ಆಸ್ತಿ ತೆರಿಗೆ ಬಾಕಿ – ವಿಧಾನಸೌಧ, ರಾಜಭವನ ಸೇರಿ 258 ಸರ್ಕಾರಿ ಕಟ್ಟಡಗಳಿಗೆ ಬಿಬಿಎಂಪಿ ನೋಟೀಸ್

Public TV
1 Min Read

ಬೆಂಗಳೂರು: ವಿಧಾನಸೌಧ, ರಾಜಭವನ (Raj Bhavan) ಸೇರಿ ಆಸ್ತಿ ತೆರಿಗೆ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಒಟ್ಟು 258 ಸರ್ಕಾರಿ ಕಟ್ಟಡಕ್ಕೆ ಬಿಬಿಎಂಪಿ ನೋಟಿಸ್‌ ನೀಡಿದೆ.

ಈಗಾಗಲೇ ರಾಜ್ಯಾದ್ಯಂತ ಬಹುತೇಕ ಸರ್ಕಾರಿ ಇಲಾಖೆಗಳು (Government Departments) ಬರೋಬ್ಬರಿ 8 ಸಾವಿರ ಕೋಟಿ ರೂ.ಗಳಷ್ಟು ವಿದ್ಯುಲ್ ಬಿಲ್ ಬಾಕಿ ಉಳಿಸಿಕೊಂಡಿವೆ. ಈ ಬೆನ್ನಲ್ಲೇ ಇಂತಹದ್ದೊಂದು ಸ್ಫೋಟಕ ಅಂಶ ಬೆಳಕಿಗೆ ಬಂದಿದೆ. ಖುದ್ದು ಬಿಬಿಎಂಪಿ ಅಧಿಕಾರಿಗಳೇ ಈ ಬಗ್ಗೆ ʻಪಬ್ಲಿಕ್‌ ಟಿವಿʼಗೆ ಮಾಹಿತಿ ನೀಡಿದ್ದಾರೆ.

ಹೌದು. ವಿಧಾನಸೌಧ (Vidhana Soudha), ವಿಕಾಸ ಸೌಧ, ರಾಜಭವನ ಸೇರಿ ಅನೇಕ ಸರ್ಕಾರಿ ಕಟ್ಟಗಳು ಕೋಟಿಗಟ್ಟಲೆ ಆಸ್ತಿ ತೆರಿಗೆ (Property Tax) ಬಾಕಿ ಉಳಿಸಿಕೊಂಡಿವೆ. ಈಗಾಗಲೇ ನೋಟಿಸ್‌ ಸಹ ನೀಡಲಾಗಿದೆ. ಈ ಪೈಕಿ ಕೆಲವು ಕಟ್ಟಡಗಳು 17 ವರ್ಷಗಳಿಂದ ತೆರಿಗೆ ಬಾಕಿ ಉಳಿಸಿಕೊಂಡಿವೆ. ಹೀಗಾಗಿ ಆಯಾ ಇಲಾಖೆ ಮುಖ್ಯಸ್ಥರಿಗೆ ತೆರಿಗೆ ಪಾವತಿಸುವಂತೆ ನೋಟಿಸ್‌ ನೀಡಲಾಗಿದೆ.

ಒಂದು ವೇಳೆ ತೆರಿಗೆ ಪಾವತಿ ಮಾಡದಿದ್ದರೆ, ಸರ್ಕಾರದ ಗಮನಕ್ಕೆ ತಂದು ಮುಂದಿನ ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ಅಧಿಕಾರಿ ತಿಳಿಸಿದ್ದಾರೆ.

Share This Article