ಬೆಂಗಳೂರು: ಕಾಂಗ್ರೆಸ್ ಪಕ್ಷ ಈ ಪಾದಯಾತ್ರೆಯನ್ನು ಯಾಕೆ ಮಾಡುತ್ತಿದೆ ಎನ್ನುವ ಪ್ರಶ್ನೆ ಸಾರ್ವಜನಿಕರಿಗೆ ಈಗಾಗಲೆ ತಿಳಿದಿದೆ. ಚುನಾವಣೆ ಹತ್ತಿರ ಬಂದಿದೆ ಅಂತ ರಾಜಕೀಯ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಐದು ವರ್ಷಗಳು ಸರ್ಕಾರದಲ್ಲಿದ್ದಾಗ ಡಿಪಿಆರ್ ಸರಿಯಾಗಿ ಮಾಡಲು ಆಗಲಿಲ್ಲ. ನಂತರ ಸಮ್ಮಿಶ್ರ ಸರ್ಕಾರದಲ್ಲಿ ಡಿಪಿಆರ್ ಮಾಡಿದ್ದರು. ಅವರಿಗೆ ಯಾವುದೇ ಬದ್ಧತೆ ಇಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಡಿಕೆಶಿ ನೀರಾವರಿ ಸಚಿವರಾಗಿದ್ದರು ಆಗ ಏನೂ ಮಾಡಲಿಲ್ಲ. ಕಳೆದ ಮೂರು ವರ್ಷಗಳು ಈ ವಿಚಾರವಾಗಿ ಎಲ್ಲೂ ಚರ್ಚೆ ಕೂಡ ಆಗಿಲ್ಲ. ಆದರೆ ಚುನಾವಣೆ ಹತ್ತಿರ ಬಂದಿದೆ ಎಂದು ರಾಜಕೀಯ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಇದನ್ನೂ ಓದಿ: ರೈತ ಗೀತೆ ಮೂಲಕ ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್ ಚಾಲನೆ
ಬಹುತೇಕ ತಾವು ಕೆಲಸ ಮಾಡಿಲ್ಲ ಎಂಬ ಅಪರಾಧ ಮನೋಭಾವ ಅವರನ್ನು ಕಾಡುತ್ತಿದೆ. ನೀರಾವರಿ ಯೋಜನೆ ಬಗ್ಗೆ ಬದ್ಧತೆಯಿಂದ ಕೆಲಸ ಮಾಡುತ್ತಿಲ್ಲ, ಬದಲಾಗಿ ಜನರನ್ನು ಮರಳು ಮಾಡಲು ಕಾಂಗ್ರೆಸ್ ಅವರು ಈ ಕೆಲಸ ಮಾಡುತ್ತಿದ್ದಾರೆ. ಇದು ರಾಜಕೀಯ ಪ್ರೇರಿತ ಕಾಂಗ್ರೆಸ್ ಪಾದಯಾತ್ರೆಯಾಗಿದೆ. ಮೇಕೆದಾಟು ಪಾದಯಾತ್ರೆಯಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದು, ನೋಟಿಸ್ ಕೊಟ್ಟಿದ್ದೇವೆ. ನಾವು ಬದ್ಧತೆಯಿಂದ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜನಸಾಮಾನ್ಯರಿಗೊಂದು, ಕಾಂಗ್ರೆಸ್ಗೆ ಒಂದು ಕಾನೂನು ಇಲ್ಲ: ಆರಗ ಜ್ಞಾನೇಂದ್ರ
ರಾಜ್ಯದ ಅಭಿವೃದ್ಧಿಗೆ, ಯಶಸ್ಸಿಗೆ ಕಾರಣವಾಗುವ ಮೇಕೆದಾಟು ಯೋಜನೆ ಜಾರಿಗಾಗಿ ಕೋವಿಡ್ ನಿಯಮಗಳನ್ನು ಮರೆಯದೆ ಪಾಲಿಸುತ್ತಾ ಈ ಐತಿಹಾಸಿಕ ನೀರಿಗಾಗಿ ನಡಿಗೆಯಲ್ಲಿ ನಾವು ನೀವೆಲ್ಲ ಸೇರಿ ಹೆಜ್ಜೆ ಹಾಕೋಣ.
– @DKShivakumarನಮ್ಮ ನೀರು, ನಮ್ಮ ಹಕ್ಕು.#MekedatuPadayatre pic.twitter.com/OtxObqOMyz
— Karnataka Congress (@INCKarnataka) January 9, 2022
ಇಂದಿನಿಂದ ಜನವರಿ 18ರವರೆಗೆ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ನಡೆಯಲಿದೆ. ಕಾರ್ಯಕ್ರಮದಕ್ಕೆ ಇಂದು ಚಾಲನೆ ನೀಡಲಾಗಿದೆ. ನಮ್ಮ ನೀರು ನಮ್ಮ ಹಕ್ಕು ಘೋಷ ವಾಕ್ಯದೊಂದಿಗೆ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ನಡೆಸುತ್ತಿದೆ. ಪಾದಯಾತ್ರೆ ಸಂಜೆಯ ವೇಳೆಗೆ ಕನಕಪುರವನ್ನು ತಲುಪಲಿದೆ.