ಚೇತರಿಸಿಕೊಳ್ಳುತ್ತಿರುವ ಶುಭಮನ್ – ವಿಶ್ರಾಂತಿಗಾಗಿ ಅಘ್ಘಾನ್ ವಿರುದ್ಧದ ಪಂದ್ಯದಿಂದ ಹೊರಗೆ

Public TV
1 Min Read

ನವದೆಹಲಿ: ಟೀಮ್ ಇಂಡಿಯಾದ ಆರಂಭಿಕ ಬ್ಯಾಟರ್ ಶುಭಮನ್ ಗಿಲ್ (Shubman Gill) ಅವರು ಅ.11ರ ಅಫ್ಘಾನಿಸ್ತಾನದ ವಿರುದ್ಧದ ಪಂದ್ಯದಲ್ಲಿ ಆಡುತ್ತಿಲ್ಲ ಎಂದು ಬಿಸಿಸಿಐ (BCCI) ಹೇಳಿದೆ.

ಗಿಲ್ ಅವರು ಭಾನುವಾರ ಚೆನ್ನೈನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು. ಇದರಿಂದ ತಂಡ ಆರಂಭಿಕ ಆಘಾತವನ್ನು ಎದುರಿಸಿತು. ತಮ್ಮ ವಿಶೇಷ ಶೈಲಿಯ ಸ್ಟ್ರೋಕ್‍ಗಳ ಮೂಲಕ ತಂಡವನ್ನು ಮುನ್ನಡೆಸುವ ಸಾಮರ್ಥ್ಯವನ್ನು ಅವರು ಹೊಂದಿದ್ದಾರೆ. ಅವರ ಮರಳುವಿಕೆಯನ್ನು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಇದನ್ನೂ ಓದಿ: ಅತ್ಯುತ್ತಮ ಫೀಲ್ಡಿಂಗ್‍ಗಾಗಿ ಚಿನ್ನ ಗೆದ್ದ ಕೊಹ್ಲಿ

ಡೆಂಗ್ಯೂವಿನಿಂದ ಬಳಲುತ್ತಿರುವ ಶುಭಮನ್ ಗಿಲ್ ಅವರ ಇತ್ತೀಚಿನ ವೈದ್ಯಕೀಯ ವರದಿಯಲ್ಲಿ ಅವರಿಗೆ ವಿಶ್ರಾಂತಿ ಅಗತ್ಯವಿದೆ ಎಂದು ಹೇಳಿದೆ. ಇದಕ್ಕಾಗಿ ಅವರು ಅಫ್ಘಾನಿಸ್ತಾನದ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಪಾಲ್ಗೊಳ್ಳುವುದಿಲ್ಲ. ಅವರು ಚೆನೈನಲ್ಲೇ ಉಳಿಯಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

ಗಿಲ್ ಅವರ ಆರೋಗ್ಯದ ಬಗ್ಗೆ ಉಹಾಪೋಹಗಳು ಹರಿದಾಡುತ್ತಿದ್ದು, ಈ ಬಗ್ಗೆ ಬಿಸಿಸಿಐ ಗೌರವ ಕಾರ್ಯದರ್ಶಿ ಜಯ್ ಶಾ ಹೇಳಿಕೆ ನೀಡಿದ್ದಾರೆ. ಅವರ ಆರೋಗ್ಯದ ಬಗ್ಗೆ ವೈದ್ಯರ ತಂಡ ನಿಗಾವಹಿಸಿದೆ. ಅವರು ಶೀಘ್ರದಲ್ಲೇ ಗುಣಮುಖರಾಗಲಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: World Cup 2023: ರಾಹುಲ್‌, ವಿರಾಟ ಶತಕದ ಹೋರಾಟ – ಭಾರತಕ್ಕೆ 6 ವಿಕೆಟ್‌ಗಳ ಅಮೋಘ ಜಯ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್