ದರ್ಶನ್ ಬ್ಯಾನ್ ಮಾಡುವುದರಿಂದ ಪ್ರಯೋಜನವಿಲ್ಲ: ಬಿ.ಸಿ ಪಾಟೀಲ್

Public TV
1 Min Read

ಹಾವೇರಿ: ಚಿತ್ರರಂಗದಿಂದ ದರ್ಶನ್ ಬ್ಯಾನ್ (Darshan) ಮಾಡುವುದರಿಂದ ಪ್ರಯೋಜನವಿಲ್ಲ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ (BC Patil) ಹೇಳಿದ್ದಾರೆ.

ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy Case) ಕೊಲೆ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿ, ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು. ಕಾನೂನಿನ ಪ್ರಕಾರ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ತನಿಖೆ ಆಗಬೇಕು, ಆರೋಪಿಗಳನ್ನು ಕಾನೂನಿನ ಚೌಕಟ್ಟಿನಲ್ಲಿ ಹಿಡಿದು ಹಾಕಬೇಕು. ಈಗ ಬ್ಯಾನ್ ಮಾಡುವುದರಿಂದ ಪ್ರಯೋಜನವಿಲ್ಲ. ಈಗವರು ಜೈಲಿನಲ್ಲಿದ್ದಾರೆ. ದರ್ಶನ್ ಈಗ ಆರೋಪಿ ಎಂದು ಹೇಳಿದರು.

ಕೇಸಿನಲ್ಲಿ ತನಿಖೆಯಲ್ಲಿ ಯಾರ್ಯಾರ ಕೈವಾಡವಿದೆ ಎಂಬುದು ಬೆಳಕಿಗೆ ಬರುತ್ತದೆ. ಎಫ್‍ಐಆರ್ ಪ್ರಕಾರ ತನಿಖೆ ನಡೆಯುತ್ತದೆ. ದರ್ಶನ ಕಲಾವಿದ, ಸ್ನೇಹಿತನಾಗಿ ಪರಿಚಯ. ಅವರ ಬಳಿ ಯಾರ್ಯಾರು ಇದ್ದರು, ಏನು ಎಂಬುದು ನನಗೆ ಗೊತ್ತಿಲ್ಲ ಎಂದರು.

ಜನಪ್ರಿಯ ನಟನನ್ನು ರಾಯಭಾರಿ ಮಾಡಿದರೆ ರೈತರಿಗೆ ಅನುಕೂಲ ಆಗುತ್ತದೆ ಎಂದು ಮಾಡಿದ್ದೆವು. ಆವತ್ತು ದರ್ಶನ್ ಈ ರೀತಿಯ ಕೃತ್ಯಗಳಲ್ಲಿ ಭಾಗಿಯಾಗಿರಲಿಲ್ಲ ಎಂದು ಅವರು ಹೇಳಿದರು. ಇದನ್ನೂ ಓದಿ: ರಾಜಕಾಲುವೆಯಲ್ಲಿ ರೇಣುಕಾಸ್ವಾಮಿ ಮೊಬೈಲ್‌ ಹುಡುಕಾಟ

Share This Article