ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ತನ್ನ ಆಸ್ತಿಯನ್ನು ವಶಪಡಿಸಿಕೊಳ್ಳುವ ಕಾಮಗಾರಿಯನ್ನು ಮುಂದುವರಿಸಿದ್ದು, ಇಂದು ನಾಡಪ್ರಭು ಕೆಂಪೇಗೌಡ ಬಡಾವಣೆಯ ಬ್ಲಾಕ್-2 ರಲ್ಲಿ ಆಸ್ತಿಯನ್ನು ವಶಪಡಿಸಿಕೊಂಡಿದೆ.
ಬೆಂಗಳೂರು ದಕ್ಷಿಣ ತಾಲ್ಲೂಕು, ಕೆಂಗೇರಿ ಹೋಬಳಿ, ಕನ್ನಲ್ಲಿ ಗ್ರಾಮದ ಸರ್ವೆ ನಂ. 9/1 ರಲ್ಲಿ 00-17 ಗುಂಟೆ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ 22 ಶೆಡ್ಗಳನ್ನು ತೆರವುಗೊಳಿಸಿ, ಸುಮಾರು 10 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಪ್ರಾಧಿಕಾರವು ವಶಪಡಿಸಿಕೊಂಡಿತು.
ಈ ಕಾರ್ಯಾಚರಣೆಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕರು, ಅಭಿಯಂತರ ಅಧಿಕಾರಿ-1, ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಇವರನ್ನೊಳಗೊಂಡ ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ನೆರವೇರಿಸಲಾಯಿತು.

