪತನಗೊಂಡ ಸ್ವಲ್ಪ ಸಮಯದ ನಂತರ ಗಾಯಗೊಂಡ ನಾಲ್ವರನ್ನು ಸಿಎಂಹೆಚ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವಘಡ ಸಂಭವಿಸಿದಾಗ ಶಾಲೆಯಲ್ಲಿ ಮಕ್ಕಳಿದ್ದರು. ಆದರೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಬಾಂಗ್ಲಾದೇಶ ಸೇನೆಯ ಸಾರ್ವಜನಿಕ ಸಂಪರ್ಕ ಕಚೇರಿ ಬಿಡುಗಡೆಗೊಳಿಸಿದ ಹೇಳಿಕೆಯಲ್ಲಿ, ಪತನಗೊಂಡ ಎಫ್-7 ಬಿಜಿಐ ಜೆಟ್ ಬಾಂಗ್ಲಾದೇಶದ ವಾಯುಪಡೆಗೆ ಸೇರಿದ್ದು ಎಂದು ದೃಢಪಡಿಸಿದೆ. ಸದ್ಯ ಘಟನಾ ಸ್ಥಳದಲ್ಲಿ ಮೂರು ಅಗ್ನಿಶಾಮಕ ದಳದ ವಾಹನಗಳು ಕಾರ್ಯನಿರ್ವಹಿಸುತ್ತಿದ್ದು, ಪರಿಸ್ಥಿತಿಯನ್ನು ನಿರ್ವಹಿಸುವಲ್ಲಿ ತೊಡಗಿಕೊಂಡಿದ್ದಾರೆ. ಇದನ್ನೂ ಓದಿ: ನೆಲಮಂಗಲ | ರ‍್ಯಾಗಿಂಗ್‌ಗೆ ಹೆದರಿ ಸೆಲ್ಫಿ ವೀಡಿಯೋ ಮಾಡಿಟ್ಟು ಕಾಲೇಜು ಟಾಪರ್ ಆತ್ಮಹತ್ಯೆ