Asian Games 2023 – ಶಿಖರ್‌ ಧವನ್‌ಗೆ ಟೀಂ ಇಂಡಿಯಾ ನಾಯಕತ್ವ?

Public TV
2 Min Read

ಮುಂಬೈ: ಟೀಂ ಇಂಡಿಯಾ ಅನುಭವಿ ಆಟಗಾರ ಶಿಖರ್‌ ಧವನ್‌ (Shikhar Dhawan) 2023ರ ಏಕದಿನ ವಿಶ್ವಕಪ್‌ (ODI World Cup) ಟೂರ್ನಿಗೆ ಟೀಂ ಇಂಡಿಯಾದಿಂದ ಹೊರಬೀಳುವುದು ಖಚಿತವಾಗಿದೆ. ಅಲ್ಲದೇ ವಿಶ್ವಕಪ್‌ಗೂ ಮುನ್ನ ನಡೆಯಲಿರುವ ವೆಸ್ಟ್‌ ಇಂಡೀಸ್‌ ಸರಣಿಯಿಂದಲೂ ಶಿಖರ್‌ ಧವನ್‌ ಹೊರಬಿದ್ದಿದ್ದಾರೆ. ಈ ನಡುವೆ ಮಹತ್ವದ ಬೆಳವಣಿಗೆಯೊಂದು ಕಂಡುಬಂದಿದ್ದು, ಮತ್ತೆ ಶಿಖರ್‌ ಧವನ್‌ ಟೀಂ ಇಂಡಿಯಾ ನಾಯಕತ್ವ ವಹಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಹೌದು.. ಈ ಬಾರಿ ಚೀನಾದ ಹ್ಯಾಂಗ್‌ಜೂನಲ್ಲಿ ಏಷ್ಯನ್‌ ಗೇಮ್ಸ್ (Asian Games 2023) ಕ್ರೀಡಾಕೂಟ ನಡೆಯಲಿದ್ದು ಈ ಟೂರ್ನಿಯಲ್ಲಿ ಕ್ರಿಕೆಟ್ ಕೂಡ ಸ್ಪರ್ಧೆಯ ಭಾಗವಾಗಿದೆ. ಸೆಪ್ಟೆಂಬರ್ 23 ರಿಂದ ಅಕ್ಟೋಬರ್ 8 ರವರೆಗೆ ಈ ಟೂರ್ನಿ ನಡೆಯಲಿದ್ದು, ಟಿ20 ಮಾದರಿಯಲ್ಲಿ ನಡೆಯಲಿರುವ ಈ ಟೂರ್ನಿಗೆ ಬಿಸಿಸಿಐ (BCCI) ಭಾರತದ ಮಹಿಳಾ ಹಾಗೂ ಪುರುಷರ ತಂಡವನ್ನು ಕಣಕ್ಕಿಳಿಸಲು ಒಪ್ಪಿದೆ. ಟೀಂ ಇಂಡಿಯಾ ಪ್ರಮುಖ ಆಟಗಾರರು ಏಕದಿನ ವಿಶ್ವಕಪ್‌ ಹಾಗೂ ಏಷ್ಯಾಕಪ್‌ ಟೂರ್ನಿಗಳಲ್ಲಿ ಬ್ಯೂಸಿಯಾಗಿರೋದ್ರಿಂದ ಭಾರತದ ಪುರುಷರ 2ನೇ ದರ್ಜೆಯ ತಂಡ ಈ ಟೂರ್ನಿಯಲ್ಲಿ ಭಾಗವಹಿಸಲಿದೆ. ಈ ತಂಡಕ್ಕೆ ಶಿಖರ್ ಧವನ್ ನಾಯಕತ್ವ ವಹಿಸುವ ಸಾಧ್ಯತೆಗಳಿವೆ. ಜೊತೆಗೆ ವಿವಿಎಸ್‌ ಲಕ್ಷ್ಮಣ್‌ (VVS Laxman) ಕೋಚ್‌ ಆಗಿ ಮುನ್ನಡೆಸಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಇದನ್ನೂ ಓದಿ: ICC ODI World Cup 2023: ಏಕದಿನ ವಿಶ್ವಕಪ್‌ ವೇಳಾಪಟ್ಟಿ ಪ್ರಕಟ

2010 ಮತ್ತು 2014ರ ಏಷ್ಯನ್ ಗೇಮ್ಸ್‌ ಟೂರ್ನಿಯಲ್ಲಿ ಭಾರತ (Team India) ಭಾಗವಹಿಸಲು ನಿರಾಕರಿಸಿತ್ತು. ಆದ್ರೆ 2028ಕ್ಕೆ ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ನಡೆಯುವ ಒಲಿಂಪಿಕ್ಸ್‌ ನಲ್ಲಿ ಕ್ರಿಕೆಟ್‌ ಸೇರ್ಪಡೆಗೊಳಿಸಲು ಬಿಸಿಸಿಐ ಒತ್ತಾಯಿಸುತ್ತಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಏಷ್ಯನ್‌ ಗೇಮ್ಸ್‌ನಲ್ಲಿ ಟೀಂ ಇಂಡಿಯಾವನ್ನು ಕಣಕ್ಕಿಳಿಸಲು ಸಮ್ಮತಿಸಿದೆ. ಜುಲೈ 7 ರಂದು ಬಿಸಿಸಿಐನ ಮುಂಬರುವ ಅಪೆಕ್ಸ್ ಕೌನ್ಸಿಲ್ ಸಭೆ ನಡೆಯಲಿದ್ದು ಅಲ್ಲಿ ಶಿಖರ್ ಧವನ್ ತಂಡವನ್ನು ಮುನ್ನಡೆಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಭಾರತ Vs ಐರ್ಲೆಂಡ್‌ T20 ಸರಣಿಗೆ ವೇಳಾಪಟ್ಟಿ ಪ್ರಕಟ – ಇಲ್ಲಿದೆ ಡಿಟೇಲ್ಸ್‌

ಏಷ್ಯನ್‌ ಗೇಮ್ಸ್‌ ನಲ್ಲಿ ಕ್ರಿಕೆಟ್ ಟೂರ್ನಿಯನ್ನು ಟಿ20 ಮಾದರಿಯಲ್ಲಿ ಆಡಿಸಲಾಗುತ್ತದೆ. ಭಾರತ ಸೇರಿದಂತೆ ಏಷ್ಯಾದ ಇತರ ತಂಡಗಳು ಕೂಡ ಈ ಟೂರ್ನಿಯಲ್ಲಿ ಭಾಗವಹಿಸುತ್ತಿದೆ. ಇನ್ನೂ ಮಹಿಳೆಯರ ವಿಭಾಗದಲ್ಲೂ ಈ ಸೆಣೆಸಾಟಗಳು ನಡೆಯಲಿದ್ದು ಮಹಿಳಾ ವಿಭಾಗದಲ್ಲಿ ಭಾರತದ ಮೊದಲ ದರ್ಜೆಯ ತಂಡವೇ ಕಣಕ್ಕಿಳಿಯಲಿದೆ ಎನ್ನಲಾಗಿದೆ. 2022ರಲ್ಲಿ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಭಾರತೀಯ ಮಹಿಳಾ ತಂಡ ಭಾಗವಹಿಸಿತ್ತು. ಇದನ್ನೂ ಓದಿ: ವಿಶ್ವಕಪ್‌ ಹವಾ; ಅಹಮದಾಬಾದ್‌ನಲ್ಲಿ ಹೋಟೆಲ್‌ಗಳ ಬೆಲೆ ದುಬಾರಿ – ದಿನದ ಬಾಡಿಗೆ 1 ಲಕ್ಷ ರೂ.ವರೆಗೆ ಏರಿಕೆ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್