ಬೀದರ್: ಕನ್ನಡ (Kannada) ಮಾತನಾಡಿ ಎಂದಿದಕ್ಕೆ ರೂಲ್ಸ್ ಇದೆಯಾ ಎಂದು ಡಿಸಿಸಿ ಬ್ಯಾಂಕ್ (DCC Bank) ಸಿಬ್ಬಂದಿ ವ್ಯಕ್ತಿ ಮೇಲೆಯೇ ದರ್ಪ ಮೆರೆದ ಘಟನೆ ಬೀದರ್ (Bidar) ಜಿಲ್ಲೆಯ ಹುಲಸೂರು ಪಟ್ಟಣದ ಡಿಸಿಸಿ ಬ್ಯಾಂಕ್ ನಲ್ಲಿ ನಡೆದಿದೆ.
ಕರ್ನಾಟಕದಲ್ಲಿ ಕನ್ನಡ ಮಾತನಾಡಬೇಕಲ್ವಾ ಎಂದು ಸ್ಥಳೀಯ ವ್ಯಕ್ತಿ ಪ್ರಶ್ನೆ ಮಾಡಿದ್ದಕ್ಕೆ, ನಾನು ಕನ್ನಡ ಮಾತನಾಡಲ್ಲಾ ಎಂದು ಡಿಸಿಸಿ ಬ್ಯಾಂಕ್ ಸಿಬ್ಬಂದಿ ಕಿರಿಕ್ ಮಾಡಿದ್ದಾರೆ. ಅಲ್ಲದೇ ಈ ರೀತಿ ಮಾತನಾಡಿ ಎಂದು ಹೇಳೋ ಕೆಲಸ ಮಾಡಬೇಡಿ ಎಂದು ದರ್ಪ ಮೆರೆದಿದ್ದಾರೆ. ಇದನ್ನೂ ಓದಿ: ಕುಡಿತಕ್ಕೆ ದಾಸನಾಗಿದ್ದ ಪತಿಯೊಂದಿಗೆ ಗಲಾಟೆ – ಮಗುವನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ
ಇದು ಕರ್ನಾಟಕ, ಮಹಾರಾಷ್ಟ್ರ ಅಲ್ಲ ಎಂದು ವ್ಯಕ್ತಿ ಹೇಳಿದ್ದಾರೆ. ಈ ವೇಳೆ ಬ್ಯಾಂಕ್‌ನಲ್ಲಿ ನಿಮ್ಮ ಅಕೌಂಟ್ ಇದೆಯಾ, ಇಲ್ಲವಾದ್ರೆ ಇಲ್ಲಿಂದ ಹೋಗಿ ಎಂದು ಸಿಬ್ಬಂದಿ ಕಿರಿಕ್ ಮಾಡಿದ್ದಾರೆ. ಅಜ್ಜನ ಬ್ಯಾಂಕ್ ಅಕೌಂಟ್ ಬಗ್ಗೆ ಮಾಹಿತಿ ಪಡೆಯಲು ಬಂದಿದ್ದ ವ್ಯಕ್ತಿ ಮೇಲೆಯ ಡಿಸಿಸಿ ಬ್ಯಾಂಕ್ ಸಿಬ್ಬಂದಿ ದರ್ಪ ತೋರಿದ್ದಾರೆ. ಇದನ್ನೂ ಓದಿ: ಕಾಲ್ತುಳಿತಕ್ಕೆ ಬಲಿಯಾಗಿದ್ದ ಮಗಳ ಕಿವಿಯೋಲೆ ಕಳವು – ಬೌರಿಂಗ್ ಆಸ್ಪತ್ರೆಯ ವಿರುದ್ಧ ದೂರು