ಬೆಳಗಾವಿ | ಯುವಕನ ಎದೆಗೆ ಚಾಕು ಇರಿದು ಬರ್ಬರ ಹತ್ಯೆ – ಐವರ ಮೇಲೆ ಶಂಕೆ

Public TV
1 Min Read

ಬೆಳಗಾವಿ: ಹಾಡಹಗಲೇ ಯುವಕನೊಬ್ಬನಿಗೆ ಚಾಕು ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಸವದತ್ತಿ (Savadatti) ತಾಲೂಕಿನ ಮುರಗೋಡ ಗ್ರಾಮದ ಹೊರ ವಲಯದಲ್ಲಿ ನಡೆದಿದೆ.

ಹತ್ಯೆಯಾದ ಯುವಕನನ್ನು ಸೋಹಿಲ್ ಅಹ್ಮದ್ ಕಿತ್ತೂರು (17) ಎಂದು ಗುರುತಿಸಲಾಗಿದೆ. ಯುವಕ ಗ್ರಾಮದಲ್ಲಿ ಎಗ್‍ರೈಸ್ ಅಂಗಡಿ ಇಟ್ಟುಕೊಂಡಿದ್ದ. ಆತನನ್ನು ಐವರು ಯುವಕರು ಹತ್ಯೆಗೈದಿದ್ದಾರೆ ಎಂದು ಶಂಕಿಸಲಾಗಿದೆ.

ಈ ಹಿಂದೆ ಕೆಲವು ಯುವಕರಿಂದ ಮೃತನಿಗೆ ಕೊಲೆ ಬೆದರಿಕೆ ಬಂದಿತ್ತು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಮುರಗೋಡು ಪೊಲೀಸರು, ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಯುವಕನ ಹತ್ಯೆ ಖಂಡಿಸಿ ಮುರಗೋಡ ಪೊಲೀಸ್ ಠಾಣೆ ಮುಂದೆ ಯುವಕನ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Share This Article