ಜಿಲ್ಲಾ ಕೇಂದ್ರಗಳಲ್ಲಿ ಉದ್ಯಮಿಯಾಗು-ಉದ್ಯೋಗ ನೀಡು ಕಾರ್ಯಾಗಾರ: ಸಚಿವ ನಿರಾಣಿ

Public TV
2 Min Read

ಬೆಳಗಾವಿ: ಯುವಕರು ಸ್ವಯಂ ಉದ್ಯೋಗದಾತರಾಗಲು ನಡೆಸುತ್ತಿರುವ ಉದ್ಯಮಿಯಾಗ—ಉದ್ಯೋಗ ನೀಡು ಕಾರ್ಯಾಗಾರ ವಿಶೇಷ ಕಾರ್ಯಕ್ರಮವೂ ಮುಂದುವರಿಯಲಿದ್ದು, ಆಯಾ ಜಿಲ್ಲಾ ಕೇಂದ್ರಗಳಲ್ಲಿ ಆಯೋಜಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಮುರುಗೇಶ್ ನಿರಾಣಿ (Murugesh Nirani) ತಿಳಿಸಿದ್ದಾರೆ.

ಮಂಗಳವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಡಿ.ಎಸ್.ಅರುಣ್ (D.S.Arun) ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಇನ್ನೂ ಹೆಚ್ಚಿನ ತರಬೇತಿ, ಮಾರ್ಗದರ್ಶನ ನೀಡಲಾಗುತ್ತದೆ. ಅದಕ್ಕಾಗಿ ಪ್ರತಿ ಜಿಲ್ಲೆಯ 3-4 ಕೇಂದ್ರಗಳಲ್ಲಿ ಒಂದು ದಿನದ ಕಾರ್ಯಕ್ರಮ ಆಯೋಜಿಸಲಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಬಂಡವಾಳ ಹೂಡಿಕೆ ಸಮಾವೇಶದಿಂದ 6 ಲಕ್ಷ ಹುದ್ದೆ ಸೃಷ್ಟಿ: ಮುರುಗೇಶ್ ನಿರಾಣಿ

ವಿದ್ಯಾರ್ಥಿಗಳು ಉದ್ಯೋಗ ಹುಡುಕುವ ಬದಲು ಉದ್ಯಮ ಸ್ಥಾಪಿಸಿ ಉದ್ಯೋಗ ಕೊಡುವಂತಾಗಬೇಕು ಎನ್ನುವ ಉದ್ದೇಶದಿಂದ ಕಾರ್ಯಾಗಾರವನ್ನು ನಡೆಸಿ, ಅವಕಾಶಗಳ ಬಗ್ಗೆ ಮತ್ತು ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಕುರಿತು ತಿಳಿಸಲಾಗುತ್ತಿದೆ. ಇದರಲ್ಲಿ 50 ಸಾವಿರ ಮಂದಿ ಭಾಗಿಯಾಗುವ ನಿರೀಕ್ಷೆ ಇದೆ. ನಂತರ 40-50 ತಾಸಿನ ಆನ್‌ಲೈನ್‌ ಕಾರ್ಯಕ್ರಮಕ್ಕೆ ನೋಂದಣಿ ಮಾಡಿಸಲಾಗುತ್ತದೆ ಎಂದ ಅವರು, ಮುಂದಿನ ದಿನಗಳಲ್ಲಿ ಈ ಕಾರ್ಯಕ್ರಮ ಮುಂದುವರಿಯಲಿದೆ ಎಂದು ವಿವರಿಸಿದರು.

ಇನ್ವೆಸ್ಟ್ ಕರ್ನಾಟಕ ಕುರಿತು
ಇನ್ವೆಸ್ಟ್ ಕರ್ನಾಟಕದಿಂದ ಎಷ್ಟು ಬಂಡವಾಳ ಬಂದಿದೆ. ಅದರಿಂದ ಆದ ಲಾಭದ ಬಗ್ಗೆ ಪ್ರಶ್ನೆ ಮಾಡಲಾಯಿತು. ಇದಕ್ಕೆ ಉತ್ತರಿಸಿದ ಸಚಿವರು, ನವೆಂಬರ್ 2 ರಿಂದ 4 ರವರೆಗೆ ಮೂರು ದಿನಗಳ ಕಾಲ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 9,81,784 ಕೋಟಿ ರೂ. ಬಂಡವಾಳ ಹೂಡಿಕೆ ಬಗ್ಗೆ ವಿವಿಧ ಯೋಜನೆಗಳನ್ನು ಕುರಿತು ಒಪ್ಪಂದ ಮಾಡಿಕೊಳ್ಳಲಾಗಿದೆ. ಮೂರು ದಿನಗಳ ಕಾಲ ನಡೆದ ಈ ಸಮಾವೇಶದಲ್ಲಿ ಜಪಾನ್, ಫ್ರಾನ್ಸ್, ಇಂಗ್ಲೆಂಡ್, ಜರ್ಮನಿ, ಆಸ್ಟ್ರೇಲಿಯಾ, ದಕ್ಷಿಣ ಕೊರಿಯಾ ಹಾಗೂ ನೆದರ್ಲೆಂಡ್ ಸೇರಿದಂತೆ ಹಲವು ದೇಶಗಳ 15,000 ಪ್ರತಿನಿಧಿಗಳು ಹಾಗೂ ಸುಪ್ರಸಿದ್ಧ ಕಂಪನಿಯ ಸಿಇಓ ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು ಎಂದು ಸಚಿವರು ಸಭೆಗೆ ಉತ್ತರಿಸಿದರು. ಇದನ್ನೂ ಓದಿ: CBI ದಾಳಿ – ಡಿಕೆಶಿ ಬೆನ್ನಿಗೆ ನಿಂತ ಲಕ್ಷ್ಮೀ ಹೆಬ್ಬಾಳ್ಕರ್

ಇನ್ವೆಸ್ಟ್ ಕರ್ನಾಟಕದಲ್ಲಿ ಪ್ರಮುಖವಾಗಿ 57 ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಸಚಿವರು ಉತ್ತರಿಸಿದರು. ಸಕ್ಕರೆ ಕಾರ್ಖಾನೆಗಳ ಮಾಲೀಕರು ಕಬ್ಬು ತೂಕ ಮಾಡುವಾಗ ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ ವಿರೋಧ ಪಕ್ಷಗಳ ಸದಸ್ಯರಿಗೆ ಸಚಿವ ನಿರಾಣಿ, ಎಥೆನಾಲ್ ಹಾಗೂ ಸಕ್ಕರೆ ಉತ್ಪಾದನೆ ಬೆಲೆ, ಆದಾಯಲ್ಲಿ ಅಲ್ಪಸ್ವಲ್ಪ ಬದಲಾವಣೆ ಇದೆ. ಹಾಗೇ ಕಬ್ಬು ತೂಕದಲ್ಲಿ ಯಾವುದೇ ಮೋಸ ಆಗುತ್ತಿಲ್ಲ. ಏಕೆಂದರೆ ಬೆಳೆಗಾರರು ಖಾಸಗಿಯಾಗಿಯೂ ತೂಕ ಮಾಡಿಸುತ್ತಾರೆ. ಹಾಗಾಗಿ ಟನ್‌ಗಟ್ಟಲೇ ಮೋಸ ಆಗುವುದಿಲ್ಲ ಎಂದು ಸದನಕ್ಕೆ ತಿಳಿಸಿದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *