ಬೆಳಗಾವಿ| ಉದ್ಯಮಿ ಹತ್ಯೆ ಕೇಸ್ – 13 ಹಾರ್ಡ್ ಡಿಸ್ಕ್‌ಗಳಲ್ಲಿ ಸಂತೋಷ್‍ನ ಖಾಸಗಿ ವೀಡಿಯೋ ಪತ್ತೆ!

Public TV
1 Min Read

ಬಳ್ಳಾರಿ: ಬೆಳಗಾವಿಯಲ್ಲಿ ಉದ್ಯಮಿ ಸಂತೋಷ್ ಪದ್ಮನ್ನವರ ಹತ್ಯೆ ಪ್ರಕರಣ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಆತನ ಕರಾಳ ಮುಖದ ಪರಿಚಯವಾಗಿದೆ. ಹತ್ಯೆಯಾದ ಉದ್ಯಮಿಯ ಮನೆ ತಪಾಸಣೆ ವೇಳೆ ಆತ ಬೇರೆ ಬೇರೆ ಹೆಣ್ಣುಗಳ ಜೊತೆ ಕಳೆದ ಖಾಸಗಿ ವೀಡಿಯೋಗಳಿರುವ 13 ಹಾರ್ಡ್ ಡಿಸ್ಕ್‌ಗಳು ಪತ್ತೆಯಾಗಿವೆ.

ಡಿಸ್ಕ್‌ಗಳು, ಸಿಸಿಟಿವಿ ಡಿವಿಆರ್, ಮೂರು ಪೆನ್‍ಡ್ರೈವ್‍ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಇವುಗಳನ್ನು ಪರಿಶೀಲನೆಗಾಗಿ ಎಫ್‍ಎಸ್‍ಎಲ್‍ಗೆ ಕಳಿಸಿದ್ದಾರೆ. ಇದನ್ನೂ ಓದಿ: ಬೆಳಗಾವಿ ಉದ್ಯಮಿ ಹತ್ಯೆ – ಪತ್ನಿ ಸೇರಿ ಮೂವರು ಆರೋಪಿಗಳು ಹಿಂಡಲಗಾ ಜೈಲಿಗೆ ಶಿಫ್ಟ್‌

ಅ.9ರಂದು ಹೃದಯಾಘಾತದಿಂದ ಸಂತೋಷ್ ಮೃತಪಟ್ಟಿದ್ದಾನೆ ಎಂದು ಅಂತ್ಯಸಂಸ್ಕಾರ ಮಾಡಲಾಗಿತ್ತು. ಈ ಬಗ್ಗೆ ಸಂಶಯ ಬಂದು ಅ.14ರಂದು ತಾಯಿ ಸೇರಿ 5 ಜನರ ವಿರುದ್ಧ ಸಂತೋಷ್‍ನ ಮಗಳು ಕೊಲೆ ಕೇಸ್ ದಾಖಲಿಸಿದ್ದರು. ಪ್ರಕರಣ ತನಿಖೆ ನಡೆಸಿದಾಗ, ಪತ್ನಿ ಉಮಾ ಹಾಗೂ ಇಬ್ಬರು ಫೇಸ್‍ಬುಕ್ ಗೆಳೆಯರು ಸೇರಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿತ್ತು.

ತನಿಖೆ ವೇಳೆ ಹಾರ್ಡ್ ಡಿಸ್ಕ್‌ನಲ್ಲಿರುವ ಗಂಡನ ಅಶ್ಲೀಲ ವೀಡಿಯೋ ಕುರಿತು ಪತ್ನಿ ಉಮಾ ಮಾಹಿತಿ ನೀಡಿದ್ದಳು. ಅಲ್ಲದೇ ಮಕ್ಕಳೆದುರು ಕೂಡ ಬೆತ್ತಲಾಗಿ ಸಂತೋಷ್ ಓಡಾಡುತ್ತಿದ್ದ ಎಂದು ಹೇಳಿದ್ದಳು.

ಪ್ರಕರಣ ಸಂಬಂಧ ಸಂತೋಷ್ ಪತ್ನಿ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಮಾಳಮಾರುತಿ ಠಾಣೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಬೆಳಗಾವಿ| ತಂದೆಯ ಸಾವಿನ ಬಗ್ಗೆ ಮಗಳ ಅನುಮಾನ – ಹೂತಿದ್ದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ

Share This Article