ವ್ಯಕ್ತಿಯೊಬ್ಬನಿಂದ ಕಿರುಕುಳ ಆರೋಪ – ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡ್ತಿದ್ದ ಮಹಿಳೆ ಆತ್ಮಹತ್ಯೆ

Public TV
1 Min Read

ಬೆಂಗಳೂರು: ಬಿಬಿಎಂಪಿ ಕಚೇರಿಯಲ್ಲಿ (BBMP Office) ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಮನೆಯಲ್ಲಿ ಯಾರೂ ಇಲ್ಲದಿದ್ದಾಗ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜಪೇಟೆಯಲ್ಲಿ (Chamarajpet) ನಡೆದಿದೆ.

ನಂದಿನಿ (32) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಫೆ.23ರ ರಾತ್ರಿ 9:30ರ ವೇಳೆಗೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮನೆಯಲ್ಲಿ ಯಾರೂ ಇಲ್ಲದಾಗ ನೇಣು ಬಿಗಿದುಕೊಂಡು ನಂದಿನಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ನೋಡಿ ಪೊಲೀಸರು ಬರುವ ಮುನ್ನವೇ ಕುಟುಂಬಸ್ಥರು ಮೃತದೇಹ ಕೆಳಗೆ ಇಳಿಸಿದ್ದಾರೆ.

ಏನು ಕಾರಣ?
ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡಿಕೊಂಡಿದ್ದ ನಂದಿನಿ, 8 ವರ್ಷಗಳ ಹಿಂದೆ ಸೂರ್ಯ ಎಂಬಾತನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ದಂಪತಿಗೆ ಒಂದು ಹೆಣ್ಣು ಮತ್ತು ಒಂದು ಗಂಡು ಮಗು ಇದೆ. ನಂದಿನಿಗೆ ವ್ಯಕ್ತಿಯೊಬ್ಬ ಆಗಾಗ್ಗೆ ಫೋನ್‌ ಮಾಡಿ ಕಿರಿಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಇದರಿಂದಾಗಿ ಪತಿ-ಪತ್ನಿ ನಡುವೆ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು. ವ್ಯಕ್ತಿಯ ನಿರಂತರ ಕಿರುಕುಳದಿಂದ ಮನನೊಂದಿದ್ದ ನಂದಿನಿ ಆತ್ಮಹತ್ಯೆ ಮಾಡಿಕೊಂದಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮರಾಠಿ ಪುಂಡರಿಂದ ಕಂಡಕ್ಟರ್ ಮೇಲೆ ಹಲ್ಲೆ – ಇಂದು ಬೆಳಗಾವಿಗೆ ರಾಮಲಿಂಗಾ ರೆಡ್ಡಿ ಭೇಟಿ

ಸದ್ಯ ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಚಾಮರಾಜಪೇಟೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಉದಯಗಿರಿ ಗಲಭೆ ಕಿಚ್ಚು – ಇಂದು ಮಧ್ಯರಾತ್ರಿವರೆಗೆ ಮೈಸೂರಿನಲ್ಲಿ ನಿಷೇಧಾಜ್ಞೆ

Share This Article