ವಿಜಯೇಂದ್ರ ಯಡಿಯೂರಪ್ಪಗೆ ಹೊರಗೆ ಪೂಜ್ಯ ತಂದೆ, ಮನೇಲಿ ಮುದಿಯಾ ಅಂತಾನೆ – ಯತ್ನಾಳ್

Public TV
1 Min Read

ವಿಜಯಪುರ: ಯಡಿಯೂರಪ್ಪಗೆ ಮನೆಯಲ್ಲಿ ಕಿಮ್ಮತ್ತಿಲ್ಲ, ವಿಜಯೇಂದ್ರ ಹೊರಗಡೆ ಪೂಜ್ಯ ತಂದೆ, ಮನೆಯಲ್ಲಿ ಮುದಿಯಾ ಎಂದು ಕರೆಯುತ್ತಾನೆ ಎಂದು ವಿಜಯಪುರ (Vijayapura) ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹೇಳಿದರು.

ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ (BY Vijayendra) ಮಾಡಿದ ತಪ್ಪಿನಿಂದಲೇ ಯಡಿಯೂರಪ್ಪ (BS Yediyurappa) ಜೈಲಿಗೆ ಹೋದದ್ದು, ಅವನಿಂದಲೇ ಹಾಳಾಗಿದ್ದು, ಮೊದಲು ಮಗನ ವ್ಯಾಮೋಹ ಬಿಡಲಿ. ಯಡಿಯೂರಪ್ಪಗೆ ಮನೆಯಲ್ಲಿ ಕಿಮ್ಮತ್ತಿಲ್ಲ. ಹೊರಗಡೆ ಪೂಜ್ಯ ತಂದೆ, ಮನೆಯಲ್ಲಿ ಮುದಿಯಾ ಎಂದು ಕರೆಯುತ್ತಾನೆ. ಯಡಿಯೂರಪ್ಪ ಕೂಡ ಎಷ್ಟು ಜನರಿಗೆ ಮೋಸ ಮಾಡಿಲ್ಲ. ಬಿಬಿ ಶಿವಪ್ಪ, ಮಲ್ಲಿಕಾರ್ಜುನಯ್ಯ ಅವರಿಗೆ ಅನ್ಯಾಯ ಮಾಡಿದ್ದಾನೆ. ತಮ್ಮ ಸ್ವಾರ್ಥಕ್ಕಾಗಿ ಅನೇಕರನ್ನು ಮಣ್ಣಲ್ಲಿ ಇಟ್ಟಿದ್ದಾರೆ. ಸುಮ್ಮನೇ ಮೊಮ್ಮಕ್ಕಳ ಜೊತೆ ಆಟ ಆಡುತ್ತಾ ಕೂಡಲಿ ಎಂದು ವಾಗ್ದಾಳಿ ನಡೆಸಿದರು.ಇದನ್ನೂ ಓದಿ: ಪೆಟ್ರೋಲ್ ಟ್ಯಾಂಕರ್ ಪಲ್ಟಿ, ಕ್ಯಾನ್‌ನಲ್ಲಿ ತುಂಬಿಕೊಳ್ಳುತ್ತಿದಾಗ ಸ್ಫೋಟ – 70 ಮಂದಿ ಸಾವು

ನಮ್ಮ ವಿರುದ್ಧ ಎರಡು ಹಂದಿಗಳು ಬಿಟ್ಟರೆ ಬೇರೆ ಯಾರೂ ಮಾತನಾಡಲ್ಲ. ಆ ಹಂದಿಗಳಿಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ವಿಜಯೇಂದ್ರ ಪರ ಹೊಗಳು ಭಟರು ಮಾತ್ರ ಮಾತನಾಡುತ್ತಾರೆ ಎಂದು ವ್ಯಂಗ್ಯವಾಡಿದರು.

ನಾನು ಸದಾಕಾಲ ರಮೇಶ್ ಜಾರಕಿಹೊಳಿ ಪರವಾಗಿದ್ದೇನೆ. ವಿಜಯೇಂದ್ರ ರಾಜ್ಯಾಧ್ಯಕ್ಷನಾಗಲು ಲಾಯಕ್ಕಿಲ್ಲ. ಅವನನ್ನು ನಾವ್ಯಾರು ಒಪ್ಪಲ್ಲ, ಅವನು ಕೂಡ ರಾಜೀನಾಮೆ ಕೊಡಬೇಕು. ಇವನಿಂದಲೇ ಪಾಪ ಸುನೀಲ್ ಕುಮಾರ್ ಕಾರ್ಯದರ್ಶಿ ಸ್ಥಾನದಿಂದ ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ ಅಂತಾ ಇದೆ. ರಮೇಶ್ ಜಾರಕಿಹೊಳಿ ಅವರು ಮಾತನಾಡಿರುವುದರಲ್ಲಿ ತಪ್ಪೇನಿಲ್ಲ. ನಾವು ಉತ್ತರ ಕರ್ನಾಟಕದ ಜನರು ಹೀಗೇ, ಸತೀಶ್ ಜಾರಕಿಹೊಳಿ ಅವರು ಹೇಳಿದ್ದಾಗ ಕೂಡ ನಾನು ಒಬ್ಬನೆ ಹೋಗಿದ್ದೆ. ನಾವು ಯಾರಿಗೂ ಹೆದರಲ್ಲ ಎಂದು ಕಿಡಿಕಾರಿದರು.ಇದನ್ನೂ ಓದಿ: ಬ್ರೇಕ್ ಫೇಲ್ ಆಗಿ ಡಾಬಾ, ಬೀಡಾ ಅಂಗಡಿಗೆ ಗುದ್ದಿದ ಬಿಎಂಟಿಸಿ ಬಸ್!

Share This Article