ಬೆಂಗಳೂರು: ವಿಧಾನಸಭೆಯಲ್ಲಿ ಅಂಗೀಕಾರಗೊಂಡ ರೂಪದಲ್ಲಿ ಇಂದು ವಿಧಾನ ಪರಿಷತ್‌ನಲ್ಲಿ (Karnataka Legislative Council ಸಚಿವ ಕೃಷ್ಣ ಬೈರೇಗೌಡ ಅವರು ಮಂಡಿಸಿದ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ-2025ಕ್ಕೆ ಅನುಮೋದನೆ ಸಿಕ್ಕಿದೆ.
ಕಳೆದ ವಿಧಾನ ಮಂಡಲ ಅಧಿವೇಶನದ ಸಂದರ್ಭದಲ್ಲೇ ಬಸವನ ಬಾಗೇವಾಡಿ ಅಭಿವೃದ್ದಿ ಪ್ರಾಧಿಕಾರದಲ್ಲಿ (Basavana Bagewadi Development Authority) ಸ್ಥಳೀಯ ವಿಧಾನ ಪರಿಷತ್ ಸದಸ್ಯರಿಗೂ ಸ್ಥಾನ ನೀಡಬೇಕು ಎಂದು ಸ್ವತಃ ಪರಿಷತ್ ಸಭಾಪತಿಗಳಾದ ಬಸವರಾಜ್ ಹೊರಟ್ಟಿ ಅವರು ಒತ್ತಾಯಿಸಿದ್ದರು. ಆ ಸಂದರ್ಭದಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರೂ ಸಹ ಸಭಾಪತಿಗಳ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ಇದನ್ನೂ ಓದಿ: ನಮಸ್ತೇ ಸದಾ ವತ್ಸಲೇ ಎಂದು ಆರ್‌ಎಸ್‌ಎಸ್ ಗೀತೆ ಹಾಡಿದ ಡಿಕೆಶಿ – ಕಾಲೆಳೆದ ಬಿಜೆಪಿ ನಾಯಕರು
ಇಂದು ಸಭಾಪತಿಗಳಿಗೆ ಕೊಟ್ಟ ಮಾತಿನಂತೆ ಸಚಿವ ಕೃಷ್ಣ ಬೈರೇಗೌಡ ಅವರು ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರದಲ್ಲಿ ಸದಸ್ಯ ತಂಡದಲ್ಲಿ ಪರಿಷತ್ ಸದಸ್ಯರಿಗೂ ಸಹ ಸ್ಥಾನ ಕಲ್ಪಿಸುವ ತಿದ್ದುಪಡಿಯನ್ನು ತಂದಿದ್ದಾರೆ. ಇಂದು ಆ ತಿದ್ದುಪಡಿ ಪರಿಷತ್‌ನಲ್ಲಿ ಮಂಡಿಸಲ್ಪಟ್ಟು ಅಂಗೀಕಾರಗೊಂಡಿದೆ. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತದಿಂದ ತುಂಬಾ ಡಿಸ್ಟರ್ಬ್ ಆಗಿದ್ದೇನೆ, ನನ್ನ ರಾಜಕೀಯ ಬದುಕಿನಲ್ಲೇ ಬಹಳ ದು:ಖ ಕೊಟ್ಟ ಘಟನೆ – ಸಿಎಂ ಭಾವುಕ