ಅಗ್ನಿಪಥ್ ಯೋಜನೆಗೆ ಪ್ರತಿಭಟನೆ- ಕಾಂಗ್ರೆಸ್ ಬೆಂಕಿಗೆ ತುಪ್ಪ ಹಾಕುವ ಕೆಲಸ ಮಾಡುತ್ತಿದೆ: ಸಿಎಂ

By
2 Min Read

ಬೆಂಗಳೂರು: ಕಾಂಗ್ರೆಸ್ ಬೆಂಕಿಗೆ ತುಪ್ಪ ಹಾಕುವ ಕೆಲಸವನ್ನು ಇಡೀ ದೇಶದಲ್ಲಿ ಮಾಡುತ್ತಿದೆ ಎನ್ನುವುದಕ್ಕೆ ಖಾನಾಪುರ ಶಾಸಕರು ಧರಣಿ ಮಾಡುತ್ತಿರುವುದು ಸಾಕ್ಷಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಗ್ನಿಪಥ್ ಒಂದು ವಿನೂತನ ಕಾರ್ಯಕ್ರಮ. ಇಡೀ ಜಗತ್ತಿನಲ್ಲಿ ಯುವಕರಿಗೆ ಮಿಲಿಟರಿ ತರಬೇತಿ ನೀಡುವ ವ್ಯವಸ್ಥೆ ಇದೆ. 17 – 21 ವರ್ಷ ಉತ್ತಮ ತರಬೇತಿ ಪಡೆದರೆ, ಬೇರೆ ಅವಕಾಶಗಳು ಸಿಗುತ್ತವೆ. ಮಿಲಿಟರಿ ಹಾಗೂ ಅರೆಮಿಲಿಟರಿ ಪಡೆಗಳಲ್ಲಿ ಅವಕಾಶ ಸಿಗಲಿದೆ ಎಂದು ಹೇಳಿದರು.

Congress

ಸಶಕ್ತ ಯುವಕರ ಜನಸಂಖ್ಯೆಯನ್ನು ಸಿದ್ಧ ಮಾಡುವ ದೃಷ್ಟಿಯಿಂದ ಹಾಗೂ ಸಶಸ್ತ್ರ ಪಡೆಗಳಲ್ಲಿ ಯುವಶಕ್ತಿ ಯನ್ನು ತುಂಬುವ ಮಹತ್ವಾಕಾಂಕ್ಷೆ ಇದೆ. ಪರೀಕ್ಷೆ ಬರೆದವರಿಗೆ ಆತಂಕ ಇದೆ. ಅದನ್ನು ಕೇಂದ್ರ ಸರ್ಕಾರ ಗಮನಿಸಿ ಪರಿಹಾರ ನೀಡುವ ವಿಶ್ವಾಸವಿದೆ. ಆದರೆ ಈ ನೆಪದಲ್ಲಿ ರೈಲುಗಳಿಗೆ ಬೆಂಕಿ ಹಚ್ಚುವುದು, ಖಂಡಿತವಾಗಿಯೂ ಕ್ಷಮಿಸಲಾಗದ ಅಪರಾಧ. ಪ್ರಯಾಣಿಕರಿಗೆ ತೊಂದರೆ, ಆಸ್ತಿಪಾಸ್ತಿ ನಷ್ಟವಾಗಿದೆ. ಜವಾಬ್ದಾರಿ ಇರುವವರು ಯಾರೂ ಈ ರೀತಿ ಮಾಡುವುದಿಲ್ಲ. ಇದೊಂದು ರಾಜಕೀಯ ಪ್ರೇರಿತ ಕೃತ್ಯ. ಜನ ಸ್ವಲ್ಪ ದಿನಗಳಲ್ಲಿಯೇ ಅರ್ಥ ಮಾಡಿಕೊಳ್ಳುತ್ತಾರೆ ಎಂದರು.

ದೇಶ, ನಾಡು ಕಟ್ಟಿದವರ ಗೌರವ ಕಾಪಾಡಲು ಸಿದ್ಧ: ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಾತನಾಡಿ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಸ್ವಾಮೀಜಿಗಳು ನೀಡಿರುವ ಮನವಿಯನ್ನು ತರಿಸಿಕೊಂಡು ಏನೆಲ್ಲಾ ಬದಲಾವಣೆ ಮಾಡಬೇಕೋ ಅದನ್ನು ಮುಕ್ತ ಮನಸ್ಸಿನಿಂದ ಕೈಗೊಳ್ಳಲಾಗುವುದು. ಇದನ್ನು ಪ್ರತಿಷ್ಠೆ ಎಂದು ಪರಿಗಣಿಸಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಅಗ್ನಿಪಥ್ ಯೋಜನೆ ವಿರುದ್ಧ ಯುವಕರನ್ನು ಕಾಂಗ್ರೆಸ್‍ ಬೇಕೆಂದು ಪ್ರಚೋದಿಸುತ್ತಿದೆ: ಬಿ.ಸಿ.ಪಾಟೀಲ್

ಪಠ್ಯದ ಕುರಿತು ಆಕ್ಷೇಪವಿದ್ದರೆ, ಅದನ್ನು ನಿವಾರಿಸಲು ಸಿದ್ಧರಿದ್ದೇವೆ. ಭಾರತ ಹಾಗೂ ಕರ್ನಾಟಕ ಕಟ್ಟಲು ಶ್ರಮಿಸಿರುವ ಹಿರಿಯರು, ರಾಜಮಹಾರಾಜರು, ಸಾಹಿತಿಗಳು, ಕಲಾಕಾರರು, ಜ್ಞಾನಪೀಠ ವಿಜೇತರ ಬಗ್ಗೆ ಅಪಾರ ಗೌರವವಿದೆ. ಯಾವುದೇ ಕಾರಣಕ್ಕಾಗಿ ಅವರಿಗೆ ನೀಡುವ ಗೌರವದಲ್ಲಿ ರಾಜಿ ಮಾಡಿಕೊಳ್ಳಲು ಸರ್ಕಾರ ಸಿದ್ಧವಿಲ್ಲ. ಅವರ ಗೌರವ ಉಳಿಸಲು ಹಾಗೂ ಮುಂದಿನ ಜನಾಂಗಕ್ಕೆ ಅವರ ಬಗ್ಗೆ ತಿಳಿಸಲು ಯಾವುದೇ ಮಟ್ಟಕ್ಕೊ ಹೋಗಲು ತಯಾರು ಎಂದರು.

ಪ್ರಧಾನಿ ಭೇಟಿಗೆ ಸಕಲ ಸಿದ್ಧತೆ: ಪ್ರಧಾನಮಂತ್ರಿಗಳ ಎರಡು ದಿನಗಳ ರಾಜ್ಯ ಪ್ರವಾಸಕ್ಕೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಇದೇ ವೇಳೆ ತಿಳಿಸಿದರು. ಇದನ್ನೂ ಓದಿ: ಗೌರವಾನ್ವಿತ ಮುಠ್ಠಾಳರನ್ನು ಪಠ್ಯ ಸಮಿತಿಗೆ ನೇಮಕ ಮಾಡಿದ್ದೇ ತಪ್ಪು: ಕುಂ.ವೀರಭದ್ರಪ್ಪ ಆಕ್ರೋಶ

Live Tv

Share This Article
Leave a Comment

Leave a Reply

Your email address will not be published. Required fields are marked *