ಕೆಪಿಸಿಸಿಗೆ 50 ಸಾವಿರ ದಂಡ ವಿಧಿಸಿದ ಬಿಬಿಎಂಪಿ

Public TV
1 Min Read

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು (BBMP) ಕೆಪಿಸಿಸಿಗೆ 50 ಸಾವಿರ ದಂಡವನ್ನು ವಿಧಿಸಿದೆ.

ಫ್ಲೆಕ್ಸ್, ಬ್ಯಾನರ್ ನಿಷೇಧದ ಮಧ್ಯೆಯೂ ಕೆಪಿಸಿಸಿ ಕಚೇರಿ ಮುಂಭಾಗ ಬೃಹತ್ ಬ್ಯಾನರ್ ಅಳವಡಿಕೆ ಮಾಡಲಾಗಿತ್ತು. ಮಾಜಿ ಪ್ರಧಾನಿ ರಾಜೀವ್ ಗಾಂಧಿ (Rajeev Gandhi) ಮತ್ತು ದಿವಂಗತ ಮಾಜಿ ಸಿಎಂ ದೇವರಾಜ್ ಅರಸು (Devaraj Urs) ಅವರ ಹುಟ್ಟುಹಬ್ಬದ (Birthday Banner) ಬ್ಯಾನರ್ ಇದಾಗಿತ್ತು.

ವಸಂತನಗರ ವಾರ್ಡ್-93 ವ್ಯಾಪ್ತಿಯ ಕ್ಲೀನ್ಸ್ ರಸ್ತೆಯ ಮಿಲ್ಲರ್ ಟ್ಯಾಂಕ್ ಬೆಡ್ ಏರಿಯಾದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗ, ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು, ಹಾಗೂ ರಾಜ್ಯದ ಎಲ್ಲಾ ಪಧಾಧಿಕಾರಿಗಳು ಮಾಜಿ ಪ್ರಧಾನಿ  ದಿ. ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜ ಅರಸುರವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿ ಅನಧಿಕೃತವಾಗಿ ಬ್ಯಾನರ್ ಅಳವಡಿಸಿರುವುದು ಪತ್ತೆಯಾಗಿದೆ.

ಸ್ವತ್ತಿನಲ್ಲಿ ಅನಧಿಕೃತವಾಗಿ ಬ್ಯಾನರ್ ಅಳವಡಿಸಿರುವ ಬಗ್ಗೆ ಪಾಲಿಕೆವತಿಯಿಂದ ಅಧಿಕೃತವಾಗಿ ಅನುಮತಿಯನ್ನು ಪಡೆದಿರುವುದಿಲ್ಲ. ಈ ಸಂಬಂಧ ಅಧ್ಯಕ್ಷರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ, ಬೆಂಗಳೂರು ರವರಿಗೆ 50,000 ರೂ.ಗಳ ದಂಡವನ್ನು ವಿಧಿಸಲಾಗಿದ್ದು, ಮಾನ್ಯ ಮುಖ್ಯ ಆಯುಕ್ತರು ರವರ ಖಾತೆಗೆ ದಂಡದ ಮೊತ್ತ ಪಾವತಿಸುವಂತೆ ಸೂಚಿಸಲಾಗಿರುತ್ತದೆ ಎಂದು ಬಿಬಿಎಂಪಿ ನೋಟಿಸ್‍ನಲ್ಲಿ ತಿಳಿಸಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್