ಬೆಂಗಳೂರಲ್ಲಿ ಮಹಿಳೆಯ ಬರ್ಬರ ಹತ್ಯೆ- ಪಶ್ಚಿಮ ಬಂಗಾಳದಲ್ಲಿ ಹಂತಕ ತಲೆಮರೆಸಿಕೊಂಡಿರೋ ಶಂಕೆ

Public TV
1 Min Read

ಬೆಂಗಳೂರು: ವೈಯಾಲಿಕಾವಲ್‌ನಲ್ಲಿ (Vyalikaval) ಮಹಿಳೆಯನ್ನು ಕೊಲೆ ಮಾಡಿ ಪಶ್ಚಿಮ ಬಂಗಾಳದ (West Bengal) ಕಡೆ ಎಸ್ಕೇಪ್ ಆಗಿದ್ದ ಮಾಹಿತಿ ಹಿನ್ನೆಲೆ ಹಂತಕನಿಗಾಗಿ ಪೊಲೀಸರು ತೀವ್ರ ಹುಡಕಾಟ ನಡೆಸುತ್ತಿದ್ದಾರೆ.

ವೈಯಾಲಿಕಾವಲ್ ಠಾಣಾ ವ್ಯಾಪ್ತಿಯಲ್ಲಿ ಮಹಾಲಕ್ಷ್ಮಿ ಕೊಲೆ ಪ್ರಕರಣ ಹಿನ್ನೆಲೆ, ಪಶ್ಚಿಮ ಬಂಗಾಳದ ಕಡೆ ಎಸ್ಕೇಪ್ ಆಗಿರುವ ಮಾಹಿತಿ ಲಭ್ಯವಾಗಿದೆ. ಹಂತಕನಿಗಾಗಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸಿಸಿಟಿವಿ ಪರಿಶೀಲನೆ, ಕುಟುಂಬಸ್ಥರು ಹಾಗೂ ಸ್ನೇಹಿತರನ್ನು ಪೊಲೀಸರು ವಿಚಾರಣೆ ಮಾಡಿ ಮಾಹಿತಿ ಪಡೆಯುತ್ತಿದ್ದಾರೆ. ಪೋಸ್ಟ್ ಮಾರ್ಟಂ ವರದಿ, ಮೊಬೈಲ್, ಸೋಷಿಯಲ್ ಮೀಡಿಯಾ ಅಕೌಂಟ್‌ಗಳ ಪರಿಶೀಲನೆ ಸೇರಿ ಹಲವು ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಮಠ, ದೇವಾಲಯಗಳನ್ನ ಮುಜರಾಯಿ ಇಲಾಖೆಯಿಂದ ಮುಕ್ತಗೊಳಿಸಬೇಕು: ಮಂತ್ರಾಲಯ ಶ್ರೀ ಒತ್ತಾಯ

ಪ್ರಕರಣ ಏನು?
ಮಹಿಳೆಯೊಬ್ಬರನ್ನು ಭೀಕರವಾಗಿ ಕೊಲೆ ಮಾಡಿ 50 ತುಂಡುಗಳನ್ನಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟು ಆರೋಪಿ ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನ ವೈಯಾಲಿಕಾವಲ್‌ನ ವಿನಾಯಕನಗರದಲ್ಲಿ ನಡೆದಿದೆ.
ಮಹಾಲಕ್ಷ್ಮಿ (29) ಕೊಲೆಯಾದ ಮಹಿಳೆ. ವೈಯಾಲಿಕಾವಲ್‌ನ ಪೈಪ್‌ಲೈನ್ ರಸ್ತೆಯಲ್ಲಿ ಭೀಕರ ಹತ್ಯೆ ನಡೆದಿದೆ. ಮಹಿಳೆಯನ್ನು ಕೊಂದು ನಂತರ ಮೃತದೇಹವನ್ನು ಪೀಸ್ ಪೀಸ್ ಆಗಿ ಕತ್ತರಿಸಿ ಬಳಿಕ ಫ್ರಿಡ್ಜ್‌ನಲ್ಲಿಟ್ಟು ಆರೋಪಿ ಪರಾರಿಯಾಗಿದ್ದಾನೆ. ಹತ್ಯೆ ಬಳಿಕ ಮಾಂಸದ ಗುಡ್ಡೆ ಮಾಡಿ ತರಕಾರಿ ಜೋಡಿಸುವಂತೆ ಮೃತದೇಹದ ಭಾಗಗಳನ್ನು ಫ್ರಿಡ್ಜ್‌ನಲ್ಲಿ ಇರಿಸಿ ಆರೋಪಿ ಎಸ್ಕೇಪ್ ಆಗಿದ್ದಾನೆ. 15 ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ದಸರಾ ಆನೆ ಸೊಂಡಿಲು, ದಂತ ಹಿಡಿದು ರೀಲ್ಸ್ – ಅರಣ್ಯಾಧಿಕಾರಿಗಳ ದಿವ್ಯ ನಿರ್ಲಕ್ಷ್ಯ

2-3 ತಿಂಗಳಿನಿಂದ ಮಹಿಳೆ ಮನೆಯಲ್ಲಿ ಬಾಡಿಗೆಗಿದ್ದರು. ಸಂಬಂಧಿಕರು ಬೀಗ ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ವೈಯಾಲಿಕಾವಲ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಹಾಲಕ್ಷ್ಮಿ ಬೇರೆ ರಾಜ್ಯದವರಾಗಿದ್ದು, ಕರ್ನಾಟಕದಲ್ಲಿ ನೆಲೆಸಿದ್ದರು. ಗಂಡನಿಂದ ದೂರವಾಗಿದ್ದ ಮಹಾಲಕ್ಷ್ಮಿ ಒಬ್ಬಳೇ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಆರೋಪಿಯ ಪತ್ತೆಗಾಗಿ ತನಿಖೆ ಮುಂದುವರೆದಿದೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಮರಕ್ಕೆ ಕಾರು ಡಿಕ್ಕಿ ಹೊಡೆದು ಯುವಕ ಸಾವು

Share This Article