ಬೆಳಗಾವಿ: 8 ವರ್ಷದ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ (Rape and Murder) ಮಾಡಿದ್ದ ಆರೋಪಿಗೆ ಗಲ್ಲು ಶಿಕ್ಷೆ (Death Penalty)ಪ್ರಕಟ ಮಾಡಿ ಬೆಳಗಾವಿ ಜಿಲ್ಲಾ ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ ನ್ಯಾಯಾಲಯ (POCSO Court) ಆದೇಶಿಸಿದೆ.
ರಾಯಬಾಗ ತಾಲೂಕಿನ ಪರಮಾನಂದವಾಡಿ ಗ್ರಾಮದ ರಾವಸಾಹೇಬ ಮಿರ್ಜಿಗೆ ಗಲ್ಲು ಶಿಕ್ಷೆ ಹಾಗೂ 10 ಲಕ್ಷ ರೂ. ದಂಡ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. 2019 ಸೆಪ್ಟೆಂಬರ್ 10 ರಂದು ಬೆಳಗಾವಿ ಜಿಲ್ಲೆಯ ಕುಡಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕಿಗೆ ಚಾಕಲೇಟ್ ಆಮಿಷ ತೋರಿಸಿ ಅತ್ಯಾಚಾರ ಮಾಡಿ ಕತ್ತು ಹಿಸುಕಿ ಕೊಲೆಗೈದು ಬಾವಿಗೆ ಎಸೆದಿದ್ದ. ಇದನ್ನೂ ಓದಿ: ಕುದಿಯುತ್ತಿದ್ದ ಹಾಲಿನ ಪಾತ್ರೆಗೆ ಬಿದ್ದು ಒಂದೂವರೆ ವರ್ಷದ ಮಗು ಸಾವು
ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿ ನ್ಯಾಯಾಧೀಶರಾದ ಸಿ.ಎಮ್ ಪುಷ್ಪಲತಾ ಅವರು ಶಿಕ್ಷೆ ಪ್ರಕಟಿಸಿದ್ದಾರೆ.