ಕೊರೊನಾಗೆ ಗೆಳೆಯ ಬಲಿ – ಸ್ನೇಹಿತನ ಮಡದಿಯನ್ನ ಮದುವೆಯಾದ ಯುವಕ

Public TV
1 Min Read

ಚಾಮರಾಜನಗರ: ಧರ್ಮ, ಜಾತಿ, ವಯಸ್ಸು, ಸಂಬಂಧ ಮೀರಿದ ಬಂಧವೊಂದಿದ್ದರೆ ಅದು ಗೆಳೆತನ. ಇದಕ್ಕೆ ನಿದರ್ಶನದಂತೆ ಅಪರೂಪ ಹಾಗೂ ಮಾದರಿ ಮದುವೆಯೊಂದು ಚಾಮರಾಜನಗರದಲ್ಲಿ ನಡೆದಿದೆ.

ಚಾಮರಾಜನಗರ ತಾಲೂಕಿನ ನಂಜದೇವನಪುರ ಗ್ರಾಮದ ಲೋಕೇಶ್ ಪತಿ ಕಳೆದುಕೊಂಡು ಕಂಗಾಲಾಗಿದ್ದ ಗೆಳೆಯನ ಪತ್ನಿಯನ್ನು ವಿವಾಹವಾಗಿದ್ದಾನೆ. ಜ.27ರಂದು ಬೆಂಗಳೂರಿನ ಕೆಜಿ ರಸ್ತೆಯಲ್ಲಿರುವ ಸರ್ಪಭೂಷಣ ಶಿವಯೋಗಿಗಳ ಮಠದ ಆವರಣದಲ್ಲಿ ಈ ಆದರ್ಶ ಮದುವೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಪ್ರೀತಂ ಜೊತೆ ಇಷ್ಟು ವರ್ಷ ಏಕೆ ಕೆಲಸ ಮಾಡಿಲ್ಲ – ಮೌನಮುರಿದ ಸೋನು ನಿಗಮ್

ಕೊರೊನಾದಿಂದ ಪತಿ ಸಾವು!
ಕೊಳ್ಳೇಗಾಲ ತಾಲೂಕಿನ ಮುಳ್ಳೂರು ಗ್ರಾಮದ ಚೇತನ್‍ಕುಮಾರ್(41) ಮತ್ತು ಹನೂರು ಪಟ್ಟಣದ ಅಂಬಿಕಾ(30) 8 ವರ್ಷಗಳ ಹಿಂದೆ ವಿವಾಹವಾಗಿದ್ದರು. ಚೇತನ್‍ಕುಮಾರ್ ಅವರು ಬೆಂಗಳೂರಿನ ಖಾಸಗಿ ಕಾರ್ಖಾನೆಯಲ್ಲಿ ಉದ್ಯೋಗಿಯಾಗಿದ್ದರು. ಕೋವಿಡ್ ಎರಡನೇ ಅಲೆ ಸಂದರ್ಭದಲ್ಲಿ ಚೇತನ್‍ಕುಮಾರ್ ಅವರಿಗೆ ಕೋವಿಡ್ ಪಾಸಿಟಿವ್ ಬಂದಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.

ಪತಿಯ ಸಾವಿನಿಂದ ಕಂಗೆಟ್ಟ ಅಂಬಿಕಾ, ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ಚೇತನ್‍ಕುಮಾರ್ ಗೆಳೆಯ, ಎಂ.ಲೋಕೇಶ್ ಅವರು ಅಂಬಿಕಾಗೆ ಸಾಂತ್ವನ ಹೇಳಿ, ತನ್ನ ಗೆಳೆಯನ ಕುಟುಂಬಕ್ಕೆ ಆಸರೆಯಾಗಿ ನಿಲ್ಲಲು ನಿರ್ಧರಿಸಿದರು. ಇದನ್ನೂ ಓದಿ: ಯಾರ ಮೇಲೂ ಆರೋಪ ಮಾಡಲ್ಲ, ಕಾನೂನು ಹೋರಾಟಕ್ಕೆ ಸಿದ್ಧ: ತೇಲ್ಕೂರ್

ತನ್ನ ಗೆಳೆಯನ ಪತ್ನಿಯನ್ನು ಮದುವೆಯಾಗಲು ನಿರ್ಧರಿಸಿ, ಅಂಬಿಕಾ ತಂದೆ, ತಾಯಿಯ ಬಳಿ ಹಾಗೂ ಚೇತನ್‍ಕುಮಾರ್ ತಂದೆ, ತಾಯಿಯ ಬಳಿ ವಿಷಯ ಪ್ರಸ್ತಾಪಿಸಿದ್ದಾರೆ. ಅವರೆಲ್ಲರ ಮನವೊಲಿಕೆಯ ಬಳಿಕ ಅಂಬಿಕಾ ಮದುವೆಗೆ ಒಪ್ಪಿದರು. ಎಲ್ಲರ ಒಪ್ಪಿಗೆ ಪಡೆದು ಲೋಕೇಶ್ ಅವರು ಅಂಬಿಕಾ ಅವರನ್ನು ಪುನರ್ ವಿವಾಹವಾಗುವ ಮೂಲಕ ಮಾದರಿಯಾಗಿ ಗೆಳೆಯನ ಕುಟುಂಬಕ್ಕೆ ಆಸರೆಯಾಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *