ಬಾಂಗ್ಲಾ ಘರ್ಷಣೆ – ಐಪಿಎಲ್‌ನಿಂದ ಮುಸ್ತಾಫಿಜುರ್ ಔಟ್‌

1 Min Read

ಮುಂಬೈ: ಮಹತ್ವದ ಬೆಳವಣಿಗೆಯೊಂದರಲ್ಲಿ ಬಾಂಗ್ಲಾದೇಶದ (Bangladesh) ವೇಗದ ಔಲರ್‌ ಮುಸ್ತಾಫಿಜುರ್ ರೆಹಮಾನ್(Mustafizur Rahman) ಅವರನ್ನು ತಂಡದಿಂದ ಬಿಡುಗಡೆ ಮಾಡುವಂತೆ ಬಿಸಿಸಿಐ (BCCI) ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡವನ್ನು ವಿನಂತಿಸಿದೆ.

ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಪ್ರತಿಕ್ರಿಯಿಸಿ, ಬಿಸಿಸಿಐ ಐಪಿಎಲ್ ಫ್ರಾಂಚೈಸಿಯಾದ ಕೆಕೆಆರ್‌ಗೆ (KKR) ಮುಸ್ತಾಫಿಜುರ್ ರೆಹಮಾನ್ ಅವರನ್ನು ತಮ್ಮ ತಂಡದಿಂದ ಬಿಡುಗಡೆ ಮಾಡುವಂತೆ ಸೂಚಿಸಿದೆ. ಅವರು ಬಿಡುಗಡೆಯಾದ ನಂತರ ಕೆಕೆಆರ್‌ನಿಂದ ಯಾವುದೇ ವಿನಂತಿ ಬಂದರೆ ಬಿಸಿಸಿಐ ಅದನ್ನು ಪರಿಗಣಿಸುತ್ತದೆ ಮತ್ತು ಬದಲಿ ಆಟಗಾರನನ್ನು ಒದಗಿಸುತ್ತದೆ ಎಂದು ಹೇಳಿದ್ದಾರೆ.

ಹಸೀನಾ ಸರ್ಕಾರ ಪತನದ ಬಳಿಕ ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಂಬಂಧ ಹಾಳಾಗಿದೆ. ಈಗ ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಿರುವ ಕಾರಣ ಬಾಂಗ್ಲಾದೇಶದ ಆಟಗಾರರು ಐಪಿಎಲ್‌ನಲ್ಲಿ (IPL) ಆಡಬಾರದು ಎಂಬ ಆಕ್ರೋಶ ಕ್ರಿಕೆಟ್‌ ಅಭಿಮಾನಿಗಳಿಂದ ವ್ಯಕ್ತವಾಗಿತ್ತು. ಒತ್ತಡ ಜಾಸ್ತಿಯಾಗುತ್ತಿದ್ದಂತೆ ಬಿಸಿಸಿಐ ಈಗ ಮಧ್ಯಪ್ರವೇಶಿಸಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ಕೈ ಬಿಡುವಂತೆ ಕೋಲ್ಕತ್ತಾ ತಂಡದ ಜೊತೆ ಕೇಳಿಕೊಂಡಿದೆ.

ಡಿಸೆಂಬರ್‌ನಲ್ಲಿ ನಡೆದ ಹರಾಜಿನಲ್ಲಿ ಮುಸ್ತಾಫಿಜುರ್ ಅವರನ್ನು ದಾಖಲೆಯ 9.20 ಕೋಟಿ ರೂ. ನೀಡಿ ಕೆಕೆಆರ್ ಖರೀದಿಸಿತ್ತು. ಐಪಿಎಲ್‌ ಇತಿಹಾಸದಲ್ಲಿ ಅತಿ ಹೆಚ್ಚು ಬೆಲೆಗೆ ಮಾರಾಟವಾದ ಬಾಂಗ್ಲಾ ಆಟಗಾರ ಎಂಬ ಹೆಗ್ಗಳಿಕೆಗೆ ಮುಸ್ತಾಫಿಜುರ್ ಪಾತ್ರವಾಗಿದ್ದರು.  ಇದನ್ನೂ ಓದಿ: ಆರ್‌ಸಿಬಿಗೆ ಶಾಕ್‌ ನೀಡಿದ್ದ ಪೆರ್ರಿ ನ್ಯೂಜಿಲೆಂಡ್‌ ಲೀಗ್‌ನಲ್ಲಿ ಭರ್ಜರಿ ಆಟ

ಐಪಿಎಲ್‌ನಲ್ಲಿ ಮುಸ್ತಾಫಿಜುರ್ ಈ ಹಿಂದೆ ಚೆನ್ನೈ ಸೂಪರ್‌ ಕಿಂಗ್ಸ್‌, ಡೆಲ್ಲಿ ಕ್ಯಾಪಿಟಲ್ಸ್‌, ಕೋಲ್ಕತ್ತಾ ನೈಟ್‌ ರೈಡರ್ಸ್‌, ಮುಂಬೈ ಇಂಡಿಯನ್ಸ್‌, ಸನ್‌ರೈಸರ್ಸ್‌ ಹೈದರಾಬಾದ್‌ ತಂಡವನ್ನು ಪ್ರತಿನಿಧಿಸಿದ್ದರು.
Share This Article