ಮಕ್ಕಳಿಗೆ ವಿದ್ಯೆಗಿಂತ ಮತ್ತೊಂದಿಲ್ಲ, ನ್ಯಾಯಾಲಯ ಕೊಟ್ಟಿರುವ ತೀರ್ಪನ್ನು ಪಾಲಿಸಬೇಕು: ಬೊಮ್ಮಾಯಿ

Public TV
1 Min Read

ಬೆಂಗಳೂರು: ಮಕ್ಕಳಿಗೆ ವಿದ್ಯೆಗಿಂತ ಮತ್ತೊಂದಿಲ್ಲ. ನ್ಯಾಯಾಲಯ ಕೊಟ್ಟಿರುವ ತೀರ್ಪನ್ನು ಪಾಲಿಸಬೇಕು. ಸಮಾಜದಲ್ಲಿ ಶಾಂತಿಯನ್ನು ಕಾಪಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಹೈ ಕೋಟ್ ಹಿಜಬ್ ತೀರ್ಪು ನೀಡಿದ ಹಿನ್ನೆಲೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಜಬ್‌ ಇಸ್ಲಾಂ ಧರ್ಮದ ಅಗತ್ಯದ ಆಚರಣೆ ಅಲ್ಲ ಎಂದು ಕೋರ್ಟ್ ತೀರ್ಪು ನೀಡಿದೆ. ಮಕ್ಕಳಿಗೆ ವಿದ್ಯೆಗಿಂತ ಮತ್ತೊಂದಿಲ್ಲ. ತ್ರೀ ಸದಸ್ಯ ಪೀಠ ನೀಡಿರುವ ತೀರ್ಪನ್ನು ಎಲ್ಲರೂ ಸಹ ಪಾಲಿಸಬೇಕು. ಇದನ್ನು ಅನುಷ್ಠಾನಗೊಳಿಸುವ ಸಮಯದಲ್ಲಿ ಎಲ್ಲರೂ ಸಹಕರಿಸಿ ಶಾಂತಿಯನ್ನು ಪಾಲಿಸಬೇಕು. ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಬಹಳ ಮುಖ್ಯ. ಹಾಗಾಗಿ ನಾನು ಎಲ್ಲ ಜನರಿಗೂ, ಸಮುದಾಯ ನಾಯಕರಿಗೂ, ಪಾಲಕರಿಗೂ, ಶಿಕ್ಷಕರಿಗೂ ಹಾಗೂ ವಿದ್ಯಾರ್ಥಿಗಳು ಈ ತೀರ್ಪನ್ನು ಒಪ್ಪಿಕೊಂಡು ಶಾಂತಿ ಸುವ್ಯಸ್ಥೆಯನ್ನು ಕಾಪಾಡಬೇಕು ಎಂದು ನಾನು ಎಲ್ಲರಲ್ಲಿಯೂ ಕಳಕಳಿಯಿಂದ ವಿನಂತಿಸುತ್ತೇನೆ. ಇದನ್ನೂ ಓದಿ: 6 ವಿದ್ಯಾರ್ಥಿನಿಯರು ಹಠ ಮಾಡದೇ ಶಾಲೆಗೆ ಬರ್ಬೇಕು, ಸಮವಾದ ಶಿಕ್ಷಣ ನೀಡುತ್ತೇವೆ: ರಘುಪತಿ ಭಟ್

ಎಲ್ಲ ವಿದ್ಯಾರ್ಥಿಗಳು ಹೈ ಕೋರ್ಟ್ ತೀರ್ಪನ್ನು ಪಾಲಿಸಿ. ನಿಮ್ಮ ಶಿಕ್ಷಣ ನಿಮಗೆ ಬಹಳ ಮುಖ್ಯ. ಪರೀಕ್ಷೆಗೆ ಹಾಜರಾಗದೇ ಇರುವುದನ್ನು ಬಿಟ್ಟು. ಎಲ್ಲ ವಿದ್ಯಾರ್ಥಿಗಳು ತರಗತಿಗೆ, ಪರೀಕ್ಷೆಗೆ ಆಗಮಿಸಿ. ಒಂದು ವೇಳೆ ಹೈಕೋರ್ಟ್ ತೀರ್ಪನ್ನು ನಿರಾಕರಿಸಿ ಕಾನೂನು ಸುವ್ಯಸ್ಥೆಯನ್ನು ಕೈಗೆತ್ತಿಕೊಂಡರೆ ನಮ್ಮ ಗೃಹ ಇಲಾಖೆ ಕಠಿಣವಾದ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಹಿಜಬ್‌ ಇಸ್ಲಾಂ ಧರ್ಮದ ಅಗತ್ಯದ ಆಚರಣೆ ಅಲ್ಲ: ಹೈಕೋರ್ಟ್‌ ಐತಿಹಾಸಿಕ ತೀರ್ಪು

Share This Article
Leave a Comment

Leave a Reply

Your email address will not be published. Required fields are marked *