ಕಲಘಟಗಿಯ 107 ಕೆರೆಗಳಿಗೆ ಬೇಡ್ತಿ ನದಿ ನೀರು – 179.50 ಕೋಟಿ ವೆಚ್ಚದ ಕಾಮಗಾರಿಗೆ ಸಂಪುಟ ಅಸ್ತು

By
1 Min Read

ಹುಬ್ಬಳ್ಳಿ: ಧಾರವಾಡ (Dharwad) ಜಿಲ್ಲೆಯ ಕಲಘಟಗಿ (Kalaghtagi) ತಾಲೂಕಿನ 107 ಕೆರೆಗಳಿಗೆ ಬೇಡ್ತಿ ನದಿಯಿಂದ (Bedti River) ನೀರು ತುಂಬಿಸುವ 179.50 ಕೋಟಿ ರೂ. ವೆಚ್ಚದ ಕಾಮಗಾರಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಸಂಪುಟದ ಈ ನಿರ್ಣಯಕ್ಕೆ ಕಾರ್ಮಿಕ ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕಲಘಟಗಿ ವಿಧಾಸಭಾ ಕ್ಷೇತ್ರದ ಶಾಸಕ ಸಂತೋಷ್ ಲಾಡ್ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಭಾಗದ ಅನ್ನದಾತರ ಬಹುದಿನಗಳ ಬೇಡಿಕೆಯಾಗಿದ್ದ ಹಾಗೂ ಸಂತೋಷ್ ಲಾಡ್ (Santosh lad) ಅವರ ಕನಸಾದ ಈ ಏತ ನೀರಾವರಿ ಯೋಜನೆ ಈಗ ಸಾಕಾರಗೊಳ್ಳುತ್ತಿದ್ದು, ಲಾಡ್ ಅವರ ನಿರಂತರ ಶ್ರಮ ಹಾಗೂ ಪ್ರಯತ್ನ ಫಲ ಕೊಟ್ಟಂತಾಗಿದೆ. ಈ ನೀರೆತ್ತುವ ಯೋಜನೆಗೆ ಇದೀಗ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದ್ದು, ಸಂಪುಟದಲ್ಲಿ ಅನುಮೋದನೆ ಪಡೆದು ವೇಗ ಸಿಕ್ಕಂತಾಗಿದೆ. ಅಂತರ್ಜಲ ಮಟ್ಟ ಹೆಚ್ಚಿಸುವ ಶಾಶ್ವತ ನೀರಾವರಿ ಯೋಜನೆ ಇದಾಗಿದ್ದು, ಈ ಭಾಗದ ಕೃಷಿ ಮತ್ತು ಕೃಷಿಯೇತರ ಚಟುವಟಿಕೆಗಳಿಗೆ ಈ ಕೆರೆ ತುಂಬಿಸುವ ಯೋಜನೆಯಿಂದ ಅನುಕೂಲವಾಗಲಿದೆ.ಇದನ್ನೂ ಓದಿ: ಗಣೇಶ ವಿಸರ್ಜನೆ ಭದ್ರತೆಗೆ ತೆರಳಿದ್ದ ಪೇದೆ ಹೃದಯಾಘಾತಕ್ಕೆ ಬಲಿ

ಕೇವಲ ಕಲಘಟಗಿ ತಾಲೂಕು ಮಾತ್ರವಲ್ಲದೆ ಧಾರವಾಡ ಜಿಲ್ಲೆಯ ಇತರ ತಾಲೂಕಿನಲ್ಲಿನ ಕೆರೆಗಳಿಗೂ ಬೇಡ್ತಿ ನದಿ ನೀರು ಹರಿಸುವ ಮಹದಾಸೆ ಸಚಿವ ಸಂತೋಷ್ ಲಾಡ್ ಅವರದ್ದಾಗಿತ್ತು. ಇದೀಗ ಕಲಘಟಗಿ ತಾಲೂಕಿನ 107 ಕೆರೆಗಳಿಗೆ ಬೇಡ್ತಿ ನದಿಯಿಂದ ನೀರು ತುಂಬಿಸುವ 179.50 ಕೋಟಿ ರೂ. ವೆಚ್ಚದ ಕಾಮಗಾರಿಗೆ ಸಂಪುಟ ಅಸ್ತು ಎಂದಿದೆ.

Share This Article