ನೀನೇ ಖುಷಿಯಾಗಿರು, ನಾನು ಪ್ರಪಂಚನೇ ಬಿಟ್ಟು ಹೋಗ್ತಿದಿನಿ – ಸ್ಟೇಟಸ್ ಹಾಕಿ ನೀರಿಗೆ ಬಿದ್ದು ವಿದ್ಯಾರ್ಥಿ ಸೂಸೈಡ್

1 Min Read

ತುಮಕೂರು: ನೀನೇ ಖುಷಿಯಾಗಿರು, ನಾನು ಪ್ರಪಂಚನೇ ಬಿಟ್ಟು ಹೋಗ್ತಿದಿನಿ ಎಂದು ಸ್ಟೇಟಸ್ ಹಾಕಿ ನೀರಿಗೆ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುರುವೇಕೆರೆ ಪಟ್ಟಣದ ಡಿಪ್ಲೋಮಾ (Diploma) ಕಾಲೇಜಿನ ಹಿಂಭಾಗದಲ್ಲಿರುವ ಕಟ್ಟೆ ಬಳಿ ಘಟನೆ ನಡೆದಿದೆ.

- Advertisement -

ತುರುವೇಕೆರೆ ತಾಲ್ಲೂಕಿನ ಕೊಂಡಜ್ಜಿ ಬಳಿಯ ಗೋಪ್ಪೆನಹಳ್ಳಿ ಗ್ರಾಮದ ಧನುಷ್ (19) ಮೃತ ದುರ್ದೈವಿ. ಎರಡನೇ ವರ್ಷದ ಡಿಪ್ಲೋಮಾ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಇದನ್ನೂ ಓದಿ: NCERT ಪಠ್ಯ ವಿವಾದ| ಸುಪ್ರೀಂ ಮುಂದೆ ಬೇಷರತ್ ಕ್ಷಮೆಯಾಚಿಸಿದ ಕೇಂದ್ರ ಸರ್ಕಾರ

- Advertisement -

- Advertisement -

ಬುಧವಾರ (ಫೆ.25) ಬೆಳಿಗ್ಗೆ ಕಾಲೇಜಿಗೆ ಹೋಗುತ್ತೇನೆಂದು ಹೇಳಿ ಮನೆಯಿಂದ ಹೊರಟಿದ್ದ. ಆದರೆ ಸಂಜೆಯಾದರೂ ಕೂಡ ಮನೆಗೆ ಮರಳಿರಲಿಲ್ಲ. ಜೊತೆಗೆ ಪೋಷಕರ ಕಾಲ್‌ನ್ನು ಕೂಡ ರಿಸೀವ್ ಮಾಡಿರಲಿಲ್ಲ. ಇದರಿಂದ ಆತಂಕಗೊಂಡ ಪೋಷಕರು ಎಲ್ಲಾ ಕಡೆ ಹುಡುಕಾಟ ನಡೆಸಿದ್ರು. ಈ ವೇಳೆ ಡಿಪ್ಲೋಮಾ ಕಾಲೇಜಿನ ಹಿಂಭಾಗ ಇರುವ ಕಟ್ಟೆಯೊಂದರ ಬಳಿ ಬ್ಯಾಗ್, ಚಪ್ಪಲಿ, ಮೊಬೈಲ್ ಪತ್ತೆಯಾಗಿದೆ. ಜೊತೆಗೆ ಆತ್ಮಹತ್ಯೆಗೂ ಮುನ್ನ ಮೊಬೈಲ್‌ನಲ್ಲಿ ಸ್ಟೇಟಸ್ ಹಾಕಿದ್ದನ್ನು ಗಮನಿಸಿದ್ದರು. ಕೂಡಲೇ ಪೋಷಕರು ತುರುವೇಕೆರೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

- Advertisement -

ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ ನಡೆಸಿದಾಗ ನೀರಿನ ಕಟ್ಟೆಯಲ್ಲಿ ವಿದ್ಯಾರ್ಥಿ ಧನುಷ್ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನ ಕಟ್ಟೆಯಿಂದ ಹೊರತೆಗೆದು ತುರುವೇಕೆರೆ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಘಟನೆ ಸಂಬಂಧ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಸಿದ್ದರಾಮಯ್ಯ ಸರ್ಕಾರದಿಂದ್ಲೂ ಕಳಪೆ ಸೈಕಲ್ – ಟೈಯರ್ ಕಿತ್ತು, ಬೆಂಡ್ ಆಗಿ ಮೂರೇ ತಿಂಗಳಲ್ಲಿ ದುರಸ್ತಿಗೆ

Share This Article